ETV Bharat / state

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾಧನಾ ವರದಿ ಬಿಡುಗಡೆ: ಸಚಿವೆ ಜೊಲ್ಲೆ - Women and Child Development

ನನಗೆ ಸಿಎಂ ಕೊಟ್ಟ ಇಲಾಖೆಯನ್ನ ಒಂದು ವರ್ಷದಿಂದ ಯಶಸ್ವಿಯಾಗಿ ನಿರ್ವಹಿಸಿದ್ದೇನೆ, ಈ ಇಲಾಖೆ ಬಗ್ಗೆ ನನಗೆ ಗೌರವ ಇದೆ. ಪೋಷಣಾ ಅಭಿಯಾನ ಮೊದಲ ಬಾರಿಗೆ ಜಾರಿ ಮಾಡಿದ್ದು ನಾವೇ ಎನ್ನುತ್ತಾ ಅಧಿಕಾರ ವಹಿಸಿಕೊಂಡ ನಂತರ ಇಲಾಖೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು.

ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ
author img

By

Published : Jan 7, 2021, 1:18 AM IST

ಬೆಂಗಳೂರು: ರಾಜ್ಯದಲ್ಲಿ 4,165 ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅನುಮತಿ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಮುಖ್ಯವಾಗಿ ಬೆಂಗಳೂರು ನಗರದಲ್ಲಿ 2,000 ಅಂಗನವಾಡಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮುಖ ಸಾಧನೆಗಳ ಮಾಹಿತಿಯನ್ನು ಬಿಡುಗಡೆಗೊಳಿಸಿದರು. ನನಗೆ ಸಿಎಂ ಕೊಟ್ಟ ಇಲಾಖೆಯನ್ನ ಒಂದು ವರ್ಷದಿಂದ ಯಶಸ್ವಿಯಾಗಿ ನಿರ್ವಹಿಸಿದ್ದೇನೆ, ಈ ಇಲಾಖೆ ಬಗ್ಗೆ ನನಗೆ ಗೌರವ ಇದೆ. ಪೋಷಣಾ ಅಭಿಯಾನ ಮೊದಲ ಬಾರಿಗೆ ಜಾರಿ ಮಾಡಿದ್ದು ನಾವೇ ಎನ್ನುತ್ತಾ ಅಧಿಕಾರ ವಹಿಸಿಕೊಂಡ ನಂತರ ಇಲಾಖೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಸಚಿವರು ಬಿಡುಗಡೆ ಮಾಡಿದ ಇಲಾಖಾ ಪ್ರಗತಿ ವರದಿ:

ಪೋಷಣ್ ಅಭಿಯಾನ: ಅಂಗನವಾಡಿಗಳಲ್ಲಿ ಮಕ್ಕಳ ಹಾಜರಾತಿ, ದಾಖಲಾತಿ ವಿವರಗಳನ್ನು ದಾಖಲಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಒಟ್ಟು 72,049 ಸ್ಮಾರ್ಟ್ ಫೋನ್ ವಿತರಿಸಲಾಗಿದೆ. ದೈನಂದಿನ ಕಾರ್ಯಚಟುವಟಿಕೆಗಳ್ನು ಸ್ಮಾರ್ಟ್ ಫೋನ್‍ಗಳಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಸುವ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ನಮ್ಮ ರಾಜ್ಯವು 6ನೇ ಸ್ಥಾನದಲ್ಲಿದೆ.

ಪೌಷ್ಟಿಕ ಕೈತೋಟ: ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಅಂಗನವಾಡಿ ಆವರಣಗಳಲ್ಲಿ ಕೈತೋಟ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ತರಕಾರಿ, ಹಣ್ಣುಗಳನ್ನು ಬೆಳೆಯಲು ಪ್ರೋತ್ಸಾಹಿಸಿದೆ. ಪೋಷಣ್ ಅಭಿಯಾನ ಯೋಜನೆಯಡಿ ಸಮುದಾಯ ಆಧಾರಿತ ಚಟುವಟಿಕೆಗಳಡಿ ಮೂರು ಲಕ್ಷಕ್ಕೂ ಹೆಚ್ಚು ಗರ್ಭಿಣಿಯರಿಗೆ ಸರ್ಕಾರದ ವತಿಯಿಂದ ಅಂಗನವಾಡಿಗಳಲ್ಲಿ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಆರೋಗ್ಯ ಮತ್ತು ಪೌಷ್ಟಿಕತೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ.

ಪ್ರಧಾನ ಮಂತ್ರಿ ಮಾತೃ ವಂದನಾ; ಈ ಯೋಜನೆಯಡಿ 26ನೇ ಸ್ಥಾನದಲ್ಲಿದ್ದ ನಮ್ಮ ರಾಜ್ಯವು 5ನೇ ಸ್ಥಾನಕ್ಕೆ ಬಂದಿರುತ್ತದೆ. ಈವರೆಗೆ ಒಟ್ಟು 1208524 ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆದಿದ್ದು, ಶೇ. 110 ರಷ್ಟು ಸಾಧನೆ ಮಾಡಲಾಗಿದೆ. ಈ ಯೋಜನೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ರೂ. 5000/- ಸಹಾಯ ಧನವನ್ನು 3 ಕಂತುಗಳಲ್ಲಿ ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತದೆ.

ಗ್ರಾಮಾಂತರ ಪ್ರದೇಶಗಳಲ್ಲಿ ಕೆ.ಆರ್.ಐ.ಡಿ.ಎಲ್ ಸಂಸ್ಥೆಯಿಂದ ಒಟ್ಟು 1927 ಅಂಗನವಾಡಿ ಕೇಂದ್ರಗಳಿಗೆ ಸೋಲಾರ್ ದೀಪ ಹಾಗೂ ಫ್ಯಾನ್ ಅಳವಡಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು,ಕಾರ್ಯಾದೇಶವನ್ನು ನೀಡಲು ಇಲಾಖಾ ವತಿಯಿಂದ ಸಹಮತಿ ನೀಡಿ, ಪತ್ರ ಬರೆಯಲಾಗಿದೆ.

2019-20ನೇ ಸಾಲಿನಲ್ಲಿ ಮಳೆ ಹಾನಿಯಿಂದ ಶಿಥಿಲಗೊಂಡ 18 ಜಿಲ್ಲೆಗಳಲ್ಲಿನ 842 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಇದರಲ್ಲಿ 2020-21ರ 1ನೇ ಸಾಲಿನಲ್ಲಿ ಒಟ್ಟು 306 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಅನುದಾನವನ್ನು ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮರುಬಿಡುಗಡೆ ಮಾಡಿದೆ.

2019-20ನೇ ಸಾಲಿನಲ್ಲಿ ರಾಜ್ಯದಲ್ಲಿ ನಗರ ಪ್ರದೇಶಗಳಲ್ಲಿರುವ 1,000 ಸ್ವಂತ ಮತ್ತು ಸರ್ಕಾರಿ ಅಂಗನವಾಡಿ ಕಟ್ಟಡಗಳ ದುರಸ್ಥಿಗೆ ರೂ.10 ಕೋಟಿಗಳ ಅನುದಾನ ಬಿಡುಗಡೆ ಮಾಡಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ತಡೆ ಕರ್ತವ್ಯ ನಿರತ ಒಟ್ಟು 25 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು ಮರಣ ಹೊಂದಿದ್ದು ಇವರಿಗೆ ತಲಾ ರೂ.30 ಲಕ್ಷಗಳ ಮರಣ ಪರಿಹಾರ ಮಂಜೂರಾತಿಗಾಗಿ ಕ್ರಮವಹಿಸಲಾಗಿದೆ.

ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆಗ್ರಿಕ್ರಾಪ್ ಕಂಪನಿ ಮುಖಾಂತರ ರೂ 1.80 ಕೋಟಿ ವೆಚ್ಚದಲ್ಲಿ ಬಿಜಾಪುರ, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪೌಷ್ಠಿಕಾಂಶಯುಕ್ತ ಚಾಕಲೇಟ್ ವಿತರಿಸಲಾಗಿದೆ. ಈ ಪೌಷ್ಟಿಕಾಂಶ ಚಾಕಲೇಟ್ ಸೇವಿಸಿದ ಮಕ್ಕಳಲ್ಲಿ ಅಪೌಷ್ಟಿಕತೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ.

ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.10,000/- ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.6,250/- ಮತ್ತು ಅಂಗನವಾಡಿ ಸಹಾಯಕಿಯರಿಗೆ ರೂ.5250/- ಗೌರವ ಧನವನ್ನು ವಿತರಿಸಲಾಗುತ್ತಿದೆ.

ಲಾಕ್ಡೌನ್ ಸಮಯದಲ್ಲಿ 41 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಫಲಾನುಭವಿಗಳ ಮನೆ ಬಾಗಿಲಿಗೆ ಪೂರಕ ಪೌಷ್ಟಿಕ ಆಹಾರವನ್ನು ತಲುಪಿಸಿ ಆಪ್ತ ಸಮಾಲೋಚನೆ ಮೂಲಕ ನಿರಂತರ ಬೆಂಬಲ ನೀಡಲಾಗಿದೆ. 1,28,491 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಾಕಿ ಇದ್ದ “ಪರಿಷ್ಕೃತ ಗೌರವ ಧನ” 98.30 ಕೋಟಿ ಬಿಡುಗಡೆಗೊಳಿಸಲಾಗಿದೆ.

ಸ್ತ್ರೀಶಕ್ತಿ ಯೋಜನೆ

ಸುತ್ತು ನಿಧಿ : 2019-20ನೇ ಸಾಲಿನಲ್ಲಿ 1420 ಪರಿಶಿಷ್ಟ ಜಾತಿಯ ಗುಂಪುಗಳಿಗೆ ತಲಾ ರೂ.5,000/-ರಂತೆ ಒಟ್ಟು ರೂ.71.00 ಲಕ್ಷಗಳ ಸುತ್ತುನಿಧಿಯನ್ನು ಹಾಗೂ 2600 ಪರಿಶಿಷ್ಟ ಪಂಗಡಗಳ ಗುಂಪುಗಳಿಗೆ ತಲಾ ರೂ.5,000/-ರಂತೆ ಒಟ್ಟು ರೂ.130.00 ಲಕ್ಷಗಳ ಸುತ್ತುನಿಧಿಯನ್ನು ನೀಡಲಾಗಿದೆ. 3418 ಪರಿಶಿಷ್ಟ ಪಂಗಡಗಳ ಗುಂಪುಗಳಿಗೆ ಕಿಟ್ ಸಾಮಗ್ರಿ ಹಾಗೂ ದಾಖಲಾತಿ ನಿರ್ವಹಣೆ ತರಬೇತಿ ನೀಡಲು ರೂ.64.54 ಲಕ್ಷಗಳನ್ನು ನೀಡಲಾಗಿದೆ. 2020-21ನೇ ಸಾಲಿನಲ್ಲಿ 430 ಪರಿಶಿಷ್ಟ ಜಾತಿಯ ಗುಂಪುಗಳಿಗೆ ರೂ.21.50 ಲಕ್ಷ ಸುತ್ತುನಿಧಿಯನ್ನು ಬಿಡುಗಡೆಗೊಳಿಸಲಾಗಿದೆ.

ಮಹಿಳಾ ಸಮಾಖ್ಯಾ ಕರ್ನಾಟಕ : 2019-20ನೇ ಸಾಲಿನಲ್ಲಿ ಮಹಿಳಾ ಸಮಾಖ್ಯ ಕರ್ನಾಟಕ ಸಂಸ್ಥೆಯ ವತಿಯಿಂದ ಇಲಾಖೆಯ ಇತರೆ ಕಾರ್ಯಕ್ರಮಗಳ ಜೊತೆ ಎಲ್ಲಾ ಕಾರ್ಯಕ್ರಮಗಳನ್ನು ಕ್ಷೇತ್ರ ಮಟ್ಟದಲ್ಲಿ ಜಾರಿಗೊಳಿಸಲು 2019-20ನೇ ಸಾಲಿನಲ್ಲಿ ರೂ.35 ಕೋಟಿ ಬಿಡುಗಡೆಗೊಳಿಸಲಾಗಿದೆ.

ಸಾಂತ್ವನ: ರಾಜ್ಯದಲ್ಲಿ ಪ್ರಸ್ತುತ 194 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯಡಿಯಲ್ಲಿ 15632 ನೊಂದ ಮಹಿಳೆಯರು ಪ್ರಯೋಜನವನ್ನು ಪಡೆದಿರುತ್ತಾರೆ. 2019-20ನೇ ಸಾಲಿನಲ್ಲಿ ಸಾಂತ್ವನ ಕೇಂದ್ರಗಳ ನಿರ್ವಹಣೆಗಾಗಿ ರೂ. 13.8 ಕೋಟಿ ಬಿಡುಗಡೆ ಮಾಡಲಾಗಿದೆ. 2020-21ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಿಂದ ರೂ.12 ಕೋಟಿ ಪುನರ್ವಿನಿಯೋಗ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುತ್ತಿದೆ.

ಭಾಗ್ಯಲಕ್ಷ್ಮಿ ಯೋಜನೆ: ಕಳೆದ 2 ವರ್ಷಗಳಲ್ಲಿ 2,95,569 ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡುಗಳನ್ನು ವಿತರಿಸಲಾಗಿದೆ.2020-21ನೇ ಸಾಲಿಂದ ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯ ಮೂಲಕ ಅನುಷ್ಠಾನಗೊಳಿಸಲು ಸಚಿವ ಸಂಪುಟದ ಅನುಮೋದನೆ ಪಡೆದು ಆಡಳಿತಾತ್ಮಕ ಅನುಮೋದನೆಯನ್ನು ನೀಡಿಲಾಗಿದೆ. ಇದಕ್ಕಾಗಿ 2020-21ನೇ ಸಾಲಿನಲ್ಲಿ ರೂ.100ಕೋಟಿಗಳ ಅನುದಾನವನ್ನು ಮೀಸಲಿರಿಸಲಾಗಿದೆ.

ಕಳೆದ 07 ವರ್ಷಗಳಿಂದ ಇಲಾಖೆಯಲ್ಲಿ ಬಾಕಿ ಇದ್ದ ಮುಂಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿ ವಿವಿಧ ವೃಂದದ ಅಧಿಕಾರಿ/ಸಿಬ್ಬಂದಿ ವರ್ಗದವರಿಗೆ ಮುಂಬಡ್ತಿ ನೀಡಲಾಯಿತು.ಗ್ರೂಪ್-ಸಿ ಹಾಗೂ ಗ್ರೂಪ್-ಡಿ ವೃಂದವೂ ಸೇರಿದಂತೆ ಒಟ್ಟಾರೆ 600 ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ಮುಂಬಡ್ತಿ ನೀಡಲಾಗಿದೆ.

ಸಮಗ್ರ ಮಕ್ಕಳ ರಕ್ಷಣಾ ಯೋಜನೆ:ಟೋಲ್ ಫ್ರೀ ಸಂಖ್ಯೆ-14499 ಮೂಲಕ ಕರ್ನಾಟಕದಲ್ಲಿ ತೊಂದರೆಯಲ್ಲಿರುವ ಯಾವುದೇ ಮಗುವಿಗೆ ಉಚಿತ ಟೆಲಿ-ಕೌನ್ಸೆಲಿಂಗ್ ಸೌಲಭ್ಯವನ್ನು ನಡೆಸಲಾಗುತ್ತಿದೆ. ಅಕ್ಟೋಬರ್ 2020 ರಲ್ಲಿ ನಡೆದ ಪಿಎಬಿಯಲ್ಲಿ ಭಾರತ ಸರ್ಕಾರದಿಂದ 14 ಮಕ್ಕಳ ಪಾಲನಾ ಸಂಸ್ಥೆಗಳು(6 ಹೊಸ ಸರ್ಕಾರಿ ವಿಶೇಷ ದತ್ತು ಸಂಸ್ಥೆಗಳು, 8 ಇತರ ಮಕ್ಕಳ ಪಾಲನಾ ಸಂಸ್ಥೆಗಳು) ಅನುಮೋದಿಸಲಾಗಿರುತ್ತದೆ. ಭಾರತದಲ್ಲಿ ಮೊದಲ ಬಾರಿಗೆ ಕರ್ನಾಟಕವು ಬೆಂಗಳೂರು ನಗರ ಜಿಲ್ಲೆಯಲ್ಲಿ ಮಂಗಳಮುಖಿ ಮಕ್ಕಳಿಗೆ 2 ಬಾಲಮಂದಿರಗಳನ್ನು ಭಾರತ ಸರ್ಕಾರದಿಂದ ಮಂಜೂರು ಮಾಡಿಸಿಕೊಂಡಿದೆ.

ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಆನ್ ಲೈನ್ ಮೂಲಕ ಜೀವನ ಕೌಶಲ್ಯ ಅಭಿವೃದ್ಧಿ ನೀಡುವ ಉದ್ದೇಶದಿಂದ “ನಾನು ಸಮರ್ಥ” ಎಂಬ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಯಿತು.

ರಾಜ್ಯದಲ್ಲಿ ಒಟ್ಟು 31 ವಿಶೇಷ ದತ್ತು ಸಂಸ್ಥೆಗಳು 24 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. 2020-21ನೇ ಸಾಲಿನಲ್ಲಿ ಡಿಸೆಂಬರ್-2020ರ ಅಂತ್ಯದವರೆಗೆ 145 ಮಕ್ಕಳನ್ನು ಸ್ವದೇಶಿ ಹಾಗೂ 23 ಮಕ್ಕಳನ್ನು ವಿದೇಶಿ ಒಟ್ಟು 168 ಮಕ್ಕಳನ್ನು ದತ್ತು ನೀಡಲಾಗಿರುತ್ತದೆ. ದತ್ತು ಕಾರ್ಯಕ್ರಮಕ್ಕೆ ದೇಶದಲ್ಲಿ ಕರ್ನಾಟಕ ರಾಜ್ಯಕ್ಕೆ ಸತತವಾಗಿ 4ನೇ ಬಾರಿಗೆ ಎರಡನೇ ಸ್ಥಾನ ದೊರೆತಿರುತ್ತದೆ.

2020-21ನೇ ಸಾಲಿಗೆ ವಿಶೇಷ ಪಾಲನಾ ಯೋಜನೆ ಅಡಿಯಲ್ಲಿ ಹೆಚ್.ಐ.ವಿ. ಸೋಂಕಿತ / ಭಾಧಿತ ಮಕ್ಕಳಿಗಾಗಿ ರೂ.15 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, 16,749 ಫಲಾನುಭವಿಗಳಿಗೆ ಈ ಸೌಲಭ್ಯ ಒದಗಿಸಿದೆ.

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ : 20 ರಿಂದ 60 ವರ್ಷದ ವಯೋಮಾನದ ತೀವ್ರತರವಾದ ದೈಹಿಕ ವಿಕಲಚೇತನರ ಕುಟುಂಬದ ವಾರ್ಷಿಕ ವರಮಾನ 2 ಲಕ್ಷಗಳಿಗಿಂತ ಕಡಿಮೆ ಇರುವ ವಿಕಲಚೇತನರಿಗೆ ಅನುಕೂಲವಾಗುವಂತೆ ಜೀವಿತ ಕಾಲದಲ್ಲಿ ಒಂದು ಬಾರಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಒದಗಿಸಲಾಗುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ರೂ.13.30 ಕೋಟಿಗಳ ವೆಚ್ಚದಲ್ಲಿ 1566 ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನಗಳನ್ನು ಖರೀದಿಸಿ ವಿತರಿಸಲಾಗಿದೆ.

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ : ಎಸ್.ಎಸ್.ಎಲ್.ಸಿ ನಂತರ ವ್ಯಾಸಂಗ ಮಾಡುವ ದೃಷ್ಠಿದೋಷವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಪಡೆಯಲು ಅನುಕೂಲವಾಗುವಂತೆ ಮಾತನಾಡುವ (ಟಾಕಿಂಗ್) ಲ್ಯಾಪ್‍ಟಾಪ್‍ಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ರೂ.2.41 ಕೋಟಿಗಳ ವೆಚ್ಚದಲ್ಲಿ 373 ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಸಿ ವಿತರಿಸಲಾಗಿದೆ.

ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ: ಈ ಯೋಜನೆಯಡಿ 138 ಬುದ್ದಿಮಾಂದ್ಯ (ಸೆರಬ್ರಲ್ ಪಾಲ್ಸಿ, ಆಟಿಸಂ), ದೃಷ್ಟಿದೋಷ, ಶ್ರವಣದೋಷವುಳ್ಳ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿರಹಿತ ವಿಶೇಷ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ಶಿಕ್ಷಕ/ಶಿಕ್ಷಕೇತರರ ಗೌರವಧನ ಮಕ್ಕಳ ಪಾಲನಾ ವೆಚ್ಚ ಸೇರಿದಂತೆ ರೂ.53.60 ಕೋಟಿಗಳ ವೆಚ್ಚದಲ್ಲಿ 9655 ವಿಕಲಚೇತನ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸಲಾಗಿದೆ.

ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯರು ಮದುವೆಯಾದಲ್ಲಿ ಪ್ರೋತ್ಸಾಹ ಧನ :ವಿಕಲಚೇತನ ಯುವಕ/ಯುವತಿಯರನ್ನು ವಿವಾಹವಾಗುವ ಸಾಮಾನ್ಯ ಯುವಕ/ ಯುವತಿಯರಿಗೆ ನಿರಂತರವಾಗಿ ಮಾಸಿಕ ಆದಾಯ ದೊರಕಿಸಲು 50,000 ರೂ.ಗಳ ಸಹಾಯಧನವನ್ನು ಬ್ಯಾಂಕಿನಲ್ಲಿ ಜಂಟಿ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ರೂ.3.68 ಕೋಟಿಗಳ ವೆಚ್ಚದಲ್ಲಿ 736 ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಸಾಧನ ಸಲಕರಣೆಗಳು :ಈ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಅವಶ್ಯವಾಗಿರುವ ಸಾಧನ ಸಲಕರಣೆಗಳನ್ನು (ಕ್ಯಾಲಿಪರ್ಸ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್, ಕ್ರಚಸ್, ಊರುಗೋಲು, ಶ್ರವಣಸಾಧನ ಇನ್ನು ಮುಂತಾದವುಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ರೂ.2.46 ಕೋಟಿಗಳ ವೆಚ್ಚದಲ್ಲಿ 5266 ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಶಿಶುಪಾಲನಾ ಭತ್ಯೆ:ಅಂಧ ತಾಯಂದಿರಿಗೆ ಮಾಸಿಕ 2000 ರೂ.ಗಳಂತೆ ಶಿಶುಪಾಲನಾ ಭತ್ಯೆಯನ್ನು ರಾಜ್ಯ ಸರ್ಕಾರವು ಮಗುವಿನ ಮೊದಲ ಎರಡು ವರ್ಷದವರೆಗೆ ನೀಡುತ್ತಿದೆ. ಈ ಭತ್ಯೆಯನ್ನು ಮಕ್ಕಳ ಮೊದಲ ಐದು ವರ್ಷದವರೆಗೆ ನೀಡುವ ಯೋಜನೆಗೆ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಅದರಂತೆ ಕ್ರಮವಹಿಸಲಾಗಿದೆ.

ದೃಷ್ಟಿದೋಷವುಳ್ಳ ವ್ಯಕ್ತಿಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಹಾಗೂ ಕಲಬುರಗಿಯಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿಯನ್ನು 30 ಲಕ್ಷ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೈಸೂರಿನಲ್ಲಿರುವ ಸರ್ಕಾರಿ ಬ್ರೈಲ್ ಮುದ್ರಣಾಲಯಕ್ಕೆ 80 ಲಕ್ಷ ರೂ.ಗಳ ವೆಚ್ಚದಲ್ಲಿ ಒಂದು ಆಧುನಿಕ ಮುದ್ರಣ ಯಂತ್ರವನ್ನು ಖರೀದಿಸಲು ಯೋಜನೆಗೆ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಅದರಂತೆ ಕ್ರಮವಹಿಸಲಾಗುತ್ತಿದೆ.

ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರೆ ಸಾಧನಗಳನ್ನು ಒಳಗೊಂಡ ತಲಾ ರೂ.25,000/-ಗಳ ಕಿಟ್‍ಗಳನ್ನು ರೂ.1.25 ಕೋಟಿಗಳ ವಿತರಿಸುವ ಯೋಜನೆಗೆ ಸರ್ಕಾರದಿಂದ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದ್ದು, ಅದರಂತೆ ಕ್ರಮ ವಹಿಸಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.