ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ರೈತ ಹೋರಾಟ ಒಕ್ಕೂಟ ಕೇಂದ್ರ ಸಮಿತಿ ನವಲಗುಂದ ಸಂಘಟನೆಯು ಪ್ರತಿಭಟನೆಗೆ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಯಿಂದ ಬಂದ ರೈತರು ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಬೃಹತ್ ಮೆರವಣಿಗೆ ನಡೆಸಲಿದ್ದಾರೆ.
ಷರತ್ತು ರಹಿತ ಸಾಲಮನ್ನಾ ಸೇರಿದಂತೆ ರೈತೋತ್ಸವ ಪ್ರೊ. ಎಂ. ಡಿ ನಂಜುಂಡಸ್ವಾಮಿಯವರ 83ನೇ ಜಯಂತ್ಯುತ್ಸವದ ಪ್ರಯುಕ್ತ ರೈತರ ಹಲವು ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ರೈತರು ಅಗ್ರಹಿಸಿದ್ದಾರೆ.
ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ ಅಭಿಪ್ರಾಯ ಆಶೋತ್ತರಗಳನ್ನು ಸರ್ಕಾರ ಈಡೇರಿಸಿಲ್ಲ. ಹೀಗಾಗಿ ಜಯಂತಿ ದಿನದಂದು ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ರಾಜ್ಯಾಧ್ಯಕ್ಷ ಲಕ್ಷ್ಮೀ ನಾರಾಯಣ ಗೌಡ ತಿಳಿಸಿದ್ದಾರೆ.
ರೈತರ ಪ್ರಮುಖ ಬೇಡಿಕೆಗಳು
- ಷರತ್ತು ಇಲ್ಲದ ಸಂಪೂರ್ಣ ಸಾಲಮನ್ನಾ
- ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ
- ರೈತರು ಬೆಳೆದ ಬೆಳೆಗೆ ಮಾರ್ಕೆಟಿಂಗ್ ಆಗಬೇಕು
- ಆಮದು ರಫ್ತು ರೀತಿಯನ್ನು ತಡೆಗಟ್ಟಬೇಕು ಎನ್ನುವುದು ಸೇರಿದಂತೆ ಒಟ್ಟು 30 ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.