ETV Bharat / state

ಶಿವಮೊಗ್ಗ ಗಲಭೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿಪಿ ಅಲೋಕ್ ಮೋಹನ್ - etv bharat karnataka

ಶಿವಮೊಗ್ಗ ಗಲಭೆ ಸಂಬಂಧ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಈಗ ಶಾಂತವಾಗಿದೆ ಎಂದು ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

dgp-alok-mohan-reaction-on-shimogga-riot
ಶಿವಮೊಗ್ಗ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿಪಿ ಅಲೋಕ್ ಮೋಹನ್
author img

By ETV Bharat Karnataka Team

Published : Oct 4, 2023, 2:27 PM IST

ಶಿವಮೊಗ್ಗ ಗಲಭೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿಪಿ ಅಲೋಕ್ ಮೋಹನ್

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಗಲಭೆ ಸಂಬಂಧಿಸಿದಂತೆ ಪರಿಸ್ಥಿತಿ ನಿಭಾಯಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನ ಕೈಗೊಂಡಿದ್ದು, ಸದ್ಯ ಸಹಜ‌ ಸ್ಥಿತಿಯಲ್ಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರದ ಡಿಸಿಪಿ ಹಾಗೂ ಹಿರಿಯ ಅಧಿಕಾರಿಗಳೊಡನೆ ಸಭೆ ನಡೆಸಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಜಿಪಿ, ಶಿವಮೊಗ್ಗ ಗಲಭೆ ಘಟನೆಯನ್ನ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಘಟನೆ ಬಳಿಕ ಅಲ್ಲಿನ ಉದ್ವಿಗ್ನತೆಯನ್ನು ಸಹಜ ಸ್ಥಿತಿಗೆ ತರಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಈಗ ಶಾಂತವಾಗಿದೆ.‌ ಗಲಭೆಯಲ್ಲಿ ಈವರೆಗೆ 27 ಪ್ರಕರಣ ದಾಖಲಾಗಿದ್ದು‌, 64 ಜನರ ಬಂಧನ ಮಾಡಲಾಗಿದೆ. ಮುಂದೆ ಈ ರೀತಿ ಗಲಭೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಡಿಜಿಪಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಗಿಗುಡ್ಡ ಸಹಜ ಸ್ಥಿತಿಯಲ್ಲಿದೆ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.