ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಗಲಭೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಡಿಜಿ ಅವರು ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡಿ ತೆರಳಿದ್ದಾರೆ. ಕೇವಲ 15 ನಿಮಿಷದಲ್ಲೇ ಸಿಎಂ ನಿವಾಸದಿಂದ ತೆರಳಿದ್ದಾರೆ. ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ವ್ಯಪ್ತಿಯಲ್ಲಿ ನಿನ್ನೆ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಸಿಎಂ ಬಿಎಸ್ವೈ ಪಡೆದುಕೊಂಡಿದ್ದು. ಅದೇ ರೀತಿ ಕಾನೂನು ಸುವ್ಯವಸ್ಥೆ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಡಿಜಿ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಅತಿ ಸೂಕ್ಷ್ಮ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.