ETV Bharat / state

ರೈತರ ವಿರುದ್ಧ ಅವಹೇಳನ ಟ್ವೀಟ್: ಕಂಗನಾ ವಿರುದ್ಧದ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - High Court refuses to dismiss the case against Kangana

ರೈತರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಕಂಗನಾ ರಣಾವತ್​​ ವಿರುದ್ಧ ತುಮಕೂರಿನಲ್ಲಿ ಪ್ರಕರಣ ದಾಖಲಾಗಿತ್ತು. ನಟಿ ಪರ ವಕೀಲರು ತುಮಕೂರಿನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮೊದಲು ಅರ್ಜಿ ಸಂಬಂಧ ಇರುವ ಕಚೇರಿ ಆಕ್ಷೇಪಣೆಗಳನ್ನು ಪೂರ್ಣಗೊಳಿಸಿ, ನಂತರ ನಿಮ್ಮ ವಾದ ಆಲಿಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿತು.

High Court
ಹೈಕೋರ್ಟ್
author img

By

Published : Mar 2, 2021, 5:48 PM IST

Updated : Mar 2, 2021, 9:12 PM IST

ಬೆಂಗಳೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ಜೆಎಂಎಫ್​​ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ತುಮಕೂರಿನ ವಕೀಲ ಎಲ್. ರಮೇಶ್ ನಾಯ್ಕ್ ದಾಖಲಿಸಿರುವ ಖಾಸಗಿ ದೂರಿನ ಮೇರೆಗೆ ಕ್ಯಾತಸಂದ್ರ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ನಟಿ ಕಂಗನಾ ರಣಾವತ್ ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾ. ಎಚ್. ಪಿ ಸಂದೇಶ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕಂಗನಾ ಪರ ವಕೀಲ ರಿಜ್ವಾನ್ ಸಿದ್ದಕಿ ವಾದ ಮಂಡಿಸಿ, ತುಮಕೂರಿನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮೊದಲು ಅರ್ಜಿ ಸಂಬಂಧ ಇರುವ ಕಚೇರಿ ಆಕ್ಷೇಪಣೆಗಳನ್ನು ಪೂರ್ಣಗೊಳಿಸಿ, ನಂತರ ನಿಮ್ಮ ವಾದ ಆಲಿಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿತು.

ಇದನ್ನೂ ಓದಿ: ಮನೆಯಲ್ಲೇ ಕೋವಿಡ್​ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಬಿ.ಸಿ. ಪಾಟೀಲ್ ಕೊಟ್ಟ ಕಾರಣ ಹೀಗಿದೆ..

ಪ್ರಕರಣದ ಹಿನ್ನೆಲೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ನಟಿ ಕಂಗನಾ ಸೆ. 21ರಂದು ಟ್ವೀಟ್ ಮಾಡಿದ್ದರು. ನಟಿಯ ಟ್ವೀಟ್ ದೇಶದ ರೈತರನ್ನು ಅಪಮಾನಿಸಿದೆಯಲ್ಲದೇ, ಶಾಂತಿ ಸೌಹಾರ್ದತೆಯನ್ನೂ ಕದಡಲು ಪ್ರಚೋದಿಸುತ್ತಿದೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್ ತುಮಕೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಸೆ. 25 ಖಾಸಗಿ ದೂರು ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಸಿಆರ್​​ಪಿಸಿ ಸೆಕ್ಷನ್ 156 ಅಡಿ ನಟಿ ವಿರುದ್ಧ ಎಫ್ಐಆರ್ ದಾಖಲಿಸಿ ಮುಂದಿನ ಕ್ರಮಗಳನ್ನು ಜರುಗಿಸುವಂತೆ ಕ್ಯಾತಸಂದ್ರ ಠಾಣೆ ಪೊಲೀಸರಿಗೆ ಅ.9ರಂದು ಆದೇಶಿಸಿತ್ತು. ಅದರಂತೆ ಪೊಲೀಸರು ನಟಿ ವಿರುದ್ಧ ಐಪಿಸಿ ಸೆಕ್ಷನ್ 153 (ಎ), 504, 108 ಅಡಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಿದ್ದರು. ಫೆ. 24ರಂದು ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಪೊಲೀಸರು ಜರುಗಿಸಿರುವ ಕ್ರಮಗಳ ವರದಿ ಕೇಳಿತ್ತು. ಈ ಹಿನ್ನೆಲೆಯಲ್ಲಿ ಎಫ್ಐಆರ್ ಹಾಗೂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ನಟಿ ಕಂಗನಾ ಹೈಕೋರ್ಟ್​ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

Last Updated : Mar 2, 2021, 9:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.