ETV Bharat / state

ಸರ್ಕಾರಿ ನೌಕರರು, ವಕೀಲರ ಸಂಘಗಳಿಂದ ಸಿಎಂಗೆ ವಿವಿಧ ಬೇಡಿಕೆ ಸಲ್ಲಿಕೆ

author img

By

Published : Jun 29, 2023, 10:41 PM IST

ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ನೇತೃತ್ವದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

demands-submitted-to-the-cm-by-government-employees-and-lawyers-delegation
ಸರ್ಕಾರಿ ನೌಕರರು ಹಾಗೂ ವಕೀಲರ ಸಂಘಗಳಿಂದ ಸಿಎಂಗೆ ವಿವಿಧ ಬೇಡಿಕೆ ಸಲ್ಲಿಕೆ

ಬೆಂಗಳೂರು : ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳ ಕುರಿತಂತೆ ಚರ್ಚಿಸಿ ಮನವಿ ಪತ್ರ ಸಲ್ಲಿಸಿತು. ಮುಖ್ಯಮಂತ್ರಿಗಳ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ನಿಯೋಗವು ಸುದೀರ್ಘ ಸಮಾಲೋಚನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದು, ವಕೀಲರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ವಿಶೇಷ ಅನುದಾನಗಳನ್ನು ಬಿಡುಗಡೆ ಮಾಡುವಂತೆ ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸುವ ಭರವಸೆ ಕೊಟ್ಟಿದ್ದಾರೆ.

ಸರ್ಕಾರಿ ನೌಕರರ ಸಂಘ ಭೇಟಿ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ಸಂಘದ ಪ್ರಮುಖರು ಭೇಟಿ ನೀಡಿದ್ದು ಅಭಿನಂದನೆ ಸಲ್ಲಿಸುವ ಜೊತೆಗೆ ಹಲವು ಬೇಡಿಕೆಗಳನ್ನು ಸಹ ಮುಂದಿಟ್ಟಿದ್ದಾರೆ.

demands-submitted-to-the-cm-by-government-employees-and-lawyers-delegation
ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಭೇಟಿ

ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ ಸೌಲಭ್ಯ, ಬಸ್‌ ಪ್ರಯಾಣದಲ್ಲಿ ರಿಯಾಯಿತಿ ನೀಡುವುದು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಬೇಕು. ಇಲ್ಲವಾದರೆ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ನಗದು ರಹಿತ ಆರೋಗ್ಯ ಸೇವೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಲ್ಲಿ 70ರಿಂದ 80 ವರ್ಷ ವಯೋಮಿತಿ ಮೀರಿದವರಿಗೆ ಮೂಲ ಪಿಂಚಣಿಯಲ್ಲಿ ಅನುಕ್ರಮವಾಗಿ ಶೇ 10 ರಿಂದ ಶೇ 15 ರಷ್ಟು ಹೆಚ್ಚುವರಿ ಪಿಂಚಣಿ ನೀಡಬೇಕು. ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಕೂಡಲೇ 7ನೇ ವೇತನ ಆಯೋಗವನ್ನು ರಚನೆ ಮಾಡಬೇಕು. ಕೆಎಸ್‌ಆರ್‌ಟಿಸಿ ಹಾಗೂ ನಗರ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರದಲ್ಲಿ ಕ್ರಮವಾಗಿ ಶೇ 25 ರಿಂದ ಶೇ 50 ರಷ್ಟು ರಿಯಾಯಿತಿ ನೀಡಬೇಕು. ಮೃತಪಟ್ಟರೆ ಪಕ್ಕದ ರಾಜ್ಯಗಳಲ್ಲಿರುವಂತೆ ಶವ ಸಂಸ್ಕಾರಕ್ಕೆ ₹10,000 ಕೊಡಿಸುವ ವ್ಯವಸ್ಥೆ ಮಾಡಬೇಕು. ನಿವೃತ್ತ ನೌಕರರ ಸಂಘಗಳಿಗೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರಾತಿಗೆ ಕ್ರಮವಹಿಸಬೇಕು ಹಾಗೂ ನಿವೃತ್ತ ನೌಕರರಿಗೆ ಆದಾಯ ತೆರಿಗೆಯಿಂದ ರಿಯಾಯಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಭೇಟಿ ಸಂದರ್ಭ ಸರ್ಕಾರಿ ನೌಕರರ ಸಂಘದ ಮುಖಂಡರು ಬೇಡಿಕೆ ಇಟ್ಟಿದ್ದಾರೆ.

ಇವರ ಪ್ರಸ್ತಾಪಕ್ಕೂ ಸಹಮತ ವ್ಯಕ್ತಪಡಿಸಿರುವ ಸಿಎಂ ಆದಷ್ಟು ಬೇಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಚಿಂತನೆ ಮಾಡುತ್ತೇನೆ. ಸಾಧ್ಯವಾದರೆ ಬಜೆಟ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವ ಪ್ರಯತ್ನ ಮಾಡುತ್ತಿದ್ದು, ಇಲ್ಲವಾದರೆ ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸುವುದಾಗಿ ಭರವಸೆ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ.

ಇದನ್ನೂ ಓದಿ : 'ಹುದ್ದೆಗಳ ದುರ್ಬಳಕೆ, ಸರ್ಕಾರಕ್ಕೆ ಕೋಟಿಗಟ್ಟಲೆ ನಷ್ಟ': 25 ವೈದ್ಯರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಪ್ರಸ್ತಾವನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.