ETV Bharat / state

ಸೋಂಕು ಹೆಚ್ಚಳ: ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿ- ಸಿಎಂ,ಆರೋಗ್ಯ ಸಚಿವರಿಗೆ ಪತ್ರ ಬರೆದ ದೇವೇಗೌಡರು - Deve gowda wrote letter to c m and health minister regarding corona issue

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೈದ್ಯಕೀಯ ಆಕ್ಸಿಜನ್‌ಯುಕ್ತ ಹಾಸಿಗೆಗಳನ್ನು ವಿಸ್ತರಿಸಲು ತುರ್ತು ಕ್ರಮ ವಹಿಸಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

deve-gowda
ದೇವೇಗೌಡ
author img

By

Published : Apr 21, 2021, 9:45 PM IST

ಬೆಂಗಳೂರು: ದಿನೇ ದಿನೆ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ರಾಜ್ಯದಲ್ಲಿರುವ ಬಹುತೇಕ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಸಾಕಾಗುತ್ತಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಈ ಪರಿಸ್ಥಿತಿಯನ್ನು "ಆರೋಗ್ಯ ತುರ್ತು ಪರಿಸ್ಥಿತಿ" (Health Emergency Situation) ಎಂದು ಘೋಷಿಸಿ ಸಮರೋಪಾದಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಕೋವಿಡ್ ಹಾಸಿಗೆಗಳನ್ನು ವಿಸ್ತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರಿಗೆ ಪತ್ರ ಬರೆದಿರುವ ಗೌಡರು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೈದ್ಯಕೀಯ ಆಕ್ಸಿಜನ್‌ಯುಕ್ತ ಹಾಸಿಗೆಗಳನ್ನು ವಿಸ್ತರಿಸಲು ತುರ್ತು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Deve gowda wrote letter to c m and health minister regarding corona issue
ಸಿ ಎಂ ಬಿಎಸ್​ಗೆ ಪತ್ರ ಬರೆದ ಹೆಚ್.ಡಿ ದೇವೇಗೌಡರು

ರಾಜ್ಯದಲ್ಲಿ ಕೊರೊನಾ ಸೊಂಕಿನ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಸೋಂಕಿತರಲ್ಲಿ ಹಲವಾರು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವುದು ಅತ್ಯವಶ್ಯಕವಾಗಿದೆ. ಅಲ್ಲದೇ ಸೋಂಕಿತರಲ್ಲಿ ಹಲವರಿಗೆ ವೈದ್ಯಕೀಯ ಆಕ್ಸಿಜನ್‌ಯುಕ್ತ ಹಾಸಿಗೆಗಳು ಹಾಗೂ ವೆಂಟಿಲೇಟರ್‌ಗಳ ಅವಶ್ಯವಿದೆ. ಅದರಂತೆ, ಪ್ರತಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಮುಖೇನ ವೈದ್ಯಕೀಯ ಆಕ್ಸಿಜನ್ ನೀಡಲು ಅಗತ್ಯವಿರುವ ವೆಂಟಿಲೇಟರ್ ಸರಬರಾಜು ಕೂಡಲೇ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸುದ್ದಿ ಮಾಧ್ಯಮಗಳ ಇತ್ತೀಚಿನ ವರದಿ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಸೊಂಕಿನ 1ನೇ ಅಲೆಯನ್ನು ನಿಯಂತ್ರಿಸಲು ಖರೀದಿಸಿದ ಸಾವಿರಾರು ವೆಂಟಿಲೇಟರ್‌ಗಳನ್ನು ಬಳಸದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಉಗ್ರಾಣದಲ್ಲಿ ಉಳಿದಿರುವುದಾಗಿ ತಿಳಿದು ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕಾರ್ಯೋನ್ಮುಖವಾಗಿ ಬಳಸದೇ ಇರುವ ವೆಂಟಿಲೇಟರ್‌ಗಳನ್ನು ತಜ್ಞರಿಂದ ಪರಿಶೀಲಿಸಿ ಆಸ್ಪತ್ರೆಗಳಲ್ಲಿ ಬಳಸಲು ತುರ್ತು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಮುಂದುವರಿದು ಈ ವೆಂಟಿಲೇಟರ್‌ಗಳನ್ನು ಆಸ್ಪತ್ರೆಗಳಲ್ಲಿ ನಿಗಾ ವಹಿಸಲು ಅಗತ್ಯವಿರುವ ನುರಿತ ತಂತ್ರಜ್ಞರುಗಳ ಕೊರತೆ ಇದ್ದು, ರಾಜ್ಯ ಸಕಾರ ಇಂತಹ ತಂತ್ರಜ್ಞರುಗಳನ್ನು ಹೊರ ಗುತ್ತಿಗೆ ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕು. ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ಆಸ್ಪತ್ರೆ ಮುಖ್ಯಾಧಿಕಾರಿಗಳಿಗೆ ನಿರ್ವಹಿಸಲು ಅಗತ್ಯವಿರುವ ಅಧಿಕಾರ ತುರ್ತಾಗಿ ನೀಡಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಅವಶ್ಯಕ ಇರುವ ತುರ್ತು ಕ್ರಮಗಳನ್ನು ಕೈಗೊಳ್ಳುವುದಾಗಿ ಭಾವಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಾಗರೀಕರು ಸಂಯಮದಿಂದ ವರ್ತಿಸಿ : ಇನ್ನು ದೇಶಾದ್ಯಂತ ಕೊರೊನಾ ಸೊಂಕಿನ 2ನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ಈ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಹಲವಾರು ಮುಂಜಾಗ್ರತೆ ಕ್ರಮಗಳಲ್ಲಿ ನಾಗರೀಕರಾದ ನಾವು ಸಂಯಮದಿಂದ ವರ್ತಿಸಿ ಸಹಕಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದ್ದಾರೆ.

ಆರೋಗ್ಯ ಕಾರ್ಯಕರ್ತರ ಸುರಕ್ಷತೆಗೆ ಆರ್ಥಿಕ ನೆರವು ಘೋಷಣೆ ಮಾಡಿ : ಕೊರೊನಾ ಸೊಂಕು ಹರಡುವಿಕೆಯಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರು ನಿರ್ವಹಿಸುವ ಪ್ರತಿಯೊಂದು ಕಾರ್ಯದಲ್ಲಿ ನಮ್ಮ ಸಹಕಾರ ಮತ್ತು ನೆರವು ಅತ್ಯಗತ್ಯ. ಕೊರೊನಾ ಸೋಂಕಿನ 1ನೇ ಅಲೆ ಹರಡುವಿಕೆಯಲ್ಲಿ ಈ ಮುಂಚೂಣಿ ಸೇನಾನಿಗಳು ನಿರ್ವಹಿಸಿದ ಕಾರ್ಯ ಅದ್ಭುತ ಮತ್ತು ಶ್ಲಾಘನೀಯ.

ಈ ಮಹಾಮಾರಿ ಸೊಂಕಿನ ವಿರುದ್ಧ ಹೋರಾಟದಲ್ಲಿ ಹಲವಾರು ಸೇನಾನಿಗಳ ತ್ಯಾಗ - ಬಲಿದಾನ ಅವಿಸ್ಮರಣೀಯ. ಈ ಆರೋಗ್ಯ ಕಾರ್ಯಕರ್ತರ ಭದ್ರತೆಗೆ ಕಳೆದ ವರ್ಷ ಕೇಂದ್ರ ಸರ್ಕಾರ ಒಂದು ಜೀವ ವಿಮೆ ಪಡೆದಿತ್ತು. ಅದರಂತೆ, ಪ್ರಸ್ತುತದ 2ನೇ ಅಲೆಯನ್ನು ನಿಯಂತ್ರಿಸಲು ಹೋರಾಡುತ್ತಿರುವ ಆರೋಗ್ಯ ಸೇನಾನಿಗಳ ಜೀವ ಭದ್ರತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತೊಮ್ಮೆ ಅವರ ಸುರಕ್ಷತೆಗೆ ಜೀವ ವಿಮೆ ಪಡೆದು ಅವರನ್ನು ಮತ್ತು ಅವರ ಅವಲಂಬಿತ ಕುಟುಂಬವನ್ನು ಕಾಪಾಡಲು ಮುಂದಾಗಬೇಕೆಂದು ಕೋರುತ್ತೇನೆ.

ಅದರಂತೆ, ಖಾಸಗಿ ಆಸ್ಪತ್ರೆಗಳಲ್ಲಿ ಅದರಲ್ಲೂ ಸಣ್ಣ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವುದರಲ್ಲಿ ಭಾಗಿಯಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಈ ಕಾರ್ಯಕರ್ತರಿಗೆ ಸರ್ಕಾರ ನೀಡುವ ಜೀವ ವಿಮೆಯ ಸುರಕ್ಷತೆಯಿಂದ ಹೊರಗೆ ಬಂದಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಇಂತಹ ಆರೋಗ್ಯ ಕಾರ್ಯಕರ್ತರ ಸುರಕ್ಷತೆಗೆ ಆರ್ಥಿಕ ನೆರವನ್ನು ಘೋಷಣೆ ಮಾಡಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಓದಿ: ನಾಳೆಯಿಂದ ಪೂರ್ಣ ಪ್ರಮಾಣದ ಸಾರಿಗೆ ಸೇವೆ: ಡಿಸಿಎಂ ಸವದಿ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.