ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಕರಾವಳಿ ಹಾಗು ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದ್ದರೂ ನಾಡಿನ ಪ್ರಮುಖ ಜಲಾಶಯಗಳು ಭರ್ತಿಯಾಗಿಲ್ಲ.
ಭಾರೀ ಮಳೆಯಿಂದಾಗಿ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಮೈಸೂರು ಭಾಗದ ಕಾವೇರಿ ಶೇ. 30, ಮಧ್ಯ ಕರ್ನಾಟಕ ಭಾಗದ ಜೀವನಾಡಿ ಭದ್ರ, ತುಂಗಭದ್ರ ಜಲಾಶಯಗಳು ಶೇ. 50 ರಷ್ಟು ಮಾತ್ರ ಭರ್ತಿಯಾಗಿವೆ. ಉತ್ತರ ಕರ್ನಾಟಕ ಮತ್ತು ಕರಾವಳಿ, ಮಲೆನಾಡಿನಲ್ಲಿ ನೆರೆಹಾವಳಿಯಿಂದ ಜನ ತತ್ತರಿಸಿದ್ದಾರೆ. ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದರೂ ಜಲಾಶಗಳು ಮಾತ್ರ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆ ನೀರಿನ ಸಂಗ್ರಹ ಹೊಂದಿವೆ.
ಜಲಾಶಯಗಳಲ್ಲಿನ ನೀರಿನ ಸಂಗ್ರಹದ ವಿವರ
ಆಗಸ್ಟ್ 8ರವರೆಗೆ ಅನ್ವಯವಾಗುವಂತೆ ನಾಡಿನ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಜಲಾಶಯವಾದ ಲಿಂಗನಮಕ್ಕಿ ಜಲಾಶಯಕ್ಕೆ 1,11,218 ಕ್ಯೂಸೆಕ್ ನೀರು ಒಳಹರಿವು ಇದ್ದು, ಜಲಾಶಯದಿಂದ ನೀರನ್ನು ಹೊರಬಿಟ್ಟಿಲ್ಲ. 1819 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 1799.35 ಅಡಿಗೆ ತಲುಪಿದೆ. 151.75 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 94.35 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 121.23 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಸೂಪಾ ಜಲಾಶಯಕ್ಕೆ 90,815 ಕ್ಯೂಸೆಕ್ ನೀರು ಒಳಹರಿವು ಇದ್ದು, ಜಲಾಶಯದಿಂದ ನೀರನ್ನು ಹೊರಬಿಟ್ಟಿಲ್ಲ. 1849.92 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 1824.01 ಅಡಿಗೆ ತಲುಪಿದೆ. 145.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 113.39 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 104.45 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ವರಾಹಿ ಜಲಾಶಯಕ್ಕೆ 7835 ಕ್ಯೂಸೆಕ್ ನೀರು ಒಳಹರಿವು ಇದ್ದು, ಜಲಾಶಯದಿಂದ ನೀರನ್ನು ಹೊರಬಿಟ್ಟಿಲ್ಲ. 1949.50 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 1910.73 ಅಡಿಗೆ ತಲುಪಿದೆ. 31.10 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 12.68 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 22.65 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಹಾರಂಗಿ ಜಲಾಶಯಕ್ಕೆ 16801 ಕ್ಯೂಸೆಕ್ ನೀರು ಒಳಹರಿವು ಇದ್ದು, 30 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 2859 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 2849.83 ಅಡಿಗೆ ತಲುಪಿದೆ. 8.07 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 5.45 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 7.70 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಹೇಮಾವತಿ ಜಲಾಶಯಕ್ಕೆ 48133 ಕ್ಯೂಸೆಕ್ ನೀರು ಒಳಹರಿವು ಇದ್ದು, 5000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 2922 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 2905.30 ಅಡಿಗೆ ತಲುಪಿದೆ. 35.76 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 21.93 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 34.85 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಕೆಆರ್ ಎಸ್ ಜಲಾಶಯಕ್ಕೆ 30774 ಕ್ಯೂಸೆಕ್ ನೀರು ಒಳಹರಿವು ಇದ್ದು,3276ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 124.80 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 91 ಅಡಿಗೆ ತಲುಪಿದೆ. 45.05 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 12.14 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 43.61 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಕಬಿನಿ ಜಲಾಶಯಕ್ಕೆ 29498 ಕ್ಯೂಸೆಕ್ ನೀರು ಒಳಹರಿವು ಇದ್ದು,10949 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 2284 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 2281.53 ಅಡಿಗೆ ತಲುಪಿದೆ. 15.67 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 14.11 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 15.28 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಭದ್ರಾ ಜಲಾಶಯಕ್ಕೆ 55915 ಕ್ಯೂಸೆಕ್ ನೀರು ಒಳಹರಿವು ಇದ್ದು,232ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 2158 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 2131.66 ಅಡಿಗೆ ತಲುಪಿದೆ. 63.04 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 34.11 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 61.73 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ತುಂಗಭದ್ರಾ ಜಲಾಶಯಕ್ಕೆ 1,02,444 ಕ್ಯೂಸೆಕ್ ನೀರು ಒಳಹರಿವು ಇದ್ದು,2194 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 1633 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 1616.30 ಅಡಿಗೆ ತಲುಪಿದೆ. 100.86 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 48.80 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 98.20 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಘಟಪ್ರಭಾ ಜಲಾಶಯಕ್ಕೆ 97460 ಕ್ಯೂಸೆಕ್ ನೀರು ಒಳಹರಿವು ಇದ್ದು,97,370 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 2175 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 2172 ಅಡಿಗೆ ತಲುಪಿದೆ. 48.98 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 46.67 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 48.36 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಮಲಪ್ರಭಾ ಜಲಾಶಯಕ್ಕೆ 94618 ಕ್ಯೂಸೆಕ್ ನೀರು ಒಳಹರಿವು ಇದ್ದು,81048ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 2079.50 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 2079 ಅಡಿಗೆ ತಲುಪಿದೆ. 34.35 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 33.65 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 16.78 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಆಲಮಟ್ಟಿ ಜಲಾಶಯಕ್ಕೆ 367318 ಕ್ಯೂಸೆಕ್ ನೀರು ಒಳಹರಿವು ಇದ್ದು,390929 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 1704.81 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 1696.61 ಅಡಿಗೆ ತಲುಪಿದೆ. 119.26 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 81.88 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 119.26 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ನಾರಾಯಣಪುರ ಜಲಾಶಯಕ್ಕೆ 4,01,346 ಕ್ಯೂಸೆಕ್ ನೀರು ಒಳಹರಿವು ಇದ್ದು, 4,28,225 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 1615 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ 1602.05 ಅಡಿಗೆ ತಲುಪಿದೆ. 26.14 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 10.99 ಟಿಎಂಸಿ ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ಸಮಯಕ್ಕೆ 26.10 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಶೇ.90ರಷ್ಟು ಸಂಗ್ರಹ ಸಾಮರ್ಥ್ಯ ತುಂಬಿರುವ ಕಬಿನಿ,ಘಟಪ್ರಭಾ,ಮಲಪ್ರಭಾ ಜಲಾಶಯ ಹಾಗು ಶೇ.69 ರಷ್ಟು ಭರ್ತಿಯಾಗಿದ್ದರೂ ವ್ಯಾಪಕ ಒಳಹರಿವಿರುವ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಆಲಮಟ್ಟಿ ಜಲಾಶಯದಿಂದಲೂ ನೀರನ್ನು ನದಿಗೆ ಬಿಡಲಾಗಿದೆ.