ETV Bharat / state

ರೇಣುಕಾಚಾರ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ಅಂಗೀಕರಿಸಿದ ವಿಶೇಷ ಕೋರ್ಟ್​

defamation case, defamation case against Renukacharya, derogatory statement on Zameer, MLA Renukacharya, MLA Renukacharya news, ಮಾನನಷ್ಟ ಮೊಕದ್ದಮೆ, ರೇಣುಕಾಚಾರ್ಯ ವಿರುದ್ಧ ಮಾನನಷ್ಟ ಮೊಕದ್ದಮೆ, ಜಮೀರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಶಾಸಕ ರೇಣುಕಾಚಾರ್ಯ, ಶಾಸಕ ರೇಣುಕಾಚಾರ್ಯ ಸುದ್ದಿ,
ರೇಣುಕಾಚಾರ್ಯ ವಿರುದ್ಧ ಮಾನನಷ್ಟ ಮೊಕದ್ದಮೆ
author img

By

Published : Dec 17, 2020, 1:24 PM IST

Updated : Dec 17, 2020, 7:00 PM IST

13:14 December 17

ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್, ತಮ್ಮ ವಿರುದ್ಧ ರೇಣುಕಾಚಾರ್ಯ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ತಮಗೆ ಮಾನಹಾನಿಯಾಗಿದೆ ಎಂದು ಆರೋಪಿಸಿ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.

ಬೆಂಗಳೂರು: ಸಿಎಂ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಶಾಸಕ ಜಮೀರ್ ಅಹ್ಮದ್ ಖಾನ್ ದಾಖಲಿಸಿದ್ದ ಮಾನನಷ್ಟ ಮೊಕ್ಕದ್ದಮೆ ಪ್ರಕರಣವನ್ನು ವಿಶೇಷ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.

ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್, ತಮ್ಮ ವಿರುದ್ಧ ರೇಣುಕಾಚಾರ್ಯ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ತಮಗೆ ಮಾನಹಾನಿಯಾಗಿದೆ ಎಂದು ಆರೋಪಿಸಿ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ದಾಖಲಿಸಿಕೊಂಡು ರೇಣುಕಾಚಾರ್ಯ ವಿರುದ್ಧದ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದೆ.

ಹಾಗೆಯೇ ಆರೋಪಿ ರೇಣುಕಾಚಾರ್ಯ ವಿರುದ್ಧ ಐಪಿಸಿ ಸೆಕ್ಷನ್ 153ಎ, 500, 504 ಹಾಗೂ 506 ಅಡಿ ಪ್ರಕರಣ ದಾಖಲಿಸಲು ರಿಜಿಸ್ಟ್ರಿಗೆ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿದೆ. 2020ರ ಡಿ. 16ರಂದು ಶಾಸಕ ಬಿ.ಝಡ್. ಜಮೀರ್ ಅಹ್ಮದ್ ಖಾನ್ ತಮಗೆ ಮಾನಹಾನಿ ಮಾಡಿದ ಆರೋಪದಡಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಪಿಸಿಆರ್ ದಾಖಲಿಸಿದ್ದರು. ಅರ್ಜಿಯಲ್ಲಿ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿರುವ ನನ್ನ ವಿರುದ್ಧ ರೇಣುಕಾಚಾರ್ಯ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾಧ್ಯಮಗಳ ಎದುರು ದೇಶದ್ರೋಹಿ, ಆತಂಕವಾದಿ, ಮತಾಂಧ, ಹುಚ್ಚ, ಪಾದರಾಯನಪುರ ಗಲಾಟೆಯ ರೂವಾರಿ, ಈತನನ್ನು ಗುಂಡು ಹೊಡೆದು ಸಾಯಿಸಬೇಕು ಎಂದೆಲ್ಲಾ ಹೇಳಿಕೆ ನೀಡಿದ್ದಾರೆ.

ಇಂತಹ ಹೇಳಿಕೆಗಳು ಮಾಧ್ಯಮಗಳಲ್ಲಿಯೂ ಪ್ರಸಾರವಾಗಿದ್ದು, ನನ್ನ ಕ್ಷೇತ್ರದ ಮತದಾರರು ಹಿಂದೂಗಳ ಓಟು ಪಡೆದು ಹೀಗೆ ಮಾಡುತ್ತಿದ್ದೀರಾ ಎಂದು ಪ್ರಶ್ನಿಸುತ್ತಿದ್ದಾರೆ. ಇದರಿಂದಾಗಿ ನನ್ನ ಗೌರವ ಹಾಳಾಗಿದ್ದು, ಕ್ಷೇತ್ರದ ಜನರೆದುರು ಓಡಾಡಲು ಆಗುತ್ತಿಲ್ಲ. ಇಷ್ಟಲ್ಲದೇ, ರೇಣುಕಾಚಾರ್ಯ ತಾನು ಯಾವುದಕ್ಕೂ ಭಯಪಡುವುದಿಲ್ಲ. ನನ್ನ ವಿರುದ್ಧ ಈಗಾಗಲೇ ಸಾಕಷ್ಟು ಕ್ರಿಮಿನಲ್ ಕೇಸ್​ಗಳಿದ್ದು, ಬೇಕಿದ್ದರೆ ಇನ್ನೊಂದು ಹಾಕಿಕೊಳ್ಳಲಿ ಎಂದು ಉಡಾಫೆಯಿಂದ ಮಾತನಾಡಿದ್ದಾರೆ. ಇವೆಲ್ಲದರಿಂದ ನನ್ನ ಮನಸ್ಸಿಗೆ ನೋವಾಗಿದ್ದು, ಸಮಾಜದಲ್ಲಿ ಅವಮಾನವೂ ಆಗಿದೆ. ಆದ್ದರಿಂದ ರೇಣುಕಾಚಾರ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಮೀರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Last Updated : Dec 17, 2020, 7:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.