ETV Bharat / state

ಬೆಂಗಳೂರು ಸಿಸಿಬಿ ಕಾರ್ಯಾಚರಣೆ: ಐಪಿಲ್​ ಬೆಟ್ಟಿಂಗ್​ ನಡೆಸುತ್ತಿದ್ದ ಆರೋಪಿಯ ಬಂಧನ - Bangalore CCB Police

ಐಪಿಎಲ್​ ಕ್ರಿಕೆಟ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 30,00,500 ರೂ. ನಗದು ವಶಪಡಿಸಿಕೊಂಡಿದ್ದಾರೆ.

dsd
ಐಪಿಲ್​ ಬೆಟ್ಟಿಂಗ್​ ನಡೆಸುತ್ತಿದ್ದ ಆರೋಪಿ ಬಂಧನ
author img

By

Published : Oct 21, 2020, 9:17 AM IST

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂತೋಷ್​ ಬಂಧಿತ ಆರೋಪಿ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಆರೋಪಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಕ್ರಿಕೆಟ್ ಪಂದ್ಯಕ್ಕೆ ಬೆಟ್ಟಿಂಗ್​ ನಡೆಸುತ್ತಿದ್ದ. lotusbooks 247.com, king exchange.com ಹಾಗೂ playwin 99.com ಎಂಬ ಆ್ಯಪ್ ವೆಬ್​ಸೈಟ್ ಮೂಲಕ ಬೆಟ್ಟಿಂಗ್ ಆಡುತ್ತಿದ್ದರು.

ಸದ್ಯ ಬಂಧಿತ ಆರೋಪಿಯಿಂದ ಸುಮಾರು 30,00,500 ರೂ. ನಗದು, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇತರೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.