ETV Bharat / state

ಕೈಗಾರಿಕಾ ಕ್ಷೇತ್ರದ ಅಭಿೃವೃದ್ಧಿಗೆ ದೇಶಪಾಂಡೆರಿಂದ ಅಮೂಲ್ಯ ಕೊಡುಗೆ: ಸಿಎಂ ಬೊಮ್ಮಾಯಿ ಗುಣಗಾನ - tayota industry in karnataka

2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದ ಆರ್​.ವಿ ದೇಶಪಾಂಡೆ - ಪ್ರಶಸ್ತಿ ಪ್ರದಾನ ಮಾಡಿ ಹಿರಿಯ ನಾಯಕನನ್ನು ಗುಣಗಾನ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ

deshpande-valuable-contribution-to-the-development-of-industrial-sector-cm-bommai
ಕೈಗಾರಿಕಾ ಕ್ಷೇತ್ರದ ಅಭಿೃವೃದ್ಧಿಗೆ ದೇಶಪಾಂಡೆ ಅಮೂಲ್ಯ ಕೊಡುಗೆ: ಸಿಎಂ ಬೊಮ್ಮಾಯಿ
author img

By

Published : Dec 28, 2022, 8:02 PM IST

ಬೆಳಗಾವಿ: ಕೈಗಾರಿಕಾ ಸಚಿವರಾಗಿ ಸುದೀರ್ಘ 10 ವರ್ಷ ಸೇವೆ ಸಲ್ಲಿಸಿದ ಕೀರ್ತಿ ಆರ್.ವಿ.ದೇಶಪಾಂಡೆ ಅವರಿಗೆ ಸಲ್ಲುತ್ತಿದೆ. ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಆರ್ಥಿಕತೆ ಬದಲಾವಣೆ, ಉದಾರೀಕರಣ ಹಾಗೂ ಜಾಗತೀಕರಣದ ಲಾಭವನ್ನು ರಾಜ್ಯಕ್ಕೆ ಲಭಿಸುವಂತೆ ಪ್ರಾಮಾಣಿಕವಾಗಿ ಪರಿಶ್ರಮ ವಹಿಸುವಲ್ಲಿ ಅವರ ಪಾತ್ರವಿದೆ ಎಂದರು.

ಸರಳ ಸಜ್ಜನ ವ್ಯಕ್ತಿತ್ವ: ಆರ್.ವಿ. ದೇಶಪಾಂಡೆಯವರೊಂದಿಗೆ ಹಳೆಯ ನೆನಪುಗಳಿವೆ. ಸರಳ, ಸಜ್ಜನ ವ್ಯಕ್ತಿತ್ವ, ರಾಜ್ಯ ಹಾಗೂ ದೇಶದ ಹಿತಕ್ಕೆ ಚಿಂತನೆ ಮಾಡುವವರು. ರಾಜ್ಯದ ರಾಜಕಾರಣದಲ್ಲಿ ಗುರುತಿಸಲ್ಪಟ್ಟವರು. 1980ರಲ್ಲಿ ಎಪಿಎಂಸಿ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಆರ್ ಬೊಮ್ಮಾಯಿ ಅವರ ಬಳಿಗೆ ಒಂದು ತಂಡವನ್ನು ಕರೆತಂದಿದ್ದರು. ಕೆಲವೇ ದಿನಗಳಲ್ಲಿ ಎಪಿಎಂಸಿ ಅಧ್ಯಕ್ಷರಾದರು. ಜನತಾ ಪಕ್ಷದ ಅಧ್ಯಕ್ಷರು, ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಂತರ 1983ರ ಚುನಾವಣೆಯಲ್ಲಿ ಹಳಿಯಾಳ ಕ್ಷೇತ್ರಕ್ಕೆ ಆಯ್ಕೆಯಾದರು ಎಂದು ನೆನಪು ಮಾಡಿಕೊಂಡರು.

ವಿವಿಧ ಖಾತೆಗಳಲ್ಲಿ ಸಚಿವರಾಗಿ ಸೇವೆ: ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ, ಸಿದ್ದರಾಮಯ್ಯ, ದೇಶಪಾಂಡೆಯವರು, ಎಂ.ಪಿ ಪ್ರಕಾಶ್​ ಅವರನ್ನೂ ಸೇರಿದಂತೆ ತಮ್ಮ ತಮ್ಮ ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡಿದ ದೊಡ್ಡ ತಂಡ 1983ರಲ್ಲಿ ಬೆಳಕಿಗೆ ಬಂತು. ಇಡೀ ರಾಜಕಾರಣ ಬದಲಿಸಿದ ಸಮಯವಾಗಿತ್ತು. ಆ ತಂಡದಲ್ಲಿ ಆರ್.ವಿ. ದೇಶಪಾಂಡೆಯವರೂ ಒಬ್ಬರು.

ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾದ 2ನೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ದೇಶಪಾಂಡೆಯವರನ್ನು ಸಚಿವರನ್ನಾಗಿ ನೇಮಕ ಮಾಡಲಾಯಿತು. ಅಂದಿನಿಂದ ವಿವಿಧ ಖಾತೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷತೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಅವರು ನಡೆದು ಬಂದ ದಾರಿ ಎಲ್ಲರಿಗೂ ಮಾದರಿ: ಉತ್ತಮ ರಾಜಕೀಯ ಅನುಭವ ಹೊಂದಿರುವ ಆರ್.ವಿ. ದೇಶಪಾಂಡೆಯವರು ಎಲ್ಲ ಮುಖ್ಯಮಂತ್ರಿಗಳೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದು, ಸ್ನೇಹಪರವಾಗಿದ್ದಾರೆ. ವಿರೋಧ ಪಕ್ಷದಲ್ಲಿ, ಕೇಂದ್ರ ಸರ್ಕಾರದಲ್ಲಿ ಹಲವು ಸಚಿವರೊಂದಿಗೆ ಆತ್ಮೀಯರಾಗಿದ್ದಾರೆ. ಅವರು ನಡೆದು ಬಂದ ದಾರಿ ನಮಗೆಲ್ಲರಿಗೂ ಮಾದರಿಯಾಗಿದ್ದು, ಅನುಕರಣೀಯವಾಗಿದೆ. ಹೊಸದಾಗಿ ಬಂದ ಶಾಸಕರು, ದೇಶಪಾಂಡೆಯವರ ಕೊಡುಗೆ, ನಡೆಸಿದ ಚರ್ಚೆಗಳ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದು ಬೊಮ್ಮಾಯಿ ಕರೆ ನೀಡಿದರು.

ಇದನ್ನೂ ಓದಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ವಿಚಾರ: ಮುಖ್ಯಮಂತ್ರಿಗೆ ಡಿಕೆ ಶಿವಕುಮಾರ್‌ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.