ETV Bharat / state

ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ ಸರ್ಕಾರಕ್ಕೆ ನೆರೆ ಸಂತ್ರಸ್ತರ ನೆನಪಾಗಿದೆ: ದಿನೇಶ್ ಗುಂಡೂರಾವ್

author img

By

Published : Sep 25, 2019, 2:20 PM IST

ಉಪ-ಚುನಾವಣೆ ಘೋಷಣೆಯಾದ ಹಿನ್ನೆಲೆ ಒಂದು ಸಾವಿರ ಕೋಟಿ ರೂಪಾಯಿ ಹಣವನ್ನು ನೆರೆ ಸಂತ್ರಸ್ತರಿಗಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಮುಂದಾಗಿದೆ. ಇದು ಚುನಾವಣೆ ಗೆಲ್ಲುವ ತಂತ್ರಗಾರಿಕೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದಿನೇಶ್ ಗುಂಡೂರಾವ್

ಬೆಂಗಳೂರು: ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸುವ ವಿಚಾರದಲ್ಲಿ 50 ದಿನಗಳಿಂದ ಇಲ್ಲದ ಕಾಳಜಿ, ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸರ್ಕಾರಕ್ಕೆ ಬಂದಿರುವುದು ವಿಪರ್ಯಾಸ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪ-ಚುನಾವಣೆ ಘೋಷಣೆಯಾದ ಹಿನ್ನೆಲೆ ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವ ಮಾತನ್ನು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದು ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ಮೇಲಿರುವ ನಿಜವಾದ ಕಾಳಜಿ ಅಲ್ಲ, ಬದಲಾಗಿ ಉಪ ಚುನಾವಣೆ ಗೆಲ್ಲುವ ಮತ್ತೊಂದು ತಂತ್ರಗಾರಿಕೆ. ನೆರೆಯಿಂದ ಹಾನಿಗೀಡಾದ ಪ್ರದೇಶಗಳ ಸಂತ್ರಸ್ತರಿಗೆ ಸೂಕ್ತ ಕಾಯಕಲ್ಪ ಒದಗಿಸುವ ಕಾರ್ಯ ಆಗುತ್ತಿಲ್ಲ. ಹಣ ಬಿಡುಗಡೆ ಮಾಡುತ್ತಿಲ್ಲ ಮತ್ತು ಕೇಂದ್ರ ಸರ್ಕಾರ ಕೂಡ ಇತ್ತ ಗಮನ ಹರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಉಪ ಚುನಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ನೆರೆ ಸಂತ್ರಸ್ತರ ನೆನಪಾಗಿರುವುದು ವಿಪರ್ಯಾಸ: ದಿನೇಶ್​ ಗುಂಡೂರಾವ್​

ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿ ಬಳಿ ಅನುದಾನ ತರಬೇಕಿತ್ತು, ಅದನ್ನೂ ಸಿಎಂ ಯಡಿಯೂರಪ್ಪ ಮಾಡುತ್ತಿಲ್ಲ. ಈಗ ಉಪಚುನಾವಣೆ ಬಂದಿರುವುದರಿಂದ ಕೇಂದ್ರದಿಂದ ಹಣ ತರುವುದಾಗಿ ಹೇಳುತ್ತಿದ್ದಾರೆ. ಇವರಿಗೆ ಜನರ ಬಗ್ಗೆ ಬದ್ಧತೆ ಇಲ್ಲ, ವೋಟಿಗಾಗಿ ಎದ್ದುಬಿದ್ದು ಓಡಾಡುತ್ತಿದ್ದಾರೆ ಎಂದು ದಿನೇಶ್​ ಗುಂಡೂರಾವ್​ ಹೇಳಿದ್ರು.

ನಿಷ್ಠಾವಂತ, ಪ್ರಾಮಾಣಿಕರಿಗೆ ಟಿಕೆಟ್:

ನಾವು ಯಾರನ್ನೋ ಕರೆತಂದು ಟಿಕೆಟ್ ಕೊಡುವ ಉದ್ದೇಶವಿಲ್ಲ. ಪಕ್ಷ ನಿಷ್ಠೆ, ಗೆಲ್ಲುವ ಸಾಮರ್ಥ್ಯ ಇದ್ದವರಿಗೆ ಮಾತ್ರ ಟಿಕೆಟ್ ಕೊಡುತ್ತೇವೆ. ಶರತ್ ಬಚ್ಚೇಗೌಡ, ನಂದೀಶ್ ರೆಡ್ಡಿ ಸಂಪರ್ಕಕ್ಕೆ ಮುಂದಾಗಿಲ್ಲ. ಇಂದು ಮುಖಂಡರ ಸಭೆ ನಡೆಸುತ್ತಿದ್ದೇವೆ. ನಾಳೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ಮಾಡ್ತೇವೆ ಎಂದು ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.

ಒಂದೆಡೆ ಉಪ ಚುನಾವಣೆ ಘೋಷಣೆಯಾಗಿದೆ ಇನ್ನೊಂದೆಡೆ ಕಾಂಗ್ರೆಸ್ ಮೇಲಿಂದ ಮೇಲೆ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದೆ. ಹೀಗಾಗಿ ಸರ್ಕಾರ ಭಯದಿಂದ ಪರಿಹಾರ ಒದಗಿಸುವ ಮಾತನ್ನಾಡುತ್ತಿದೆ ಎಂದು ದಿನೇಶ್​ ಅಭಿಪ್ರಾಯಪಟ್ಟರು.

Intro:newsBody:ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸರ್ಕಾರಕ್ಕೆ ನೆರೆ ಸಂತ್ರಸ್ತರ ನೆನಪಾಗಿರುವುದು ವಿಪರ್ಯಾಸ: ದಿನೇಶ್ ಗುಂಡೂರಾವ್

ಬೆಂಗಳೂರು: ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸುವ ವಿಚಾರದಲ್ಲಿ 50 ದಿನ ಇಲ್ಲದ ಕಾಳಜಿ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸರ್ಕಾರಕ್ಕೆ ಬಂದಿರುವುದು ವಿಪರ್ಯಾಸ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿಲುವು ಹೊಂದಿದ್ದರು ನಿಜವಾದ ಕಾಳಜಿ ಇದೆ ಎಂದು ಭಾವಿಸಿದ್ದೆ. ಆದರೆ ಅವರು ನಿರೀಕ್ಷೆ ಹುಸಿಗೊಳಿಸಿದ್ದಾರೆ. ಜನಪರ ಕಾಳಜಿ ಇಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಉಪ-ಚುನಾವಣೆ ಘೋಷಣೆಯಾದ ಹಿನ್ನೆಲೆ ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವ ಮಾತನ್ನು ಬಿಜೆಪಿ ಸರ್ಕಾರ ಆಡಿದೆ. ಇದು ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನಿಜವಾದ ಕಾಳಜಿಗೆ ಮಾಡಿದ ಕಾರ್ಯ ಅಲ್ಲ. ಬದಲಾಗಿ ಉಪ ಚುನಾವಣೆ ಗೆಲ್ಲುವ ಮತ್ತೊಂದು ತಂತ್ರಗಾರಿಕೆ. ನೆರೆಯಿಂದ ಹಾನಿಗೀಡಾದ ಪ್ರದೇಶಗಳ ಸಂತ್ರಸ್ತರಿಗೆ ಸೂಕ್ತ ಕಾಯಕಲ್ಪ ಒದಗಿಸುವ ಕಾರ್ಯ ಆಗುತ್ತಿಲ್ಲ. ಹಣ ಬಿಡುಗಡೆ ಮಾಡುತ್ತಿಲ್ಲ ಮತ್ತು ಕೇಂದ್ರ ಸರ್ಕಾರ ಕೂಡ ಇತ್ತ ಗಮನಹರಿಸುತ್ತಿಲ್ಲ ಎಂದರು.
ಇವತ್ತು ಪ್ರವಾಹ ಸಂತ್ರಸ್ಥರ ಬಗ್ಗೆ ಗಮನನೀಡಬೇಕಿದೆ. ಸರ್ಕಾರ ಯಾವುದೇ ಪರಿಹಾರ ಕ್ರಮ ತೆಗೆದುಕೊಳ್ತಿಲ್ಲ. ಪ್ರಧಾನಿ ಬಳಿ ಅನುದಾನ ತರಬೇಕಿತ್ತು. ಅದನ್ನೂ ಸಿಎಂ ಯಡಿಯೂರಪ್ಪ ಮಾಡುತ್ತಿಲ್ಲ. ಈಗ ಉಪಚುನಾವಣೆ ಬಂದಿದೆ. ಅದಕ್ಕೆ ಕೇಂದ್ರದಿಂದ ಹಣ ತರ್ತೇವೆ ಅಂತ ಹೇಳ್ತಿದ್ದಾರೆ. ಇವರಿಗೆ ಜನರ ಬಗ್ಗೆ ಬದ್ಧತೆ ಇಲ್ಲ. ವೋಟಿಗಾಗಿ ಈಗ ಎದ್ದು ಬಿದ್ದು ಓಡಾಡ್ತಿದ್ದಾರೆ ಎಂದು ಹೇಳಿದರು.
ನಿಷ್ಠಾವಂತ, ಪ್ರಾಮಾಣಿಕರಿಗೆ ಟಿಕೆಟ್
ನಾವು ಯಾರನ್ನೋ ಕರೆತಂದು ಟಿಕೆಟ್ ಕೊಡುವ ಉದ್ದೇಶವಿಲ್ಲ. ಪಕ್ಷ ನಿಷ್ಠೆ, ಗೆಲ್ಲುವ ಸಾಮರ್ಥ್ಯ ಇದ್ದವರಿಗೆ ಮಾತ್ರ ಟಿಕೆಟ್. ಶರತ್ ಬಚ್ಚೇಗೌಡ, ನಂದೀಶ್ ರೆಡ್ಡಿ ಸಂಪರ್ಕಕ್ಕೆ ಮುಂದಾಗಿಲ್ಲ. ಇಂದು ಮುಖಂಡರ ಸಭೆ ನಡೆಸುತ್ತಿದ್ದೇವೆ. ನಾಳೆ ಅಭ್ಯರ್ಥಿಗಳ ಪಟ್ಟಿ ಆಯ್ಕೆ ಮಾಡ್ತೇವೆ ಎಂದರು.
ಜನ ಒತ್ತಡ ಹಾಕಿ ಸರ್ಕಾರದಿಂದ ಸೇವೆ ಸಲ್ಲಿಸಿ ಕೊಳ್ಳುವ ಪರಿಸ್ಥಿತಿ ಇದೆ. ಸರ್ಕಾರ ಯಾರಿಂದಲೂ ಹೇಳಿಸಿಕೊಳ್ಳದೇ ಜನರ ಕೆಲಸ ಮಾಡುವ ಕಾರ್ಯ ಮಾಡಬೇಕಿತ್ತು. ಪ್ರಧಾನಿ ಬಳಿ ಹೋಗಿ ಗಲಾಟೆ ಮಾಡಿದರೂ ಹಣ ತರಬೇಕಿತ್ತು. ಒಂದೆಡೆ ಉಪ ಚುನಾವಣೆ ಘೋಷಣೆಯಾಗಿದೆ ಇನ್ನೊಂದೆಡೆ ಕಾಂಗ್ರೆಸ್ ಮೇಲಿಂದ ಮೇಲೆ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇದರಿಂದಾಗಿ ಸರ್ಕಾರ ಈಗ ಭಯ ಗೊಂಡಿದೆ ಪರಿಹಾರ ಒದಗಿಸುವ ಮಾತನಾಡುತ್ತಿದೆ ಎಂದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.