ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಡ್ರಗ್ಸ್ ಜಾಲವನ್ನ ಭೇದಿಸುವ ಕಾರ್ಯಾಚರಣೆ ಮುಂದುವರೆಸಿದ್ದು, ಕೇರಳ ಮೂಲದ ಮತ್ತಿಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಅನಗೇಶ್, ಎಂ ಡಿ ಫರೀಸ್ ಬಂಧಿತ ಆರೋಪಿಗಳು. ಬಂಧಿತರಿಂದ 1.3 ಲೀಟರ್ ಮಾದಕ ದ್ರವ್ಯ, 2 ಕೆ.ಜಿ ಗಾಂಜಾ ಸೇರಿ 12 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಇಬ್ಬರು ಆರೋಪಿಗಳ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಸಿಸಿಬಿ ದೂರು ದಾಖಲಿಸಿದೆ. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಓದಿ : ಹಾಸನ: ಹಳೆ ಕಾರುಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ