ETV Bharat / state

ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಅಭಿವೃದ್ಧಿಗೆ ಆದ್ಯತೆ: ಸಚಿವ ಮಂಕಾಳ್ ವೈದ್ಯ - ಮತ್ಸ್ಯ ವಾಹಿನಿ

Coastal fish at the doorstep: ಬೆಂಗಳೂರಿನ ಮೀನು ಖಾದ್ಯ ಪ್ರಿಯರ ಮನೆ ಬಾಗಿಲಿಗೆ ಕರಾವಳಿ ಮೀನು ಮಾರಾಟ ಮಾಡುವ ದಿನಗಳು ಹತ್ತಿರವಾಗಿವೆ. ಮತ್ಸ್ಯ ವಾಹಿನಿಯಡಿ 150 ವಾಹಿನಿಗಳಿಗೆ ವಿಶ್ವ ಮತ್ಸೃ ದಿನವಾದ ನ.21ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಚಿವ ಮಂಕಾಳ್ ವೈದ್ಯ ತಿಳಿಸಿದ್ದಾರೆ.

Minister Mankal Vaidya spoke to the media.
ಸಚಿವ ಮಂಕಾಳ್ ವೈದ್ಯ ಮಾಧ್ಯಮವರೊಂದಿಗೆ ಮಾತನಾಡಿದರು.
author img

By ETV Bharat Karnataka Team

Published : Nov 9, 2023, 9:05 PM IST

ಬೆಂಗಳೂರು: ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಮಾಲೋಚನಾ ಸಭೆ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಮೀನುಗಾರಿಕೆ, ಒಳನಾಡು ಜಲಸಾರಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮೀನುಗಾರರಿಗೆ ನೀಡಲಾಗುತ್ತಿದ್ದ ವಾರ್ಷಿಕ ಡೀಸೆಲ್ ಪ್ರಮಾಣವು 1.50 ಲಕ್ಷ ಕಿ ಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗೆ ಹೆಚ್ಚಳ. ನಿರಂತರ ಮನವಿ ಮಾಡಿದರೂ ಕೇಂದ್ರ ಸರ್ಕಾರ ವಾರ್ಷಿಕ ಸೀಮೆ ಎಣ್ಣೆ (ಕೆರೋಸಿನ್) ಹಂಚಿಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಾಸಿಕ 200 ಲೀಟರ್ ವೈಟ್ ಪೆಟ್ರೋಲ್‌ನ್ನು ಲೀಟರ್‌ಗೆ 35 ರೂ.ನಂತೆ ಸಬ್ಸಿಡಿ ದರದಲ್ಲಿ 10 ತಿಂಗಳ ಕಾಲ ವಿತರಿಸಲಿದ್ದು, 300 ಲೀಟರ್‌ ವರೆಗೆ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಹೊಸ ಬಂದರು ನಿರ್ಮಾಣ:ಮೀನುಗಾರರಿಗೆ ವಿವಿಧ ಸವಲತ್ತುಗಳ ವಿತರಣೆ ಪ್ರಗತಿ, ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸಭೆ ಚರ್ಚಿಸಲಾಗಿದೆ. ಬೋಟ್‌ಗಳ ನಿಲುಗಡೆಗೆ ಅವಕಾಶವೂ ಸೇರಿ ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಿ ಕಾರವಾರ ಮತ್ತು ಮಂಗಳೂರಿನಲ್ಲಿ ಹೊಸದಾಗಿ ಬಂದರು ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ವಿಸ್ತೃತ ಯೋಜನಾ ವರದಿ ಸಿದ್ಧವಾದ ನಂತರ ಅಂದಾಜು ವೆಚ್ಚ ತಿಳಿಯಲಿದೆ.

ಒಂದು ಕೋಟಿ ರೂ. ನಿಂದ ಸಾವಿರ ಕೋಟಿ ರೂ. ವೆಚ್ಚ ಗಾತ್ರದ ಬಂದರುಗಳಿವೆ. ಮೂರು ಜಿಲ್ಲೆಗಳಲ್ಲಿ ಒಟ್ಟು 13 ದ್ವೀಪ ಗುರುತಿಸಲಾಗಿದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಬಳಸಿಕೊಳ್ಳಲು ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಚಿಂತನೆಯಿದ್ದು, ಅಂತಿಮವಾಗಿಲ್ಲ ಎಂದು ಮಾಹಿತಿ ನೀಡಿದರು.

ಸಾಗರಮಾಲಾ ಯೋಜನೆಯಡಿ 1,015 ಕೋಟಿ ಮಂಜೂರು: ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ 1,015 ಕೋಟಿ ರೂ. ರಾಜ್ಯಕ್ಕೆ ಮಂಜೂರು ಮಾಡಲಾಗಿದೆ. ಆದರೆ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಕಠಿಣ ನಿಯಮಗಳ ಕಾರಣ 2017ರಿಂದ ಬಳಕೆ ಸಾಧ್ಯವಾಗಿಲ್ಲ.ನಿರಂತರ ಮನವಿ ಬಳಿಕ ಕೇಂದ್ರ ಸರ್ಕಾರ ಸಿಆರ್‌ಝಡ್ ನಿಯಮಗಳಲ್ಲಿ ಅಲ್ಪ ಸಡಿಲಿಕೆ ನೀಡಿದ ಹಿನ್ನೆಲೆಯಲ್ಲಿ 320 ಕಿ.ಮೀ. ಉದ್ದದ ಕರಾವಳಿಯಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಅವಕಾಶ ಲಭಿಸಿದೆ. ಸಾಗರಮಾಲಾ ಯೋಜನೆಯಡಿ ಅಂದಾಜು ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ, ಜಲಸಾರಿಗೆ ಮಂಡಳಿ ಸಭೆಯಲ್ಲಿ ಅನುಮೋದನೆಗೆ ಮಂಡಿಸಲಾಗುವುದು ಎಂದು ಹೇಳಿದರು.

ಬೆಂಗಳೂರಿಗರಿಗೆ ಮೀನು ಖಾದ್ಯ: ಬೆಂಗಳೂರಿನ ಮೀನು ಖಾದ್ಯ ಪ್ರಿಯರ ಮನೆ ಬಾಗಿಲಿಗೆ ಕರಾವಳಿ ಮೀನು ಮಾರಾಟ ಮಾಡುವ ದಿನಗಳು ಹತ್ತಿರವಾಗಿವೆ. ಮತ್ಸ್ಯ ವಾಹಿನಿಯಡಿ 150 ವಾಹಿನಿಗಳಿಗೆ ವಿಶ್ವ ಮತ್ಸ್ಯದಿನವಾದ ನ.21ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಫ್ರಿಜ್, ತೂಕದ ಯಂತ್ರ ಮತ್ತಿತರ ಅನುಕೂಲತೆವುಳ್ಳ ಸುಸಜ್ಜಿತ ಎಂಟು ಲಕ್ಷ ರೂ. ವೆಚ್ಚದ ವಾಹನಗಳಲ್ಲಿ ಕರಾವಳಿಯ ತರಹೇವಾರಿ ಮೀನುಗಳ ಮಾರಾಟ ವ್ಯವಸ್ಥೆಯಿರುತ್ತದೆ. ಆಸಕ್ತರು ಅರ್ಜಿ ಸಲ್ಲಿಸಿದರೆ ಎರಡು ಲಕ್ಷ ರೂ. ಭದ್ರತಾ ಠೇವಣಿ, ಮಾಸಿಕ ಮೂರು ಸಾವಿರ ರೂ. ನಿರ್ವಹಣಾ ವೆಚ್ಚ ಭರಿಸುವ ಷರತ್ತಿನ ಮೇಲೆ ಈ ವಾಹನಗಳನ್ನು ವಿತರಿಸಲಾಗುತ್ತದೆ.

ಬೇಡವೆಂದಾಗ ವಾಹನಗಳನ್ನು ಹಿಂತಿರುಗಿಸಿ, ಭದ್ರತಾ ಠೇವಣಿ ವಾಪಸ್​ ಪಡೆಯಲು ಅವಕಾಶವಿದೆ. ಮೊದಲ ಹಂತದಲ್ಲಿ 150 ಮತ್ಸ್ಯ ವಾಹಿನಿಗಳು ಬೆಂಗಳೂರಿನಲ್ಲಿ ಸಂಚರಿಸಿ ಮೀನುಗಳನ್ನು ಮಾರಾಟ ಮಾಡಲಿದ್ದು, ಎರಡನೇ ಹಂತದಲ್ಲಿ ವಿಸ್ತರಿಸಲೆಂದು ಮತ್ತೆ 150 ವಾಹನಗಳನ್ನು ಈ ಯೋಜನೆಗೆ ಸೇರಿಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಶಾಸಕರಾದ ಶಿವರಾಮ್ ಹೆಬ್ಬಾರ್, ದಿನಕರ್ ಶೆಟ್ಟಿ, ಉಮಾನಾಥ್ ಕೋಟ್ಯನ್, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ವೇದವ್ಯಾಸ್ ಕಾಮತ್, ಸತೀಶ್ ಸೈಲ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ ನಾಯಕ್ ಹಾಗೂ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ:ಮಂಗಳೂರಲ್ಲಿ ಮರಳು ಸಮಸ್ಯೆಯಿಂದ ಕಾಮಗಾರಿಗಳಿಗೆ ಸಂಕಷ್ಟ, ನಾಳೆ ಪ್ರತಿಭಟನೆ: ಮಹಾಬಲ ಕೊಟ್ಟಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.