ಬೆಂಗಳೂರು: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಯತ್ನಿಸುತ್ತಿದ್ದ ಆಯನೂರು ಮಂಜುನಾಥ್ ಅವರಿಗೆ ಜಿಲ್ಲಾ ಘಟಕ ಆಘಾತ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿರುವ ಗಂಭೀರ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯರಾಗಿರುವ ಆಯನೂರು ಮಂಜುನಾಥ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಘಟಕವು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ದೂರು ಸಲ್ಲಿಸಿದೆ.
ಇದನ್ನೂ ಓದಿ: ಕರ್ನಾಟಕ ಚುನಾವಣೆ: 40ರಿಂದ 45 ಅಭ್ಯರ್ಥಿಗಳ ಕಣಕ್ಕಿಳಿಸಲು 'ಪವಾರ್' ಪ್ಲಾನ್
ಆಯನೂರು ಮಂಜುನಾಥ್ ವಿವಿಧ ಹೇಳಿಕೆಗಳನ್ನು ಸಾರ್ವಜನಿಕವಾಗಿ ಹಾಗೂ ಪತ್ರಿಕಾಗೋಷ್ಠಿ ನಡೆಸಿ ನೀಡಿದ್ದು, ಇದರಿಂದ ಜಿಲ್ಲಾ ಬಿಜೆಪಿಗೂ ಅಗೌರವ ಹಾಗೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತಂದಿದ್ದಾರೆ. ಈ ಬಗ್ಗೆ ಶಿವಮೊಗ್ಗ ನಗರ ಅಧ್ಯಕ್ಷ ಎನ್.ಕೆ.ಜಗದೀಶ್ ಪತ್ರದ ಮೂಲಕ ನನ್ನ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಆಯನೂರು ಮಂಜುನಾಥ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಪತ್ರದ ಮೂಲಕ ದೂರು ನೀಡಿದ್ದಾರೆ.
ಇದನ್ನೂ ಓದಿ: ಕಲಬುರಗಿ ಗ್ರಾಮೀಣದಲ್ಲಿ ಮತ್ತಿಮಡು ಕಟ್ಟಿ ಹಾಕಲು ಕಾಂಗ್ರೆಸ್ ಯತ್ನ: ಕುತೂಹಲ ಕೆರಳಿಸಿದ ಕೈ ಟಿಕೆಟ್ ಹಂಚಿಕೆ
"ವಿಧಾನ ಪರಿಷತ್ ಸದಸ್ಯರಾಗಿರುವ ಆಯನೂರು ಮಂಜುನಾಥ್ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ನಗರದ ಪ್ರಮುಖ ವೃತ್ತಗಳಲ್ಲಿ ನಮ್ಮ ಪಕ್ಷದ ವಿರುದ್ಧ ಮತ್ತು ನಾಯಕರ ವಿರುದ್ಧ ಅವಹೇಳನಕಾರಿ ಫ್ಲೆಕ್ಸ್ಗಳನ್ನು ಹಾಕಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದ್ದಾರೆ. ಪಕ್ಷಕ್ಕೆ ಅದರದ್ದೇ ಆದ ಒಂದು ರೀತಿಯ ನಿಯಮ ಇದೆ. ಅದನ್ನು ಮೀರಿ ಸುದ್ದಿಗೋಷ್ಠಿ ನಡೆಸಿ ಉದ್ಧಟತನದ ಮಾತುಗಳನ್ನು ಆಡಿ ಪಕ್ಷಕ್ಕೆ ಕೆಟ್ಟ ಹೆಸರು ಬರುವಂತೆ ಮಾಡಿದ್ದಾರೆ. ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೇ ಹೇಳಿ ಪಕ್ಷ ದ್ರೋಹವೆಸಗಿದ್ದಾರೆ" ಎಂದು ಪತ್ರದಲ್ಲಿ ನಗರಾಧ್ಯಕ್ಷ ಜಗದೀಶ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪರ ಪುತ್ರ ಎಂಬ ಕಾರಣಕ್ಕೆ ಹೈಕಮಾಂಡ್ ನನಗೆ ಟಿಕೆಟ್ ನೀಡಿಲ್ಲ: ವಿಜಯೇಂದ್ರ
ನಗರದಲ್ಲಿ ನಡೆದ ಕೋಮುಗಲಭೆಗಳ ಹಿನ್ನೆಲೆಯಲ್ಲಿ 144 ಸೆಕ್ಷನ್ ಹಾಕಲು ಬಿಜೆಪಿಯೇ ಕಾರಣ. ಬಿಜೆಪಿ ನಾಯಕರೇ ಕಾರಣವೆಂದು ಹೇಳುವ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಅಪಮಾನ ಮಾಡುವ ರೀತಿ ಅವರ ನಡವಳಿಕೆ ಅಕ್ಷಮ್ಯ ಅಪರಾಧವಾಗಿದೆ. ಕೋರ್ ಕಮಿಟಿಯ ಒಟ್ಟು ನಿರ್ಣಯದಂತೆ ಈ ಪಕ್ಷ ದ್ರೋಹಿ ಆಯನೂರು ಮಂಜುನಾಥ್ ವಿರುದ್ಧ ಸೂಕ್ತ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ನಗರ ಸಮಿತಿ ಆಗ್ರಹಿಸುತ್ತದೆ ಎಂದು ಬಿಜೆಪಿ ನಗರ ಘಟಕದಿಂದ ಜಿಲ್ಲೆ ಘಟಕಕ್ಕೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಅಸಮಾಧಾನ ಇಲ್ಲ: ಸತೀಶ್ ಜಾರಕಿಹೊಳಿ