ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಪೊಲೀಸ್ ಸಿಬ್ಬಂದಿಯಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿವೆ. ಇದರ ಮುಂದುವರೆದ ಭಾಗವಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಕೊರೊನಾಗೆ ಬಲಿಯಾಗಿದ್ದಾರೆ.
ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ಲೆಕ್ಕಾಧಿಕಾರಿ ಮಂಜುನಾಥ್ ಪ್ರಸಾದ್ ಕೊರೊನಾಗೆ ಬಲಿಯಾದ ಸಿಬ್ಬಂದಿ. ಕೆಲ ದಿನಗಳ ಹಿಂದೆ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡಿದ್ದವು. ಆಸ್ಪತ್ರೆಗೆ ಹೋಗಿ ತಪಾಸಣೆ ನಡೆಸಿದಾಗ ಕೊರೊನಾ ದೃಢವಾಗಿತ್ತು. ಕ್ವಾರಂಟೈನ್ನಲ್ಲಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಿಬ್ಬಂದಿ ಮೃತಪಟ್ಟ ಬೆನ್ನಲ್ಲೇ 6ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಇನ್ನುಳಿದ ಸಿಬ್ಬಂದಿಯಲ್ಲಿ ಆತಂಕ ಮನೆಮಾಡಿದೆ.