ETV Bharat / state

ಸಂಕಷ್ಟ ಕಾಲದ ಸಮತೋಲಿತ ಬಜೆಟ್: ಡಿಸಿಎಂ‌ ಅಶ್ವತ್ಥ ​ನಾರಾಯಣ್

author img

By

Published : Mar 8, 2021, 6:39 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲುಗಳ ನಡುವೆಯೂ ಇಂದು ಮಂಡಿಸಿದ 2021-22ನೇ ಸಾಲಿನ ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಕ್ಕೂ ನ್ಯಾಯ ಒದಗಿಸಲಾಗಿದ್ದು, ಇದು ಅರ್ಥವ್ಯವಸ್ಥೆಗೆ ಪುನಶ್ಚೇತನ ನೀಡಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

deputy-chief-minister-dr-cn-ashwathth-narayan-talk-about-budget
ಡಾ.ಸಿ.ಎನ್.‌ಅಶ್ವತ್ಥ್​ನಾರಾಯಣ್

ಬೆಂಗಳೂರು: ಕೋವಿಡ್‌ನಿಂದ ಉಂಟಾದ ಆರ್ಥಿಕ ಸವಾಲುಗಳ ನಡುವೆಯೂ ಜನರಿಗೆ ಯಾವುದೇ ರೀತಿಯಲ್ಲೂ ಹೊರೆಯಾಗದ ಹಾಗೂ ಕೃಷಿ, ಶಿಕ್ಷಣ, ಹೂಡಿಕೆ, ಉದ್ಯೋಗ ಸೃಷ್ಟಿಗೆ ಪೂರಕವಾದ ಸಮಗ್ರ ದೃಷ್ಟಿಕೋನದ ಸಮತೋಲಿತ 2021ನೇ ಸಾಲಿನ ಮುಂಗಡಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ್​ ಅಭಿಪ್ರಾಯಪಟ್ಟರು.

ಬಜೆಟ್‌ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋವಿಡ್‌ ಸಂಕಷ್ಟವು ಆರ್ಥಿಕ ಅಲ್ಲೋಲ ಕಲ್ಲೋಲ ಉಂಟು ಮಾಡಿತ್ತು. ಜನತೆಗೆ ತೀವ್ರ ಸಮಸ್ಯೆಗಳನ್ನು ಸೃಷ್ಟಿ ಮಾಡಿತ್ತು. ಆರ್ಥಿಕ-ಉದ್ಯೋಗ ನಷ್ಟದಿಂದ ಇಡೀ ರಾಜ್ಯ ಕಂಗಾಲಾಗಿತ್ತು. ಇಂಥ ಸಂಕಷ್ಟದ ಕಾಲದಲ್ಲಿ ಸಂಜೀವಿನಿಯಂತೆ ಬಜೆಟ್‌ ಮೂಡಿಬಂದಿದೆ ಎಂದರು.

ಸಾಮಾಜಿಕ ನ್ಯಾಯವನ್ನು ಈ ಬಜೆಟ್‌ ಎತ್ತಿ ಹಿಡಿದಿದ್ದು, 30 ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಳ್ಳಲಾಗಿದೆ. ರಾಜ್ಯದ ಒಟ್ಟಾರೆ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ 52,529 ಕೋಟಿ ರೂ.ಗಳ ಅನುದಾನವನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ ಎಂದ ಅವರು, ಕ್ವಾಂಟಂ ತಂತ್ರಜ್ಞಾನ ಅಭಿವೃದ್ಧಿಗೆ 10 ಕೋಟಿ ರೂ. ಮೀಸಲಿಟ್ಟು ʼಸಂಶೋಧನಾ ಪಾರ್ಕ್‌ʼ ಸ್ಥಾಪನೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದರು.

ಜನಪರವಾದ ಬಜೆಟ್: ಕೊರೊನಾ ಕಾರಣದಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದರೂ ಮುಖ್ಯಮಂತ್ರಿಗಳು ಜನಪರವಾದ ಬಜೆಟ್ ಮಂಡಿಸಿದ್ದಾರೆ. ವಿಶೇಷಾಭಿವೃದ್ಧಿ ಯೋಜನೆಗೆ 3 ಸಾವಿರ ಕೋಟಿ ರೂ. ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1500 ಕೋಟಿ ರೂ. ನೀಡಿರುವುದಕ್ಕೆ ಅಭಿನಂದಿಸುವುದಾಗಿ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ: ಸಿಎಂ ಯಡಿಯೂರಪ್ಪ ಸವಾಲು

ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಮೂಲಸೌಲಭ್ಯ ಸೃಜನೆ. ಮಂಡ್ಯ ಜಿಲ್ಲಾ ಕ್ರೀಡಾಂಗಣಕ್ಕೆ 10 ಕೋಟಿ ರೂ. ಹಾಗೂ ಜಕ್ಕೂರು ವೈಮಾನಿಕ ತರಬೇತಿ ಶಾಲೆಗೆ 2 ಕೋಟಿ ರೂ. ನೀಡಲಾಗಿದೆ. ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಹಾಗೂ ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರ ಸ್ಥಾಪನೆಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ. 2022ರಲ್ಲಿ ನಡೆಯುವ ಖೇಲೊ ಇಂಡಿಯಾ ಅಂತಾರಾಜ್ಯ ವಿವಿ ಕ್ರೀಡಾಕೂಟಕ್ಕೂ ರಾಜ್ಯ ಸರ್ಕಾರ ಹೆಚ್ಚಿನ ನೆರವು ನೀಡಲಿದೆ. ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ ಮತ್ತು ಪ್ರವಾಸೋಧ್ಯಮ ಇಲಾಖೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದು ರೈತರು ಹಾಗೂ ಜನಸಾಮಾನ್ಯರ ಏಳಿಗೆಗೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಅರ್ಥ ವ್ಯವಸ್ಥೆಗೆ ಪುನಶ್ಚೇತನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲುಗಳ ನಡುವೆಯೂ ಇಂದು ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಕ್ಕೂ ನ್ಯಾಯ ಒದಗಿಸಲಾಗಿದ್ದು, ಇದು ಅರ್ಥ ವ್ಯವಸ್ಥೆಗೆ ಪುನಶ್ಚೇತನ ನೀಡಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.