ಬೆಂಗಳೂರು: ವೀಸಾ ಅವಧಿ ಮುಗಿದರೂ ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ 8 ಮಂದಿ ವಿದೇಶಿ ಪ್ರಜೆಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ವಿದೇಶಿ ಪ್ರಜೆಗಳು ನೆಲೆಯೂರಿರುವ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಸುಮಾರು 150ಕ್ಕೂ ಅಧಿಕ ವಿದೇಶಿಯರ ವೀಸಾ ಹಾಗೂ ಪಾಸ್ ಪೋರ್ಟ್ ಪರಿಶೀಲನೆ ನಡೆಸಿದರು. ಈ ವೇಳೆ 6 ಮಂದಿ ಯುವತಿಯರು ಸೇರಿ ಒಟ್ಟು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಉಗಾಂಡ, ನೈಜಿರೀಯಾ ಹಾಗೂ ಅಫ್ರಿಕಾ ಮೂಲದವರಾಗಿದ್ದು, ಬಿಸಿನೆಸ್, ಟೂರಿಸ್ಟ್ ಹಾಗೂ ಸ್ಟೂಡೆಂಟ್ ವೀಸಾದಡಿ ನಗರಕ್ಕೆ ಬಂದಿದ್ದರು. ವೀಸಾ ಅವಧಿ ಮುಗಿದರೂ ರಾಜಧಾನಿಯಲ್ಲೇ ನೆಲೆಯೂರಿದ್ದರು. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ವಿರುದ್ಧ ಫಾರಿನ್ ಆಕ್ಟ್ ನಡಿ ಪ್ರಕರಣ ದಾಖಲಿಸಿ, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.