ETV Bharat / state

ಬಿಎಸ್​ವೈ ಕೇಂದ್ರದಿಂದ ಹೆಚ್ಚಿನ ನೆರವು ತರುವ ನಿರೀಕ್ಷೆಯಿದೆ.. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್!

author img

By

Published : Aug 6, 2019, 8:05 PM IST

ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದ ಪ್ರವಾಹ ಬಂದಿದೆ. ಯಡಿಯೂರಪ್ಪನವರು ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವನ್ನು ತರುತ್ತಾರೆ ಎಂಬ ನಿರೀಕ್ಷೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ಜನ ಕಷ್ಟಕ್ಕೆ ಸಿಲುಕಿದ್ದಾರೆ. ಯಡಿಯೂರಪ್ಪನವರು ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವನ್ನು ತರುತ್ತಾರೆ ಎಂಬ ನಿರೀಕ್ಷೆಯಿದೆ. ಕೇಂದ್ರ ಮತ್ತು ಕರ್ನಾಟಕ ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಆದ್ದರಿಂದ ಯಾವುದೇ ರೀತಿಯ ಮಲತಾಯಿ ಧೋರಣೆ ಆಗದೆ ಹೆಚ್ಚಿನ ಅನುದಾನ ನೀಡ್ತಾರೆ ಎಂಬ ನಂಬಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಉತ್ತರ ಕರ್ನಾಟಕದಲ್ಲಿ ಭಾರೀ ಪ್ರಮಾಣದ ಪ್ರವಾಹ ಎದುರಾಗಿದೆ. ಆದರೆ, ಇದನ್ನು ನಿರ್ವಹಿಸಲು ಹಾಗೂ ಈ ಸಂಬಂಧ ಗಮನಹರಿಸಲು ರಾಜ್ಯದಲ್ಲಿ ಪೂರ್ಣಪ್ರಮಾಣದ ಸರ್ಕಾರ ಇಲ್ಲ. ದುರ್ದೈವ ಅಂದರೆ ಕೇವಲ ಒಬ್ಬರೇ ಒಬ್ಬ ಸಿಎಂ ಮಾತ್ರ ಇದ್ದಾರೆ. ಇವರ ಬೆಂಬಲಕ್ಕೆ ಸಚಿವ ಸಂಪುಟ ಕೂಡ ಇಲ್ಲ. ನಾಯಕತ್ವದ ಚುಕ್ಕಾಣಿ ಹಿಡಿಯುವವರೇ ಇಲ್ಲ ಎಂದು ವ್ಯಂಗ್ಯವಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..

ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೇವಲ ಅಧಿಕಾರಿಗಳನ್ನು ಮಾತ್ರ ನಂಬಿಕೊಂಡು ಕೂತಿದ್ರೆ ಆಗೋದಿಲ್ಲ. ತಕ್ಷಣವೇ ಮಂತ್ರಿ ಮಂಡಲ ರಚನೆ ಮಾಡಬೇಕು ಎಂದು ಸಲಹೆ ನೀಡಿದರು. ಹೆಚ್ ಕೆ ಪಾಟೀಲ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಬೆಳಗಾವಿ ಭಾಗದಲ್ಲಿ ಮಳೆ ಹಾನಿಯ ಪರೀಶಿಲನೆ ಮಾಡಲಾಗುತ್ತಿದೆ. ರಾಯಚೂರು ಭಾಗದಲ್ಲಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ. ಪ್ರತಿಪಕ್ಷದಲ್ಲಿ ಕುಳಿತು ಕೇವಲ ರಾಜಕಾರಣ ಮಾಡೋದಷ್ಟೇ ನಮ್ಮ ಕೆಲಸ ಅಲ್ಲ. ಸರ್ಕಾರಕ್ಕೆ ಜನರಿಗೆ ತೊಂದರೆ ಆಗಿರುವ ಬಗ್ಗೆ ಕೂಡ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

Intro:newsBody:ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಸರ್ಕಾರ ವಿಶೇಷ ಗಮನ ಹರಿಸಬೇಕಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಹಲವೆಡೆ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದೆ. ಸಾರ್ವಜನಿಕರಿಗೆ ಬಹಳ ತೊಂದರೆ ಆಗಿದೆ. ಇದರ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಆಗುತ್ತಿದೆ. ಆದರೆ ಇದನ್ನು ನಿರ್ವಹಿಸಲು ಹಾಗೂ ಈ ಸಂಬಂಧ ಗಮನಹರಿಸಲು ರಾಜ್ಯದಲ್ಲಿ ಪೂರ್ಣಪ್ರಮಾಣದ ಸರ್ಕಾರ ಇಲ್ಲ. ದುರ್ದೈವ ಅಂದರೆ ಕೇವಲ ಒಬ್ಬರೇ ಒಬ್ಬ ಸಿಎಂ ಮಾತ್ರ ಇದ್ದಾರೆ. ಇವರ ಬೆಂಬಲಕ್ಕೆ ಸಚಿವ ಸಂಪುಟ ಕೂಡ ಇಲ್ಲ. ನಾಯಕತ್ವದ ಚುಕ್ಕಾಣಿ ಹಿಡಿಯುವವರೇ ಇಲ್ಲ ಎಂದರು.
ತುರ್ತು ಪರಿಸ್ಥಿತಿಯ ಈ ಸಂಧರ್ಭದಲ್ಲಿ ಕೇವಲ ಅಧಿಕಾರಿಗಳನ್ನು ಮಾತ್ರ ನಂಬಿಕೊಂಡು ಕೂತಿದ್ರೆ ಆಗೋದಿಲ್ಲ. ತಕ್ಷಣವೇ ಮಂತ್ರಿ ಮಂಡಲ ರಚನೆ ಮಾಡಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಎಚ್ ಕೆ ಪಾಟೀಲ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಬೆಳಗಾವಿ ಭಾಗದಲ್ಲಿ ಮಳೆ ಹಾನಿಯ ಪರೀಶಿಲನೆ ಮಾಡಲಾಗುತ್ತಿದೆ. ರಾಯಚೂರು ಭಾಗದಲ್ಲಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ. ಪ್ರತಿ ಪಕ್ಷದಲ್ಲಿ ಕುಳಿತು ಕೇವಲ ರಾಜಕಾರಣ ಮಾಡೋದಷ್ಟೇ ನಮ್ಮ ಕೆಲಸ ಅಲ್ಲ. ಸರ್ಕಾರಕ್ಕೆ ಜನರಿಗೆ ತೊಂದರೆ ಆಗಿರುವ ಬಗ್ಗೆ ನಾವೂ ಕೂಡ ಮಾಹಿತಿ ನೀಡ್ತೇವೆ ಎಂದು ಹೇಳಿದರು.
ಸರ್ಕಾರ ಹೆಚ್ಚಿನ ರೀತಿಯಲ್ಲಿ ಕೆಲಸ ಕಾರ್ಯ ಮಾಡುವ ಅಗತ್ಯವಿದೆ. ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುತ್ತಾರೆ ಎನ್ನೋ ನಿರೀಕ್ಷೆ ಇದೆ ಎಂದರು.

Conclusion:news

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.