ETV Bharat / state

ಭ್ರೂಣ ಪರೀಕ್ಷೆ, ಭ್ರೂಣಹತ್ಯೆ ಪ್ರಕರಣ ತಡೆಗೆ ವಿಶೇಷ ನೀತಿ ಜಾರಿಗೆ ಚಿಂತನೆ: ದಿನೇಶ್ ಗುಂಡೂರಾವ್

ಹೆಣ್ಣು ಮಗುವಿನ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
author img

By ETV Bharat Karnataka Team

Published : Dec 12, 2023, 9:18 PM IST

Updated : Dec 12, 2023, 10:26 PM IST

ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿವೆ ಎನ್ನಲಾದ ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ, ವಿಶೇಷವಾದ ನೀತಿಯೊಂದನ್ನು ಜಾರಿ ಮಾಡಲು ಸರ್ಕಾರದಿಂದ ಚಿಂತನೆ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ, ಭಾರತಿ ಶೆಟ್ಟಿ, ಶರವಣ ಟಿ. ಎ, ಬಿ. ಎಂ ಫಾರೂಖ್, ಸಿ. ಎನ್ ಮಂಜೇಗೌಡ ಅವರು ವಿಧಾನ ಪರಿಷತ್​ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕೇಳಿದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹೇಗೆ ಭೇದಿಸಬಹುದು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯು ಎಚ್ಚೆತ್ತುಕೊಂಡು ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಅಂಕಿ - ಸಂಖ್ಯೆಗಳನ್ನು ಸಂಗ್ರಹಿಸಿ, ಗುಪ್ತಚರವಾಗಿ ಮಾಹಿತಿ ಪಡೆದು ಇಲಾಖೆಯ ಕಾರ್ಯಾಚರಣೆಯನ್ನು ಬಲಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಪಿಸಿಪಿಎನ್‌ಡಿಟಿ ಸೆಲ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಜಿಲ್ಲೆಯಲ್ಲಿ ಪಿಸಿಪಿಎನ್‌ಡಿಸಿ ಸೆಲ್‌ಗಳು ಕಾಲಕಾಲಕ್ಕೆ ಸಭೆ ನಡೆಸಿ, ಜಿಲ್ಲಾ ಹಂತದಲ್ಲಿ ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣ ತಡೆಗೆ ಕಾರ್ಯಪ್ರವೃತ್ತವಾಗಿವೆ. ಸಕ್ರಿಯವಾಗಿ ಇನ್ನಷ್ಟು ಕಾರ್ಯಶೀಲತೆಯಿಂದ ಕಾರ್ಯಪ್ರವೃತ್ತವಾಗಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಪಿಸಿಪಿಎನ್‌ಡಿಟಿ ಸೆಲ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗುವುದು ಎಂದು ಸಚಿವರು ಹೇಳಿದರು.

ಹೆಣ್ಣು ಮಗುವಿನ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು. ಹೆಣ್ಣು ಮಗು ಕುಟುಂಬಕ್ಕೆ ಸಮಾಜಕ್ಕೆ ಭಾರ ಅನ್ನುವ ಮನಸ್ಥಿತಿಯಿಂದಲೇ ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಕಾನೂನು ಉಲ್ಲಂಘಿಸಿದರೆ ಜೈಲು ಸೇರಬೇಕಾಗುತ್ತದೆ ಎಂಬುದಾಗಿ ತಪ್ಪಿತಸ್ಥರಲ್ಲಿ ಭಯ ಹುಟ್ಟಲು ಬಿಗಿಯಾದ ಕಾನೂನು ಕ್ರಮಗಳನ್ನು ರೂಪಿಸಲು ಮತ್ತು ಇಲಾಖೆಯ ಕಾರ್ಯಾಚರಣೆ ಬಲಗೊಳಿಸುವ ಎಲ್ಲ ಕ್ರಮಗಳನ್ನು ಏಕಕಾಲಕ್ಕೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲೆಗಳಲ್ಲಿರುವಂತೆ ರಾಜ್ಯಮಟ್ಟದಲ್ಲಿನ ಪಿಸಿಪಿಎನ್‌ಡಿಟಿ ಸೆಲ್‌ನ್ನು ಸಹ ಇನ್ನಷ್ಟು ಸಕ್ರಿಯಗೊಳಿಸಲಾಗುವುದು. ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಬೇಕು ಎಂದು ಈಗಾಗಲೇ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಹಕಾರ ಪಡೆದು ಶಾಲಾ ಕಾಲೇಜುಗಳಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಕ್ರಮ ವಹಿಸಲಾಗುವುದು. ಪೊಲೀಸ್ ಇಲಾಖೆಯ ಸಹಕಾರ ಪಡೆದು ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹತ್ತಿಕ್ಕಲಾಗುವುದು ಎಂದು ಸಚಿವರು ತಿಳಿಸಿದರು.

ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡುವವರಿಗೆ 1 ಲಕ್ಷ ರೂ ಬಹುಮಾನ: ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ರೂ.1 ಲಕ್ಷ ರೂ.ಗಳ ಬಹುಮಾನ ನೀಡುವುದರ ಜೊತೆಗೆ, ಮಾಹಿತಿ ನೀಡುವವರ ಗೋಪ್ಯತೆಯನ್ನು ಕಾಪಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ತಡೆಯುವ ಕುರಿತಂತೆ ಪ್ರಸ್ತುತ ಜಾರಿಯಲ್ಲಿರುವ ಪಿಸಿಪಿಎನ್‌ಡಿಟಿ ಕಾಯಿದೆ ಅನ್ವಯ, ಸ್ಕ್ಯಾನಿಂಗ್ ಸೆಂಟರ್​ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳುವುದರ ಜೊತೆಗೆ ಪ್ರತೀ 3 ತಿಂಗಳಿಗೊಮ್ಮೆ ಅಧಿಕಾರಿಗಳ ಮೂಲಕ ಗೋಪ್ಯ ಕಾರ್ಯಾಚರಣೆ ನಡೆಸುವ ಮೂಲಕ ಅಕ್ರಮ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾನೂನು ಬಾಹಿರವಾಗಿ ನಡೆಯುವ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಕುರಿತಂತೆ ಸಾರ್ವಜನಿಕರು ಇಲಾಖೆಯ ಉಚಿತ ಸಹಾಯವಾಣಿ 104 ಗೆ ಮಾಹಿತಿ ನೀಡಬಹುದಾಗಿದ್ದು, ಮುಂದಿನ ದಿನಗಳಲ್ಲಿ ಪತ್ಯೇಕ ಸಹಾಯವಾಣಿ ಆರಂಭಿಸಲಾಗುವುದು ಹಾಗೂ ನಿಖರ ಮಾಹಿತಿ ನೀಡುವ ಸಾರ್ವಜನಿಕರಿಗೆ 1 ಲಕ್ಷ ರೂ. ಗಳ ಬಹುಮಾನ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಅವ್ಯವಸ್ಥೆ ಸರಿಪಡಿಸಿ ಆಸ್ಪತ್ರೆಗಳಿಗೆ ಜೀವ ರಕ್ಷಕ ಔಷಧ ಪೂರೈಸಲಾಗುವುದು: ದಿನೇಶ್​ ಗುಂಡೂರಾವ್

Last Updated : Dec 12, 2023, 10:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.