ETV Bharat / state

ಫೋನ್ ಕದ್ದಾಲಿಕೆ: ನ್ಯಾಯಾಂಗ ತನಿಖೆಗೆ ದಿನೇಶ್ ಗುಂಡೂರಾವ್ ಒತ್ತಾಯ - ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ವಿಚಾರವಾಗಿ ಕಾಂಗ್ರೆಸ್‌ ಮುಖಂಡರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

dinesh gundu rao demands judicial probe
ದಿನೇಶ್ ಗುಂಡೂರಾವ್
author img

By

Published : Aug 23, 2020, 3:12 PM IST

ಬೆಂಗಳೂರು: ರಾಜ್ಯ ಬಿಜೆಪಿ ಮುಖಂಡರ ವಿರುದ್ಧ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಹಿನ್ನೆಲೆ ಕಾಂಗ್ರೆಸ್‌ ಮುಖಂಡರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಬಿಜೆಪಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಹರಿಹಾಯ್ದರು

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಈಗಾಗಲೇ ಈ ವಿಚಾರವಾಗಿ ಮಾತನಾಡಿದ್ದಾರೆ. ನಮ್ಮ ಮುಖಂಡರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಹೈಕೋರ್ಟ್ ​ಹಾಲಿ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದರು.

ಬಿಜೆಪಿಯ ಗೃಹ ಸಚಿವರು ಮನಸೋ ಇಚ್ಛೆ ಮಾತನಾಡುತ್ತಾರೆ. ಬಾಯಿ ಬಿಟ್ರೆ ಬರೀ ಕಾಂಗ್ರೆಸಿಗರ ಮೇಲೆ ಗೂಬೆ ಕೂರಿಸುತ್ತಾರೆ. ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.