ETV Bharat / state

ಜೆಡಿಎಸ್ ವರಿಷ್ಠರಿಗೆ ಸಿಕ್ಕಿದೆಯೇ ಮಧ್ಯಂತರ ಚುನಾವಣೆಯ ಮುನ್ಸೂಚನೆ? - EX CM Kumaraswamy

ಇಂದಿನ ರಾಜಕೀಯ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಸಾಧ್ಯತೆ ಹೆಚ್ಚಿದೆ. ಮಧ್ಯಂತರ ಚುನಾವಣೆ ಬಂದ್ರೆ ನಾವು ಏಕಾಂಗಿಯಾಗಿಯೇ ಸ್ಪರ್ಧಿಸೋಣ. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜನವರಿ-ಫೆಬ್ರವರಿಯಲ್ಲಿ ಚುನಾವಣೆ ಬಂದರೂ ಆಶ್ಚರ್ಯ ಇಲ್ಲ ಎಂದಿದ್ದಾರೆ.

ಜೆಡಿಎಸ್ ವರಿಷ್ಠರಿಗೆ ಸಿಕ್ಕಿದೆಯೇ ಮಧ್ಯಂತರ ಚುನಾವಣೆ ಮುನ್ಸೂಚನೆ ?
author img

By

Published : Sep 16, 2019, 8:21 PM IST

ಬೆಂಗಳೂರು: ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಬರಬಹುದು. ಇಂದಿನ ರಾಜಕೀಯ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಸಾಧ್ಯತೆ ಹೆಚ್ಚಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪಕ್ಷದ ಮುಖಂಡರಿಗೆ ಮುನ್ಸೂಚನೆ ನೀಡಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಮುಖಂಡರ ಸಭೆಯಲ್ಲಿ ದೊಡ್ಡಗೌಡರು ಈ ವಿಷಯದ ಕುರಿತು ಪ್ರಸ್ತಾಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಮುಖಂಡರು ಮೈಮರೆಯದೇ ಪಕ್ಷ ಸಂಘಟನೆ ಮಾಡಿ ಎಂದು ಶಿವಮೊಗ್ಗ ಮುಖಂಡರ ಸಭೆಯಲ್ಲಿ ಮಧ್ಯಂತರ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ ದೇವೇಗೌಡರು, ಮಧ್ಯಂತರ ಚುನಾವಣೆ ಬಂದ್ರೆ ನಾವು ಏಕಾಂಗಿಯಾಗಿಯೇ ಸ್ಪರ್ಧಿಸೋಣ. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜನವರಿ-ಫೆಬ್ರವರಿಯಲ್ಲಿ ಚುನಾವಣೆ ಬಂದರೂ ಆಶ್ಚರ್ಯ ಇಲ್ಲ ಎಂದಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ನಾನು ಸಹ ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಬಲಪಡಿಸುತ್ತೇನೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದರೂ ನಮಗೆ ಸಹಕಾರ ಸಿಗಲಿಲ್ಲ. ಇನ್ಮುಂದೆ ಈ ಹಿಂದೆ ಆದಂತೆ ಯಾವುದೇ ತಪ್ಪು ಮರುಕಳಿಸಬಾರದು. ಎಲ್ಲ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸೋಣ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಿ ಪಕ್ಷ ಸಂಘಟಿಸಲು ಮುಖಂಡರಿಗೆ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಗೌಡರ ಟಾಂಗ್:

ತುಂಬಾ ಜನ ಪಕ್ಷ ಬಿಟ್ಟು ಹೋಗಿದ್ದಾರೆ. ಯಾರು ಪಕ್ಷ ಬಿಟ್ಟು ಹೋದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷದಲ್ಲೇ ಏಳಿಗೆ ಕಂಡು ಇಂದು ಪಕ್ಷದ ವಿರುದ್ಧವೇ ಮಾತಾಡ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ. ನನಗೆ ಪಕ್ಷ ಕಟ್ಟೋದು ಗೊತ್ತು. ಕಾರ್ಯಕರ್ತರು ನನ್ನ ಜೊತೆ ಇದ್ದರೆ ಸಾಕು. ಮತ್ತೆ ಪಕ್ಷ ಅಧಿಕಾರಿಕ್ಕೆ ತರುತ್ತೇನೆ ಎಂದು ಪಕ್ಷ ಬಿಟ್ಟು ಹೋದವರಿಗೆ ದೇವೇಗೌಡರು ಟಾಂಗ್ ನೀಡಿದ್ದಾರೆ.

Intro:ಬೆಂಗಳೂರು : ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಬರಬಹುದು. ಇಂದಿನ ರಾಜಕೀಯ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಸಾಧ್ಯತೆ ಹೆಚ್ಚಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪಕ್ಷದ ಮುಖಂಡರಿಗೆ ಮುನ್ಸೂಚನೆ ನೀಡಿದ್ದಾರೆ.Body:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಮುಖಂಡರ ಸಭೆಯಲ್ಲಿ ಗೌಡರು ಈ ವಿಷಯದ ಕುರಿತು ಪ್ರಸ್ತಾಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಮುಖಂಡರು ಮೈ ಮರಿಯದೇ ಪಕ್ಷ ಸಂಘಟನೆ ಮಾಡಿ.
ಶಿವಮೊಗ್ಗ ಮುಖಂಡರ ಸಭೆಯಲ್ಲಿ ಮಧ್ಯಂತರ ಚುನಾವಣೆ ಬಗ್ಗೆ ಪ್ರಸ್ತಾಪ ಮಾಡಿದ ದೇವೇಗೌಡರು, ಮಧ್ಯಂತರ ಚುನಾವಣೆ ಬಂದರೆ ನಾವು ಏಕಾಂಗಿ ಸ್ಪರ್ಧೆ ಮಾಡೋಣ. ಜನವರಿ-ಫೆಬ್ರವರಿಯಲ್ಲಿ ಚುನಾವಣೆ ಬಂದರೂ ಆಶ್ಚರ್ಯ ಇಲ್ಲ ಎಂದಿದ್ದಾರೆ ಎನ್ನಲಾಗಿದೆ.
ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜಿಲ್ಲಾ ಪದಾಧಿಕಾರಿಗಳ ಬದಲಾವಣೆ ಮಾಡುವುದಾದರೆ ಮಾಡಿ. ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ. ನಾನು ಸಹ ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಬಲಪಡಿಸುತ್ತೇನೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದರೂ ನಮಗೆ ಸಹಕಾರ ಸಿಗಲಿಲ್ಲ. ಇನ್ನು ಮುಂದೆ ಆ ತಪ್ಪು ಮಾಡಲ್ಲ. ಎಲ್ಲ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸೋಣ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಿ ಪಕ್ಷ ಸಂಘಟಿಸಲು ಮುಖಂಡರಿಗೆ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಗೌಡರ ಟಾಂಗ್ : ಯಾರು ಪಕ್ಷ ಬಿಟ್ಟು ಹೋದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ತುಂಬಾ ಜನ ಹೀಗೆ ಪಕ್ಷ ಬಿಟ್ಟು ಹೋಗಿದ್ದಾರೆ. ಪಕ್ಷದಲ್ಲಿ ಬೆಳೆದು ಇವತ್ತು ಪಕ್ಷದ ವಿರುದ್ದ ಮಾತಾಡ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ. ನನಗೆ ಪಕ್ಷ ಕಟ್ಟೋದು ಗೊತ್ತು. ಕಾರ್ಯಕರ್ತರು ನನ್ನ ಜೊತೆ ಇದ್ದರೆ ಸಾಕು. ಮತ್ತೆ ಪಕ್ಷ ಅಧಿಕಾರಿಕ್ಕೆ ತರುತ್ತೇನೆ ಎಂದು ಪಕ್ಷ ಬಿಟ್ಟು ಹೋದವರಿಗೆ ದೇವೇಗೌಡರು ಟಾಂಗ್ ನೀಡಿದ್ದಾರೆ ಎನ್ನಲಾಗಿದೆ.
ಇಂದಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೆ ಸರಿಪಡಿಸಿಕೊಂಡು ಹೋಗಿ ಎಂದು ಸಭೆಯಲ್ಲಿ ಮುಖಂಡರಿಗೆ ದೇವೇಗೌಡ ಕಿವಿಮಾತು ಹೇಳಿದ್ದಾರೆ ಎನ್ನಲಾಗುತ್ತಿದೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.