ETV Bharat / state

ದಾರಿಹೋಕರಿಗೆ ಗಾಂಜಾ ಮಾರಾಟ :ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಂಧೆಕೋರರು - marijuana accused arrest in bengalore

ಮೈಸೂರು ರಸ್ತೆಯ ಬಾಪೂಜಿನಗರ ಅಂಡರ್ ಪಾಸ್​ನಲ್ಲಿ ಮಾದಕ ವಸ್ತುಗಳನ್ನು ಮಾರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬ್ಯಾಟರಾಯನಪುರ ಪೊಲೀಸರು ಆರೋಪಿಗಳನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದಿದ್ದಾರೆ.

detention-of-marijuana-dealers-in-bangalore
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಂಧೆಕೋರರು
author img

By

Published : Jan 14, 2021, 11:24 PM IST

ಬೆಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮತ್ತು ಮಾದಕ ವಸ್ತುಗಳನ್ನು ಮಾರುತ್ತಿದ್ದ ದಂಧೆಕೋರರನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಲೆಗೆ ಕೆಡವಿದ್ದಾರೆ.

ಮೈಸೂರು ರಸ್ತೆಯ ಬಾಪೂಜಿನಗರ ಅಂಡರ್ ಪಾಸ್​ನಲ್ಲಿ ಮಾದಕ ವಸ್ತುಗಳನ್ನು ಮಾರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬ್ಯಾಟರಾಯನಪುರ ಪೊಲೀಸರು ಆರೋಪಿಗಳನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದಿದ್ದಾರೆ.

ರಹ್ಮತುಲ್ಲಾ, ಆಸಿಫ್ ಪಾಷಾ ಬಂಧಿತ ಆರೋಪಿಗಳಾಗಿದ್ದು, ಸುಮಾರು 1 ಲಕ್ಷ ರೂ ಬೆಲೆಬಾಳುವ 3.4 ಕೆಜಿ ತೂಕದ ಗಾಂಜಾ ಮತ್ತು ಇತರೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ನಗರದ ಇತರ ಭಾಗಗಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

ಓದಿ: ಸಾವಿರಾರು ನಾಣ್ಯಗಳ 'ಸಂಗ್ರಹಕ' ಈ ವಿಶೇಷ ಚೇತನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.