ETV Bharat / state

ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಬುಧವಾರ ನಾಮಪತ್ರ ಸಲ್ಲಿಸಿದ ಘಟಾನುಘಟಿಗಳ ವಿವರ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ. ನಿನ್ನೆ ರಾಜ್ಯಾದ್ಯಂತ ಉಮೇದುವಾರಿಕೆ ಸಲ್ಲಿಸಿದ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ.

author img

By

Published : Apr 20, 2023, 7:26 AM IST

nomination
ನಾಮಪತ್ರ ಸಲ್ಲಿಕೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಬುಧವಾರ ನಾಮಪತ್ರ ಸಲ್ಲಿಕೆ ಜಾತ್ರೆ ಮುಂದುವರೆದಿತ್ತು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ರಾಜ್ಯಾದ್ಯಂತ ಬಹುತೇಕ ಅಭ್ಯರ್ಥಿಗಳು ನಿನ್ನೆಯೇ ನಾಮಪತ್ರ ಸಲ್ಲಿಕೆ ಮಾಡಿದರು. ಉಮೇದುವಾರಿಕೆ ಸಲ್ಲಿಸಿದ ಘಟಾನುಘಟಿಗಳ ವಿವರ ಇಲ್ಲಿದೆ..

ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇಂದು ಅಮವಾಸ್ಯೆ ಇರುವ ಕಾರಣ ಬಹುತೇಕ ಅಭ್ಯರ್ಥಿಗಳು ನಿನ್ನೆಯೇ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 1,110 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ವಿವಿಧ ಪಕ್ಷಗಳ ಘಟಾನುಘಟಿಗಳು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬೃಹತ್ ಮೆರವಣಿಗೆ ಮೂಲಕ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ನಟ ಸುದೀಪ್ ಜೊತೆಗೂಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಿದರು. ಇತ್ತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಉಮೇದುವಾರಿಕೆ ಸಲ್ಲಿಸಿದರು. ಶಿಕಾರಿಪುರದಲ್ಲಿ ಬಿ ವೈ ವಿಜಯೇಂದ್ರ ತಮ್ಮ ತಂದೆ ಬಿ ಎಸ್ ಯಡಿಯೂರಪ್ಪ ಜೊತೆಗೂಡಿ ದೊಡ್ಡ​ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಕೊರಟಗೆರೆಯಲ್ಲಿ ಡಾ. ಜಿ ಪರಮೇಶ್ವರ್, ನರಗುಂದದಲ್ಲಿ ಸಚಿವ ಸಿ ಸಿ ಪಾಟೀಲ್, ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ್ ಮೂರ್ತಿ ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್, ಗೋವಿಂದರಾಜು ನಗರ ಕಾಂಗ್ರೆಸ್​ ಅಭ್ಯರ್ಥಿ ಪ್ರಿಯಾ ಕೃಷ್ಣ, ಸಚಿವ ಸುನಿಲ್ ಕುಮಾರ್ ಮೆರವಣಿಗೆ ಮೂಲಕ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಬಾಲಚಂದ್ರ ಜಾರಕಿಹೊಳಿ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಬಿ ಸಿ ನಾಗೇಶ್, ತಮ್ಮೇಶ್ ಗೌಡ, ಎಸ್.ಆರ್.ವಿಶ್ವನಾಥ್, ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ ಮಾಡಿದರು.

ಇದನ್ನೂ ಓದಿ : ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ: ಮಧ್ಯರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

ನಾಮಪತ್ರ ಸಲ್ಲಿಕೆ ವಿವರ: ಬಿಜೆಪಿ ಅಭ್ಯರ್ಥಿಗಳು ಬುಧವಾರ 164 ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು 147 ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ 108, ಎಎಪಿಯಿಂದ 91 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಬಿಎಸ್ ಪಿ ಅಭ್ಯರ್ಥಿಗಳು 46 ನಾಮಪತ್ರ ಸಲ್ಲಿಸಿದ್ದಾರೆ. ನೋಂದಾಯಿತ ಗುರುತಿಸದ ಪಕ್ಷಗಳಿಂದ ಬುಧವಾರ 193 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಿಂದ ಸುಮಾರು 359 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಬುಧವಾರ ಪುರುಷ ಅಭ್ಯರ್ಥಿಗಳು 1,041, ಮಹಿಳಾ ಅಭ್ಯರ್ಥಿಗಳು 69 ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಲ್ಲಿ ಮುಂದುವರಿದ ನಾಮಪತ್ರ ಭರಾಟೆ: ಬೆಂಗಳೂರಲ್ಲೂ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಉಮೇದುವಾರಿಕೆ ಸಲ್ಲಿಕೆಗೆ ಇಂದು ಕೊನೆ ದಿನವಾಗಿದ್ದು, ಒಂದು ದಿನ‌ ಬಾಕಿ ಇರುವಾಗಲೇ ಹಲವರು ಮತ್ತೊಂದು ಬಾರಿ ನಾಮಪತ್ರ ಸಲ್ಲಿಸಿದರು. ನಿನ್ನೆ ಬೆಂಗಳೂರು ನಗರದಲ್ಲಿ ವಿವಿಧೆಡೆ ಬುಧವಾರ 139 ನಾಮಪತ್ರ ಸಲ್ಲಿಸಲಾಯಿತು. ಬಿಜೆಪಿಯಿಂದ 17, ಕಾಂಗ್ರೆಸ್​ನಿಂದ 15, ಎಎಪಿಯಿಂದ 12, ಬಿಎಸ್ ಪಿಯಿಂದ 12, ಜೆಡಿಎಸ್ ನಿಂದ 11 ಉಮೇದುವಾರಿಕೆ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.