ETV Bharat / state

ಇಸ್ರೇಲ್, ಪ್ಯಾಲೆಸ್ತೈನ್​ನಲ್ಲಿ ಶಾಂತಿ ನೆಲೆಸಬೇಕೆಂದು ಆಗ್ರಹ: ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ - ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು ಬಸವರಾಜ್

ಇಸ್ರೇಲ್ ಮತ್ತು ಪ್ಯಾಲೆಸ್ತೈನ್​ನಲ್ಲಿ ಶಾಂತಿ ನೆಲೆಸಬೇಕೆಂದು ಎಡಪಕ್ಷಗಳ ನೂರಾರು ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ
ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ
author img

By ETV Bharat Karnataka Team

Published : Oct 21, 2023, 6:47 AM IST

ಇಸ್ರೇಲ್ ಮತ್ತು ಪ್ಯಾಲೆಸ್ತೈನ್​ನಲ್ಲಿ ಶಾಂತಿ ನೆಲೆಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ

ಬೆಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೈನ್​ನಲ್ಲಿ ಶಾಂತಿ ನೆಲೆಸಬೇಕೆಂದು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್​ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಎಡಪಕ್ಷಗಳ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

“ಯುದ್ದ ಬೇಡ, ಶಾಂತಿ ಬೇಕು” ಎಂಬ ಘೋಷವಾಕ್ಯದೊಂದಿಗೆ ಇಸ್ರೇಲ್ ಮತ್ತು ಪ್ಯಾಲೆಸ್ತೈನ್​ನಲ್ಲಿ ಶಾಂತಿ ನೆಲೆಸಲಿ ಎಂಬ ಆಗ್ರಹದೊಂದಿಗೆ ಸಿಪಿಐಎಂ, ಸಿಪಿಐ, ಸಿಪಿಐಎಂಎಲ್ ಸೇರಿದಂತೆ ಎಡಪಕ್ಷಗಳ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ನಂತರ ಆಡುಗೋಡಿ ಪೊಲೀಸ್ ಠಾಣೆಯ ಬಯಲು ಜಾಗದಲ್ಲಿ ಇರಿಸಿದರು. ಈ ವೇಳೆ ಪ್ರತಿಭಟನಾಕಾರರು ಆಡುಗೋಡಿ ಪೊಲೀಸ್ ಠಾಣೆಯ ಬಯಲು ಜಾಗದಲ್ಲೂ ಯುದ್ಧ ವಿರೋಧಿ ಕವಿತೆಗಳ ಮೂಲಕ ಆಕ್ರೋಶ ಹೊರಹಾಕಿದ್ದು, ಇಸ್ರೇಲ್ ಮತ್ತು ಪ್ಯಾಲೆಸ್ತೈನ್​ನಲ್ಲಿ ಶಾಂತಿ ನೆಲಸಲಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್, ಇಸ್ರೇಲ್ ದಶಕಗಳಿಂದ ಪ್ಯಾಲೆಸ್ತೈನ್ ಜನರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಾ ಬಂದಿದೆ. ನಾಗರಿಕರನ್ನು ನಿರ್ವಸತಿಕರನ್ನಾಗಿ ಮಾಡಿ ಪ್ಯಾಲೆಸ್ತೈನ್ ದೇಶವನ್ನು ಭೂಪಟದಿಂದ ಅಳಿಸಿ ಹಾಕಿದೆ. ಇಂತಹ ಸಂದರ್ಭದಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿರುವ ಅಲ್ಲಿನ ನಾಗರಿಕರು ಕೆಲವು ಪ್ರದೇಶಗಳಲ್ಲಿ ಗುಲಾಮರಾಗಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹಮಾಸ್ ಎನ್ನುವ ಸಂಘಟನೆಯನ್ನು ಗುರಿಯಾಗಿಟ್ಟುಕೊಂಡು ಇಡೀ ಪ್ಯಾಲೆಸ್ತೈನ್ ಜನಾಂಗದ ಮೇಲೆ ದಾಳಿ ಮಾಡುತ್ತಿರುವ ಇಸ್ರೇಲ್ ಪ್ರಭುತ್ವದ ನೀತಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು ಬಸವರಾಜ್, ಸಿಪಿಐಎಂಎಲ್ ಮುಖಂಡ ಅಪ್ಪಣ್ಣ ಹಾಗೂ ಎಡಪಕ್ಷಗಳ ನಾಯಕರಾದ ಪ್ರತಾಪಸಿಂಹ, ಮಂಜುನಾಥ್, ದೇವಿ, ಕೆ. ಮಹಾಂತೇಶ್ ಹುಳ್ಳಿ ಉಮೇಶ್, ನವೀನ್ ಕುಮಾರ್, ಪ್ರಭಾ ಬೆಳವಂಗಲ, ಭೀಮನಗೌಡ ಸೇರಿದಂತೆ ವಿವಿಧ ಪಕ್ಷಗಳ ನೂರಾರು ಕಾರ್ಯಕರ್ತರಿದ್ದರು.

ಇಸ್ರೇಲ್​​ನಿಂದ ತಾಯ್ನಾಡಿಗೆ ಬಂದ ಬೆಳಗಾವಿ ಯುವಕ: ಇಸ್ರೇಲ್ ಹಾಗೂ ಹಮಾಸ್ ಯುದ್ಧದ ಭೀತಿಯಿಂದಾಗಿ ಇಸ್ರೇಲ್​ನಲ್ಲಿರುವ ಭಾರತೀಯರನ್ನು ತವರಿಗೆ ಕರೆತರಲಾಗುತ್ತಿದೆ. ಭಾರತೀಯ ಪ್ರಜೆಗಳ ಸುರಕ್ಷತಾ ದೃಷ್ಟಿಯಿಂದ ಕೇಂದ್ರ ಸರ್ಕಾರದ ಆಪರೇಷನ್ ಅಜಯ್ ಕಾರ್ಯಾಚರಣೆ ಮುಂದುವರಿಸಿದ್ದು, ಅದರ ನೆರವಿನಿಂದ ತಾಯ್ನಾಡಿಗೆ ಮರಳುತ್ತಿದ್ದಾರೆ. ಅಕ್ಟೋಬರ್ 17 ರಂದು ಬೆಳಗಾವಿಯ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರು ಗ್ರಾಮದ ಮಹಾವೀರ ಹಲಕರ್ಣಿ ಎಂಬ ಯುವಕ ಇಸ್ರೇಲ್​ನಿಂದ ತಮ್ಮೂರಿಗೆ ಮರಳಿ ಬಂದಿದ್ದಾರೆ. ಇಸ್ರೇಲ್​​ ದೇಶದ ಬೀರಶೇವಾ ಪ್ರದೇಶದ ಬೆನ್ ಗೋರಿನ್ ವಿಶ್ವವಿದ್ಯಾಲಯದಲ್ಲಿ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಯಾಗಿ ವಿದ್ಯಾರ್ಜನೆ ಮಾಡುತ್ತ, ನೆಲೆ ನಿಂತಿದ್ದರು. ಸದ್ಯ ಯುದ್ಧ ನಡೆಯುತ್ತಿರುವ ಹಿನ್ನೆಲೆ ಭಾರತ ದೇಶಕ್ಕೆ ವಾಪಸ್​ ಬಂದಿದ್ದಾರೆ.

ಇಸ್ರೇಲ್​​ ಯುದ್ಧದ ಭಯಾನಕತೆ ಬಿಚ್ಚಿಟ್ಟ ಮಹಾವೀರ : ಸದ್ಯ ಇಸ್ರೇಲ್​ ದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಭಾರತ ದೇಶಕ್ಕೆ ಮರಳಿ ಬಂದಿದ್ದು ಸಂತಸ ತಂದಿದೆ. ಕೇಂದ್ರ ಸರ್ಕಾರ ಆಪರೇಷನ್ ಅಜಯ ಮಾಡಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ ಅವರು, ಆಪರೇಷನ್ ಅಜಯ್ ಸಕ್ಸಸ್ ಆಗಿದೆ. ಕೇಂದ್ರ ಸರ್ಕಾರ ಎಲ್ಲರನ್ನೂ ಸ‌ಂಪರ್ಕ ಮಾಡಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಇಸ್ರೇಲ್​​ನಿಂದ ತಾಯ್ನಾಡಿಗೆ ಬಂದ ಬೆಳಗಾವಿ ಯುವಕ: ಯುದ್ಧದ ಭಯಾನಕತೆ ಬಿಚ್ಚಿಟ್ಟ 'ಮಹಾವೀರ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.