ETV Bharat / state

ಕೊರೊನಾ ಭೀತಿ: ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದ ಆರೋಗ್ಯ ಇಲಾಖೆ

author img

By

Published : Mar 13, 2020, 9:34 PM IST

Updated : Mar 13, 2020, 9:42 PM IST

ದೇಶದೆಲ್ಲೆಡೆ ಕೊರೊನಾ ಸೋಂಕಿನ ಭೀತಿ ಆವರಿಸಿದೆ. ಈ ಹಿನ್ನೆಲೆ ಇಂದು ರಾಜ್ಯದಲ್ಲಿ ಆರೋಗ್ಯ ಇಲಾಖೆ ಕೊರೊನಾ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಹೊಸದಾಗಿ ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂಬುದು ಖಾತ್ರಿಯಾಗಿದೆ.

department-of-health-released-corona-bulletin
ಕೊರೊನಾ ಬುಲೆಟಿನ್ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು: ಇಂದು‌ 80 ಜನರ ಕೊರೊನಾ ಪರೀಕ್ಷಾ ವರದಿಗಳು ನೆಗೆಟಿವ್ ಬಂದಿದ್ದು, ಹೊಸದಾಗಿ ಯಾರಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಕೊರೊನಾ ಬುಲೆಟಿನ್ ಬಿಡುಗಡೆಗೊಳಿಸಿದೆ.

ಕಲಬುರಗಿಯಲ್ಲಿ ಮೃತಪಟ್ಟಿ ವ್ಯಕ್ತಿ ಸೇರಿದಂತೆ 6 ವರದಿಗಳು ಮಾತ್ರ ಕೊರೊನಾ ಪಾಸಿಟಿವ್ ಬಂದಿದ್ದು, ಮೃತ ವ್ಯಕ್ತಿ ಹೊರತುಪಡಿಸಿ ಉಳಿದ ಐವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಇಂದು ಹೊಸದಾಗಿ‌ 120 ಜನರನ್ನು ಅವಲೋಕನೆಗಾಗಿ ಪಟ್ಟಿ ಮಾಡಿದ್ದು, ಈವರೆಗೆ ಅವಲೋಕನೆಗೆ ಒಳಪಟ್ಟವರ ಸಂಖ್ಯೆ 1345ಕ್ಕೆ ತಲುಪಿದೆ.

ಇಂದು 108 ಜನರನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಿದ್ದು, ಇಲ್ಲಿಯವರೆಗೆ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಿದವರ ಸಂಖ್ಯೆ 1012ಕ್ಕೆ ತಲುಪಿದೆ. ಆಸ್ಪತ್ರೆಗಳಲ್ಲಿ ಐಸೋಲೇಷನ್ ನಲ್ಲಿ ಇಂದು‌ 19 ಜನರನ್ನು ಇರಿಸಿದ್ದು, ಇಲ್ಲಿಯವರೆಗೆ 32 ಜನರನ್ನು ಐಸೋಲೇಷನ್ ನಲ್ಲಿ ಇರಿಸಿದಂತಾಗಿದೆ.

ಇಂದು 60 ಜನರ ಮಾದರಿ ಸಂಗ್ರಹ ಮಾಡಿದ್ದು‌, ಈವರೆಗೆ ಒಟ್ಟು 639 ಮಾದರಿ ಸಂಗ್ರಹಿಸದಂತಾಗಿದೆ. ಇಂದು 80 ವರದಿಗಳ ಸೇರಿ ಈವರೆಗೆ 540 ವರದಿಗಳು ನೆಗೆಟಿವ್ ಬಂದಿವೆ. ಇಂದಿನ ಯಾವುದೇ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 7, ಇತರೆ ಆಸ್ಪತ್ರೆಯಲ್ಲಿ 2, ಹಾಸನದಲ್ಲಿ ‌4, ದಕ್ಷಿಣ ಕನ್ನಡದಲ್ಲಿ 7, ಬಳ್ಳಾರಿ 1, ಚಿಕ್ಕಮಗಳೂರು 1, ಕಲಬುರಗಿ 4, ಕೊಡಗು 1 ಮತ್ತು ಉಡುಪಿಯಲ್ಲಿ 5 ಜನರನ್ನು‌ ಐಸೋಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಐವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. 19 ಜನರನ್ನು ದಾಖಲಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈವರೆಗೆ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಬಂದರುಗಳಲ್ಲಿ ಒಟ್ಟು‌ 1,05,292 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದ್ದು‌, ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಯಾವುದೇ ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸುವ ಮೂಲಕ ಆರೋಗ್ಯ ಇಲಾಖೆಗೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.

Last Updated : Mar 13, 2020, 9:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.