ಬೆಂಗಳೂರು: ಕುತ್ತಿಗೆ ನೋವಿನಿಂದ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಕಳೆದ ನಾಲ್ಕೈದು ದಿನದಿಂದ ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆನಂದ ಮಾಮನಿ ಅವರನ್ನು ಇಂದು ಚೆನ್ನೈನಿಂದ ಬೆಂಗಳೂರಿಗೆ ಕರೆತರಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸಿಎಂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿರುವ ಡೆಪ್ಯೂಟಿ ಸ್ಪೀಕರ್ ಮಾಮನಿ ಅವರ ಆರೋಗ್ಯ ವಿಚಾರಿಸಿ, ವೈದ್ಯಕೀಯ ತಂಡದ ಜೊತೆ ಮಾತುಕತೆ ನಡೆಸಿದರು.
ಓದಿ: 15 ದಿನದ ಹಿಂದೆ ಬೇರೆ ಯುವಕನ ಜೊತೆ ಮದುವೆ: ತವರಿಗೆ ಬಂದ ಪ್ರೇಯಸಿಗೆ 20 ಬಾರಿ ಚಾಕು ಚುಚ್ಚಿ, ವಿಷ ಕುಡಿದ ಪ್ರೇಮಿ