ETV Bharat / state

ರಾಜ್ಯ ಸರ್ಕಾರ ಪ್ರವಾಹ ಸಮಸ್ಯೆ ಗಂಭೀರವಾಗಿ ಪರಿಗಣಿಸಿಲ್ಲ: ದಿನೇಶ್ ಗುಂಡೂರಾವ್ ಆರೋಪ

ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರ ತೆರೆದಿರುವ ಪರಿಹಾರ ಕೇಂದ್ರಗಳು ನಿರಾಶ್ರಿತರ ಪಾಲಿಗೆ ನರಕದ ಕೇಂದ್ರಗಳಾಗಿವೆ ಎಂದು ಸರ್ಕಾರದ ವಿರುದ್ಧ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
author img

By

Published : Oct 16, 2020, 5:30 PM IST

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಪ್ರವಾಹ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರ ತೆರೆದಿರುವ ಪರಿಹಾರ ಕೇಂದ್ರಗಳು ನಿರಾಶ್ರಿತರ ಪಾಲಿಗೆ ನರಕದ ಕೇಂದ್ರಗಳಾಗಿವೆ. ಸರಿಯಾದ ವ್ಯವಸ್ಥೆಯಿಲ್ಲದೇ, ನೆರೆ ಸಂತ್ರಸ್ತರು ಪರದಾಡುತ್ತಿರುವ ಬಗ್ಗೆ ವರದಿಯಾಗಿದೆ. ನೊಂದ ಸಂತ್ರಸ್ತರನ್ನು ಹೀಗೆ ನಿಕೃಷ್ಟವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರಕ್ಕೆ ಪ್ರವಾಹ ಪರಿಸ್ಥಿತಿ ನಿಭಾಯಿಸುವುದಕ್ಕಿಂತಲೂ ಉಪ ಚುನಾವಣೆಯೇ ಮುಖ್ಯವಾದಂತಿದೆ. ಪ್ರವಾಹ ಪೀಡಿತರ ನೋವಿಗೆ ಸ್ಪಂದಿಸುವ ಕನಿಷ್ಠ ಕಾಳಜಿಯೂ ಸರ್ಕಾರದಿಂದ ಕಾಣಿಸುತ್ತಿಲ್ಲ. ಜನರ ಶಾಪ ತಟ್ಟುವ ಮುನ್ನಾ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ವಿವರಿಸಿದ್ದಾರೆ.

ಇನ್ನು ಪ್ರಧಾನ ಮಂತ್ರಿಯವರಿಗೆ ನೆರೆಯ ಆಂಧ್ರ ಮತ್ತು ತೆಲಂಗಾಣದಲ್ಲಿ ಸುರಿದ ಮಳೆ ಮಾತ್ರ ಕಾಣಿಸಿದೆ. ನಮ್ಮ ರಾಜ್ಯದ ಮಳೆ, ಪ್ರವಾಹದ ಬಗ್ಗೆ ಪರಿಹಾರವಿರಲಿ, ಸೌಜನ್ಯಕ್ಕೂ ಸಾಂತ್ವನ ಹೇಳುವ ಮನಸ್ಸು ಇಲ್ಲ. ರಾಜ್ಯದ 25 ಬಿಜೆಪಿ ಸಂಸದರು ತಮ್ಮ ಸ್ವಾಭಿಮಾನವನ್ನು ಚಿಪ್ಪಿನೊಳಗೆ ಎಳೆದುಕೊಂಡ ಮೃದ್ವಂಗಿಗಳಂತೆ ಜಡವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.