ETV Bharat / state

ಡಿಜಿಟಲ್‌ ಇಂಡಿಯಾದತ್ತ ಮಹತ್ವದ ಹೆಜ್ಜೆ; ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಡಿಜಿ ಲಾಕರ್‌ - ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ರಕ್ಷಣೆಗೆ ಡಿಜಿಟಲ್​ ಲಾಕರ್​

ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ಉದ್ದೇಶದಿಂದ ʼಶೈಕ್ಷಣಿಕ ಡಿಜಿ ಲಾಕರ್‌ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ತರಲು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಮುಂದಾಗಿದ್ದಾರೆ.

Digi locker facility
ಡಿಜಿ ಲಾಕರ್ ಸೌಲಭ್ಯ
author img

By

Published : Jan 6, 2021, 6:57 PM IST

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಿಂದ ಮೊದಲ್ಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಎಲ್ಲ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಮುಂದಾಗಿದ್ದಾರೆ.

ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಡಿಜಿಟಲ್‌ನತ್ತ ಕೊಂಡೊಯ್ಯುವ ಇನ್ನೊಂದು ಮಹತ್ವದ ಹೆಜ್ಜೆ ಇರಿಸಿರುವ ಇಲಾಖೆ ಈ ಸಂಬಂಧ ಬೆಂಗಳೂರಿನ ವಿಧಾನಸೌಧದಲ್ಲಿ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿ ಅಲ್ಲಿ ಈ ತೀರ್ಮಾನವನ್ನು ಕೈಗೊಂಡಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ʼಶೈಕ್ಷಣಿಕ ಡಿಜಿ ಲಾಕರ್‌ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ತರಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುವ ಜತೆಗೆ ಉದ್ಯೋಗದಾತರಿಗೂ ಇವು ಲಭ್ಯವಾಗುವ ವ್ಯವಸ್ಥೆ ಜಾರಿಗೆ ಬರಲಿದೆ. ಇನ್ನು ಮುಂದೆ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ನಿಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಈಗಾಗಲೇ ಕೇಂದ್ರ ಸರ್ಕಾರದ ಮಟ್ಟದಲ್ಲಿ ಜಾರಿಯಾಗಿರುವ ಶೈಕ್ಷಣಿಕ ಡಿಜಿ ಲಾಕರ್‌ ವ್ಯವಸ್ಥೆಯನ್ನು ರಾಜ್ಯದಲ್ಲೂ ಕೂಡಲೇ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಸಂಬಂಧ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವರ ನೇತೃತ್ವದಲ್ಲಿಯೇ ಉನ್ನತಾಧಿಕಾರ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಕಾರ್ಯಕ್ರಮ ಅನುಷ್ಠಾನ ಪ್ರಗತಿಯನ್ನು ಪರಿಶೀಲನೆ ಮಾಡಲಾಗುವುದು. ಸರ್ಕಾರಿ, ಖಾಸಗಿ ಸೇರಿದಂತೆ ಯಾವುದೇ ಪದವಿ ಪ್ರದಾನ ಮಾಡುವ ವಿಶ್ವವಿದ್ಯಾಲಯ, ಕಾಲೇಜು, ಡೀಮ್ಡ್‌ ಯುನಿವರ್ಸಿಟಿಗಳೂ ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಈ ವ್ಯವಸ್ಥೆಗೆ ಕಡ್ಡಾಯವಾಗಿ ಸೇರಿಕೊಳ್ಳಬೇಕು ಎಂದು ಡಿಸಿಎಂ ಸಭೆಯಲ್ಲಿ ಸೂಚಿಸಿದರು.

ಏನಿದು ಶೈಕ್ಷಣಿಕ ಡಿಜಿ ಲಾಕರ್?:
ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ ಎಂದು ಕರೆಯಲಾಗುತ್ತದೆ. ಕೇಂದ್ರ ಸರಕಾರದ ಉಸ್ತುವಾರಿಯಲ್ಲಿ ಇದು ಕೆಲಸ ಮಾಡುತ್ತದೆ. ಸಂಗ್ರಹಣಾ ಸ್ಥಳವನ್ನು ಈ ಸಂಸ್ಥೆಯೇ ಒದಗಿಸುತ್ತದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪದವಿ ಪ್ರಮಾಣ ಪತ್ರಗಳು, ವರ್ಗಾವಣೆ ಪತ್ರ ಸೇರಿದಂತೆ ಅವರ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಇಲ್ಲಿ ಭದ್ರವಾಗಿ ಸಂಗ್ರಹಿಸಿಡಲಾಗಿರುತ್ತದೆ.

ಹತ್ತನೇ ತರಗತಿ, ಪಿಯುಸಿ, ಡಿಗ್ರಿ, ಡಿಪ್ಲೊಮೋ, ಎಂಜಿನಿಯರಿಂಗ್‌, ಪದವಿ, ಸ್ನಾತಕೋತ್ತರ, ಐಟಿಐ ಸೇರಿದಂತೆ ಇನ್ನೂ ಅನೇಕ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದಾಖಲೆಗಳು ಇಲ್ಲಿ ಸಂಗ್ರಹವಾಗುತ್ತವೆ. ತನ್ನ ದಾಖಲೆಗಳನ್ನು ಆಕ್ಸೆಸ್‌ ಮಾಡಲು ಪ್ರತಿ ವಿದ್ಯಾರ್ಥಿಗೂ ಅವಕಾಶ ಇರುತ್ತದೆ. ಯಾವಾಗ ಬೇಕಾದರೂ ಅವುಗಳನ್ನು ನೋಡಿಕೊಳ್ಳಬಹುದು. ಜತೆಗೆ, ಆ ವಿದ್ಯಾರ್ಥಿಯ ಉದ್ಯೋಗದಾತನೂ ಕೂಡ ಆ ಉದ್ಯೋಗ ನೀಡುವುದಕ್ಕೆ ಮುನ್ನ ಪರಿಶೀಲನೆ ಮಾಡಬಹುದು. ಇಲ್ಲಿ ಎಲ್ಲ ದಾಖಲೆಗಳು ಸುರಕ್ಷಿತವಾಗಿರುತ್ತವೆ ಹಾಗೂ ಕದಿಯುವ ಅಥವಾ ಕಳುವಾಗುವ ಅವಕಾಶ ಇರುವುದೇ ಇಲ್ಲ. ನಕಲು ಮಾಡುವ ಸಾಧ್ಯತೆಯೂ ಇರುವುದಿಲ್ಲ. ಮಳೆ, ಗಾಳಿಗೆ ಸಿಕ್ಕಿ ಹಾಳಾಗುತ್ತವೆ ಎನ್ನುವ ಭಯವೂ ಇರುವುದಿಲ್ಲ.

ಶೈಕ್ಷಣಿಕ ಡಿಜಿ ಲಾಕರ್‌ ಬಳಕೆ ಹೇಗೆ?
ಅಂದಹಾಗೆ ಈ ಲಾಕರ್‌ನ ಪ್ರವೇಶ ಸುಲಭ. ಪ್ರತಿ ವಿದ್ಯಾರ್ಥಿಯೂ ತನ್ನ ಆಧಾರ್‌ ಸಂಖ್ಯೆ ಮೂಲಕ ನ್ಯಾಷನಲ್ ಅಕಾಡೆಮಿ ಡಿಪೊಸಿಟರಿ- ಎನ್ಎಡಿ ಪೋರ್ಟಲ್‌ಗೆ ನೋಂದಣಿ ಮಾಡಿಕೊಳ್ಳಬಹುದು. ಅದರಲ್ಲಿ ತನ್ನ ಇ-ಕೆವೈಸಿಯನ್ನು ಭರ್ತಿ ಮಾಡಿ ಅಪ್‌ಲೋಡ್‌ ಮಾಡಿದ ನಂತರ ತನ್ನೆಲ್ಲ ದಾಖಲೆಗಳನ್ನು ಯಾವುದೇ ವಿದ್ಯಾರ್ಥಿಯೂ ಆಕ್ಸೆಸ್‌ ಮಾಡಬಹುದು. ಇನ್ನು ಎಲ್ಲ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ತಮ್ಮಲ್ಲಿ ವ್ಯಾಸಂಗ ಮಾಡಿ ಪದವಿ ಅಥವಾ ಯಾವುದೇ ಸರ್ಟಿಫಿಕೇಟ್‌ ಪಡೆದ ವಿದ್ಯಾರ್ಥಿಯ ಎಲ್ಲ ದಾಖಲೆಗಳನ್ನು ಡಿಜಿಟಲ್‌ ಸಹಿಯೊಂದಿಗೆ ಈ ಪೋರ್ಟಲ್‌ಗೆ ಅಪ್‌ಲೋಡ್‌ ಮಾಡಬೇಕು.
ಹಣಕಾಸು ಹೊರೆ ಇಲ್ಲ:
ನಮ್ಮ ವಿದ್ಯಾರ್ಥಿಗಳ ದಾಖಲೆಗಳಿಗೆ ಬೇಕಾದ ಸ್ಪೇಸ್‌ ಅನ್ನು ಎನ್ಎಡಿ ನೀಡುತ್ತದೆ. ನಿರ್ವಹಣೆ ಮತ್ತು ಭದ್ರತೆಯ ಹೊಣೆಗಾರಿಕೆಯೂ ಆ ಸಂಸ್ಥೆಯದ್ದೇ. ಹೀಗಾಗಿ ರಾಜ್ಯಕ್ಕೆ ಹಣಕಾಸು ಹೊರೆ ಬೀಳುವುದಿಲ್ಲ. ನಮ್ಮ ಕಡೆಯಿಂದ ವಿದ್ಯಾರ್ಥಿಗಳ ದಾಖಲೆಗಳನ್ನು ಅಪ್‌ಲೋಡ್‌ ಮಾಡಿದರೆ ಸಾಕು.

ಸಭೆಯಲ್ಲಿ ಇ- ಆಡಳಿತ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಪಿಯು ನಿರ್ದೇಶಕಿ ಸ್ನೇಹಲ್, ಪ್ರೌಢಶಿಕ್ಷಣ ಇಲಾಖೆಯ ನಿರ್ದೇಶಕಿ ಸುಮಂಗಲ ಹಾಜರಿದ್ದರು. ಎನ್ಎಡಿ ಪ್ರತಿನಿಧಿ ಅಮಿತ್ ಅವರು ದೆಹಲಿಯಿಂದಲೇ ವಿಡಿಯೊ ಕಾನ್ಫರೆನ್ಸ್​ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ರೈಲು ಹರಿದು ಇಬ್ಭಾಗವಾದ ದೇಹ... ಈತ ಬದುಕಿದ್ದು ಎಷ್ಟು ಗಂಟೆ ಅಂತಾ ಕೇಳಿದ್ರೆ ಶಾಕ್​ ಆಗ್ತೀರಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.