ETV Bharat / state

ಧ್ರುವ ಸರ್ಜಾ ನಟನೆಯ ಚಿತ್ರದ ಟೈಟಲ್​ ಬಿಡುಗಡೆ: ಚಿತ್ರದ ಬಗ್ಗೆ ಕುತೂಹಲ ಇದೆ ಎಂದ ಸಂಜುಬಾಬಾ - kannada kd film releasing date

ಧ್ರುವ ಸರ್ಜಾ ಅಭಿನಯದ ಜೋಗಿ ಖ್ಯಾತಿಯ ಪ್ರೇಮ್​ ನಿರ್ದೇಶನದ ಚಿತ್ರದ ಟೈಟಲ್​ ಅನ್ನು ಬೆಂಗಳೂರಿನ ಮಾಲ್​ವೊಂದರಲ್ಲಿ ಬಿಡುಗಡೆ ಗೊಳಿಸಿದ್ದಾರೆ.

Kn_Bng_02_Pre
ಚಿತ್ರದ ಟೈಟಲ್​ ಬಿಡುಗಡೆಯಲ್ಲಿ ಭಾಗಿಯಾದ ನಟರು
author img

By

Published : Oct 21, 2022, 12:21 PM IST

ಜೋಗಿ ಖ್ಯಾತಿಯ ನಿರ್ದೇಶಕ ಪ್ರೇಮ್‌, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ‌ ಕಾಂಬಿನೇಷನ್‌ನಲ್ಲಿ ಮೂಡಿ ಬರ್ತೀರೋ‌ ಸಿನಿಮಾದ ಟೈಟಲ್ ಅನಾವರಣಗೊಂಡಿದೆ. ಬೆಂಗಳೂರಿನ ಮಾಲ್​ವೊಂದರಲ್ಲಿ ನಿನ್ನೆ ನಡೆದ ಚಿತ್ರದ ಟೈಟಲ್ ಲಾ‌ಂಚ್ ಕಾರ್ಯಕ್ರಮಕ್ಕೆ ಬಾಲಿವುಡ್ ನಟ‌ ಸಂಜಯ್ ದತ್, ನಟಿ‌ ರಕ್ಷಿತಾ ಪ್ರೇಮ್, ಧ್ರುವ ಸರ್ಜಾ, ಪ್ರೇಮ್, ನಿರ್ಮಾಪಕರಾದ ಸಾಯಿ ಕೊರಾಪಾಟಿ, ಅನಿಲ್ ತಧಾನಿ, ರಮೇಶ್ ರೆಡ್ಡಿ ಸೇರಿದಂತೆ ಚಿತ್ರರಂಗದ ನಿರ್ಮಾಪಕರು ಪಾಲ್ಗೊಂಡಿದ್ದರು.

ಕೆಜಿಎಫ್‌ 2 ಚಿತ್ರದಲ್ಲಿ ಅಧೀರ ಪಾತ್ರ ಮಾಡಿದ್ದ ಸಂಜಯ್ ದತ್ ಈಗ ಕೆಡಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದೇನೆ ಎಂದು ಅವರು, ಟೀಸರ್ ತುಂಬ ಚೆನ್ನಾಗಿದೆ. ಈ ಸಿನಿಮಾದ ಮೇಲೆ ತುಂಬಾ ಎಕ್ಸ್​ಪೆಕ್ಟೆಷನ್‌ ಇದೆ. ಸೌತ್ ಸಿನಿಮಾಗಳಲ್ಲಿ ತುಂಬಾ ಎನರ್ಜಿ‌ ಇರುತ್ತೆ. ಕೆಜಿಎಫ್ ನಲ್ಲಿ ಕೆಲಸ ಮಾಡಿದ್ದೇನೆ. ಆ ಸಿ‌ನಿಮಾದ ವರ್ಕ್ ಪ್ರೆಶರ್​ ಬಗ್ಗೆ ಗೊತ್ತು.

ಈ ಸಿನಿಮಾ‌ ಕೂಡ ದೊಡ್ಡ ಸಕ್ಸಸ್ ಆಗುತ್ತೆ. ಅಂತಹ ಕಂಟೆಂಟ್ ಸಿನಿಮಾದಲ್ಲಿದೆ. ಈ ಸಿನಿಮಾದ ಬಗ್ಗೆ ನಾನು ಏನು ಹೇಳೋಲ್ಲಾ ಎಲ್ಲಾ ಪ್ರೇಮ್ ಅವರೆ ಹೆಳ್ತಾರೆ. ಅವರ ತಲೆಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಅವರು ಹೇಗೆ ಹೇಳ್ತಾರೋ ಹಾಗೆ ಅಭಿನಯಿಸುತ್ತೇನೆ. ನನಗು ನನ್ನ ಪಾತ್ರದ ಬಗ್ಗೆ ಕುತೂಹಲ ಅಂತಾ ಸಂಜು ಬಾಬ ಹೇಳಿದರು.

ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆ: ಈ ಸಿನಿಮಾವು 1970ರಲ್ಲಿ ನಡೆದ ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆಯನ್ನು ಹೊಂದಿದೆ. ಬೆಂಗಳೂರಿನಲ್ಲಿ ನಡೆದ ಈ ಕಥೆ ರೋಚಕವಾಗಿದ್ದು, ನೈಜವಾಗಿ ತೆರೆಮೇಲೆ ತರುವ ಪ್ರಯತ್ನ ಮಾಡಲಿದ್ದೇನೆ. ಸದ್ಯ 'ಕೆಡಿ' ಎಂದು ಟೈಟಲ್ ಅನೌನ್ಸ್ ಮಾಡಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಹಾಗಾಗಿ, ಪರಭಾಷೆಯ ಕಲಾವಿದರು ಕೂಡ ಇರಲಿದ್ದಾರೆ.

ಪಾತ್ರಕ್ಕೆ ಹೊಂದಿಕೆ ಆಗುವುದರಿಂದ ಅವರನ್ನು ಆಯ್ಕೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಅವರೆಲ್ಲ ಯಾರು ಎಂಬುದನ್ನು ಹೇಳಲಿದ್ದೇವೆ ಎಂದು ನಿರ್ದೇಶಕ ಪ್ರೇಮ್ ಹೇಳಿದರು.

ಮಚ್ಚು ಹಿಡಿದು ಖಡಕ್ ಆಗಿ ಪೋಸ್ ನೀಡಿರುವ ನಟ ಧ್ರುವ ಸರ್ಜಾ, ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಂಡಿದ್ದಾರಂತೆ. ಈಗಾಗಲೇ ಅವರು 7 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಧ್ರುವ ರೆಟ್ರೋ ಶೈಲಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಇದೊಂದು ಮಾಸ್ ಆಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ಕಾಳಿದಾಸ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಪರಭಾಷೆಯ ಪತ್ರಕರ್ತರ ಎದುರು ತಮ್ಮ ಪರಿಚಯ ಮಾಡಿಕೊಂಡ ಧ್ರುವ, ನಾನಿನ್ನೂ ಕೇವಲ 5 ಸಿನಿಮಾ ಮಾಡಿರುವ ನಟ. ಇದು ನನ್ನ 6ನೇ ಸಿನಿಮಾ. ನಾನು ಹುಟ್ಟಿದ್ದು, ಆರನೇ ತಾರೀಖು. ನನ್ನ ಲಕ್ಕಿ ನಂಬರ್ ಆರು. ಹಾಗೆಯೇ ಇದು ನನ್ನ 6ನೇ ಚಿತ್ರ. ಇದಿನ್ನೂ ಆರಂಭ ಅಷ್ಟೇ. ಚಿತ್ರೀಕರಣಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು.

ಕೆಡಿ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ತಮಿಳು ಟೈಟಲ್ ಟೀಸರ್‌ಗೆ ವಿಜಯ್‌ ಸೇತುಪತಿ ಧ್ವನಿ ನೀಡಿದ್ದಾರೆ. ಮಲಯಾಳಂ ಟೈಟಲ್ ಟೀಸರ್‌ಗೆ ಮೋಹನ್‌ಲಾಲ್‌ ಹಾಗೂ ಹಿಂದಿ ಟೈಟಲ್ ಟೀಸರ್‌ಗೆ ಸಂಜಯ್‌ ದತ್‌ ಅವರು ಧ್ವನಿ ನೀಡಿದ್ದಾರೆ.

ಕೆವಿನ್‌ ಪ್ರೊಡಕ್ಷನ್‌ನಲ್ಲಿ ಮೂಡಿಬರುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಪ್ರೇಮ್ ಅವರ 9ನೇ ಸಿನಿಮಾ ಈ ಕೆಡಿ. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಲಿದ್ದು, ವಿಕ್ರಾಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್‌ ಛಾಯಾಗ್ರಹಣ ಮಾಡಲಿದ್ದಾರೆ. ಬಹುತೇಕ ಸೆಟ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ದೊಡ್ಡ ದೊಡ್ಡ ಸೆಟ್‌ಗಳನ್ನು ಹಾಕಲಾಗುತ್ತಿದೆ. ಈ ವರ್ಷದಿಂದ ಕೆಡಿ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: ಐತಿಹಾಸಿಕ‌ ಕ್ಷಣಕ್ಕೆ ಸಾಕ್ಷಿಯಾಗಲಿದೆ‌ ಗಂಧದ ಗುಡಿ ಚಿತ್ರ ಪ್ರೀ ರಿಲೀಸ್ ಕಾರ್ಯಕ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.