ಬೆಂಗಳೂರು: ಪ್ರಸಕ್ತ ಸಾಲಿನ ಡಿ ದೇವರಾಜ ಅರಸು ಪ್ರಶಸ್ತಿಗಾಗಿ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪರನ್ನು ಆಯ್ಕೆ ಮಾಡಲಾಗಿದೆ. ಭಾನುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಸಮಾರಂಭದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 108ನೇ ಜನ್ಮ ದಿನಾಚರನೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆಗೊಂಡಿದೆ.
-
ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಹಾರ್ದಿಕ ಅಭಿನಂದನೆಗಳು.
— CM of Karnataka (@CMofKarnataka) August 17, 2023 " class="align-text-top noRightClick twitterSection" data="
ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು.
ದೇವರಾಜ ಅರಸು ಅವರ… pic.twitter.com/k1Ed0BQc7M
">ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಹಾರ್ದಿಕ ಅಭಿನಂದನೆಗಳು.
— CM of Karnataka (@CMofKarnataka) August 17, 2023
ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು.
ದೇವರಾಜ ಅರಸು ಅವರ… pic.twitter.com/k1Ed0BQc7Mಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಹಾರ್ದಿಕ ಅಭಿನಂದನೆಗಳು.
— CM of Karnataka (@CMofKarnataka) August 17, 2023
ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು.
ದೇವರಾಜ ಅರಸು ಅವರ… pic.twitter.com/k1Ed0BQc7M
ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗಾಗಿ ಪ್ರಗತಿಪರ ಚಿಂತಕರಾಗಿ, ಸಾಮಾಜಿಕ ಹೋರಾಟಗಾರರಾಗಿ, ಶಾಸಕರಾಗಿ, ಸಚಿವರಾಗಿ, ವಿಧಾನ ಪರಿಷತ್ತಿನ ಸಭಾಪತಿಗಳಾಗಿ ಮತ್ತು ವಿಧಾನ ಸಭೆಯ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಕಾಗೋಡು ತಿಮ್ಮಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು ಎಂದು ಬಣ್ಣಿಸಿದ್ದಾರೆ. ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪ ಅವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ "ವಾಸಿಸುವವನನ್ನೇ ಮನೆ ಒಡೆಯ" ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿಗಳು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕರು, ಉಸ್ತುವಾರಿ ಸಚಿವರೊಂದಿಗಿನ ಸರಣಿ ಸಭೆ ಮುಕ್ತಾಯ; ಅಸಮಾಧಾನ ಶಮನ ಕಸರತ್ತು ನಡೆಸಿದ ಸಿಎಂ ಸಿದ್ದರಾಮಯ್ಯ