ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಇಂದು ಮುಂಜಾನೆಯಿಂದ ಹಲವು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು.
ಯಡಿಯೂರಪ್ಪ ಸರ್ಕಾರ ಬಂದ ಮೇಲೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ವಿವಿಧ ಹಿರಿಯ ಅಧಿಕಾರಿಗಳು ತೆರಳಿದ್ದರು. ಡಿಸಿಪಿ ರವಿ ಡಿ. ಚನ್ನಣ್ಣನವರ್, ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು, ಎಡಿಜಿಪಿ ಹಾಗೂ ನಿನ್ನೆ ಅಧಿಕಾರ ವಹಿಸಿಕೊಂಡ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಲವಾರು ಅಧಿಕಾರಿಗಳು ಭೇಟಿ ನೀಡಿ ಸಿಎಂ ಜೊತೆ ಮಾತುಕತೆ ನಡೆಸಿದರು.
ಇನ್ನು ಅನರ್ಹ ಶಾಸಕ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ಕೋರಿದರು.