ETV Bharat / state

ಕೊಡಗು ಪ್ರಕೃತಿ ವಿಕೋಪ: ನಿಯಮಾನುಸಾರ ಪರಿಹಾರ ನೀಡಲು ಆದೇಶ

ಕಳೆದ ಬಾರಿ ಮಹಾಮಳೆಗೆ ಕೊಡಗು ಅಕ್ಷರಶಃ ನಲುಗಿ ಹೋಗಿದ್ದು, ಜಿಲ್ಲೆಯಲ್ಲಿ ಸಂಭಿವಿಸಿದ ಪ್ರಕೃತಿ ವಿಕೋಪದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಈ ಬಗ್ಗೆ ಸರ್ಕಾರದಿಂದ ಮತ್ತೊಂದು ಆದೇಶ ಹೊರಡಿಸಿದ್ದಾರೆ.

author img

By

Published : Jun 28, 2019, 8:58 PM IST

ಕಂದಾಯ ಸಚಿವ ಆರ್.ವಿ. ದೇಶಪಾಂಡೆ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ ಅಂತಹ ಮನೆಗಳಿಗೂ ಸಹ ನಿಯಮಾನುಸಾರ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಸಂತ್ರಸ್ತರು ಹಾಗೂ ಅಧಿಕಾರಿಗಳು ಈ ವಿಷಯವನ್ನು ಸಚಿವರ ಗಮನಕ್ಕೆ ತಂದು ವಿನಂತಿಸಿದ್ದರು. ಇದಕ್ಕೆ ತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಈ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋದ ಪ್ರಯುಕ್ತ ಸೂಕ್ತ ಪರಿಹಾರ ದೊರಕದೆ ತೊಂದರೆಗೀಡಾಗಿದ್ದರು. ಈ ಆದೇಶದಿಂದಾಗಿ ಇಂತಹ ಸಂತ್ರಸ್ತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94 ಸಿ ಮತ್ತು 94 ಸಿಸಿ ಅಡಿ ಅರ್ಹವಿದ್ದರೆ 'ಸಿ ಮತ್ತು ಡಿ' ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಮತ್ತು ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ‘ಸಿ’ ಮತ್ತು ‘ಡಿ’ ವರ್ಗೀಕೃತ ಜಮೀನುಗಳಲ್ಲಿ ಬಗರ್ ಹುಕುಂ ಅಡಿ ಸಕ್ರಮೀಕರಣ ಕೋರಿ ಬಾಕಿ ಇರುವ ಅರ್ಜಿಗಳನ್ನು ಸಹ ವಿಲೇವಾರಿ ಮಾಡಲು ಆದೇಶಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

'ಸಿ ಮತ್ತು ಡಿ' ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೇಲ್ಕಂಡ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಸಚಿವರ ಗಮನಕ್ಕೆ ತಂದಿದ್ದರು. ಕಂದಾಯ ಸಚಿವರು ಇಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಭೂ ಸರ್ವೇಕ್ಷಣಾ ಇಲಾಖೆ ಸೇರಿದಂತೆ ಇತರೆ ಸಂಸ್ಥೆಗಳ ನುರಿತ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿನ ಭೂ ಪರಿವರ್ತನೆ ವಿಷಯ ಕುರಿತಂತೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

Intro:ಬೆಂಗಳೂರು : ಕೊಡಗು ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ, ಅಂತಹ ಮನೆಗಳಿಗೂ ಸಹ ನಿಯಮಾನುಸಾರ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. Body:ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲನೆಯನ್ನು ಕೈಗೊಂಡ ಸಂದರ್ಭದಲ್ಲಿ ಜನ ಪ್ರತಿನಿಧಿಗಳು, ಸಂತ್ರಸ್ತರು ಹಾಗೂ ಅಧಿಕಾರಿಗಳು ಈ ವಿಷಯವನ್ನು ಸಚಿವರ ಗಮನಕ್ಕೆ ತಂದು ವಿನಂತಿಸಿದ್ದರು. ಇದಕ್ಕೆತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರು ಈ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋದ ಪ್ರಯುಕ್ತ ಸೂಕ್ತ ಪರಿಹಾರ ದೊರಕದೆ ತೊಂದರೆ ಗೀಡಾಗಿದ್ದರು. ಈ ಆದೇಶದಿಂದಾಗಿ ಇಂತಹ ಸಂತ್ರಸ್ತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.
ಕರ್ನಾಟಕ ಭೂಕಂದಾಯಕಾಯ್ದೆ 1964 ರ ಕಲಂ 94 ಸಿ ಮತ್ತು 94 ಸಿಸಿ ಅಡಿ ಅರ್ಹವಿದ್ದರೆ “ಸಿ ಮತ್ತು ಡಿ” ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಮತ್ತುಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ‘ಸಿ’ ಮತ್ತು ‘ಡಿ’ ವರ್ಗೀಕೃತ ಜಮೀನುಗಳಲ್ಲಿ ಬಗರ್ ಹುಕುಂ ಅಡಿ ಸಕ್ರಮೀಕರಣ ಕೋರಿ ಬಾಕಿ ಇರುವ ಅರ್ಜಿಗಳನ್ನು ಸಹ ವಿಲೇವಾರಿ ಮಾಡಲು ಆದೇಶಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
“ಸಿ ಮತ್ತು ಡಿ” ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗ್ಗೆ ಜಿಲ್ಲೆಯಜನ ಪ್ರತಿನಿಧಿಗಳು ಮೇಲ್ಕಂಡ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಸಚಿವರ ಗಮನಕ್ಕೆ ತರಲಾಗಿತ್ತು. ಕಂದಾಯ ಸಚಿವರು ಇಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಭೂ ಸರ್ವೇಕ್ಷಣಾ ಇಲಾಖೆಯು ಸೇರಿದಂತೆ ಇತರೆ ಸಂಸ್ಥೆಗಳ ನುರಿತ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿನ ಭೂ ಪರಿವರ್ತನೆ ವಿಷಯ ಕುರಿತಂತೆ ಸುದೀರ್ಘವಾಗಿ ಚರ್ಚಿಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.