ETV Bharat / state

ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಸುಧಾರಣೆ, ಡಿಪ್ಲೊಮಾ ಪಠ್ಯ ಆಮೂಲಾಗ್ರ ಬದಲಾವಣೆ : ಡಿಸಿಎಂ ಅಶ್ವತ್ಥ್ ನಾರಾಯಣ್

author img

By

Published : Dec 5, 2020, 7:34 AM IST

ಈಗಾಗಲೇ ನೂತನ ಕಲಿಕಾ ನಿರ್ವಹಣಾ ಪದ್ಧತಿ ಜಾರಿ ಮಾಡಲಾಗಿದೆ. ತಂತ್ರಜ್ಞಾನದ ಮೂಲಕ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಐದು ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಈಗಾಗಲೇ ರಾಜ್ಯದಲ್ಲಿರುವ ಒಟ್ಟು 8 ಸಾವಿರ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳನ್ನಾಗಿ ಪರಿವರ್ತಿಸಲಾಗುತ್ತಿದೆ..

Diploma text radical change DCM Dr.CN Ashwaththanarayana
ಡಿಸಿಎಂ ಅಶ್ವಥ್ ನಾರಾಯಣ್

ಬೆಂಗಳೂರು : ಉದ್ಯೋಗ ಮಾರುಕಟ್ಟೆಗೆ ಅನುಗುಣವಾಗಿ ಡಿಪ್ಲೊಮಾ ಪಠ್ಯವನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್‌ ನಾರಾಯಣ ಪ್ರಕಟಿಸಿದರು.

ನಗರದಲ್ಲಿ ಶುಕ್ರವಾರ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಿಗೆ ಸಂಬಂಧಿಸಿದ ವಿಧಾನ ಪರಿಷತ್‌ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಇರುವ ಡಿಪ್ಲೊಮಾ ಕೋರ್ಸ್‌ಗಳಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ.

ಪ್ರತೀ ವರ್ಷಕ್ಕೆ ರಾಜ್ಯದಲ್ಲಿ 40,000 ಅಂತಿಮ ವರ್ಷದ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದು, ಈ ಪೈಕಿ ಕೊನೆ ಪಕ್ಷ ಶೇ.20ರಷ್ಟು ವಿದ್ಯಾರ್ಥಿಗಳಿಗೂ ಉದ್ಯೋಗ ಸಿಗುತ್ತಿಲ್ಲ. ಅದಕ್ಕೆ ಕಾರಣವಿಷ್ಟೇ ಈಗಿರುವ ಡಿಪ್ಲೊಮಾ ಪಠ್ಯವೂ ಸಕಾಲಿಕವಾಗಿಲ್ಲ, ಇವತ್ತಿನ ಕೈಗಾರಿಕೆ ಅಗತ್ಯಗಳಿಗೆ ಅದು ಅಪ್ರಸ್ತುತವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಅಗತ್ಯ ಇರುವ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಹಾಗೂ ಸದಾಕಾಲ ಕೆಲಸಕ್ಕೆ ಅರ್ಹತೆ ಕಲ್ಪಿಸಬಲ್ಲ ಪಠ್ಯವನ್ನು ಸಂಬಂಧಪಟ್ಟ ಎಲ್ಲರ ಜತೆ ಚರ್ಚಿಸಿ ರೂಪಿಸಲಾಗುತ್ತಿದೆ.

ಡಿಪ್ಲೊಮಾ ಕೋರ್ಸ್‌ನ ಪಠ್ಯವನ್ನು ಮರುಪರಿಷ್ಕಣೆ ಮಾಡುವ ಮೂಲಕ ನ್ಯಾಷನಲ್ ಕ್ವಾಲಿಫಿಕೇಶ್ ಬಗ್ಗೆ ಬದಲಾವಣೆ ಮಾಡಲಾಗಿದೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಠ್ಯ ಮರುರೂಪಿಸಲಾಗುತ್ತಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ಯಾವುದೇ ರೀತಿಯ ಹಣಕಾಸಿನ ಹೊರೆ ಸರ್ಕಾರದ ಮೇಲೆ ಬೀಳುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ತಿಳಿಸಿದರು.

ಪರಿಷತ್‌ ಸದಸ್ಯರಿಂದ ಸಲಹೆ : ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈಗಾಗಲೇ ಅನೇಕ ಕ್ರಾಂತಿಕಾರಿ ಸುಧಾರಣೆಗಳನ್ನು ತರಲಾಗಿದೆ. ಆ ಬಗ್ಗೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿರುವ ಕ್ಷೇತ್ರಗಳ ವಿಧಾನ ಪರಿಷತ್‌ ಸದಸ್ಯರಿಗೆ ಎಲ್ಲ ಮಾಹಿತಿ ನೀಡಲಾಗಿದೆ.

ಮುಂದೆ ಕೈಗೊಳ್ಳಬಹುದಾದ ಸುಧಾರಣೆಗಳು, ನೂತನವಾಗಿ ಜಾರಿಗೆ ಬಂದಿರುವ 'ಕರ್ನಾಟಕ ಕಲಿಕಾ ನಿರ್ವಹಣಾ ವ್ಯವಸ್ಥೆ' (ಎಲ್‌ಎಂಎಸ್)‌ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪರಿಷತ್‌ ಸದಸ್ಯರು ಅನೇಕ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ ಎಂದು ಡಾ.ಅಶ್ವತ್ಥ್‌ ನಾರಾಯಣ ಹೇಳಿದರು.

ಶಿಕ್ಷಣ ನೀತಿಗೆ ಪಕ್ಷಬೇಧವಿಲ್ಲದೆ ಬೆಂಬಲ : ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸಭೆಯಲ್ಲಿದ್ದ ಎಲ್ಲ ಸದಸ್ಯರು ಪಕ್ಷ ಬೇಧವಿಲ್ಲದೆ ಬೆಂಬಲ ಸೂಚಿಸಿದ್ದಾರೆ. ಮೂರು ದಶಕಗಳಿಗೂ ಮಿಕ್ಕಿ ಹಳೆಯದಾದ, ಪ್ರಸಕ್ತ ಸಂದರ್ಭಕ್ಕೆ ಸೂಕ್ತವಲ್ಲದ ಶಿಕ್ಷಣ ನೀತಿಯಿಂದ ಯಾವುದೇ ಪ್ರಯೋಜವಿಲ್ಲ. ಹೊಸ ನೀತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶಕ್ತಿ ತುಂಬಬಲ್ಲ ಅಂಶಗಳಿವೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು.

ಇನ್ನು, ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣ ಪರಿಷತ್ ಇದೆ. ಅದರ ಜತೆಗೆ, ಪ್ರಾಥಮಿಕ ಶಿಕ್ಷಣ ಪರಿಷತ್ ಸ್ಥಾಪನೆ ಮಾಡುವ ಸರ್ಕಾರದ ಪ್ರಯತ್ನಕ್ಕೆ ಒಕ್ಕೊರಲ ಬೆಂಬಲ ಸೂಚಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಪೂರಕವಾದ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರಬೇಕಿದೆ ಹಾಗೂ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆದಷ್ಟು ಬೇಗ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಓದಿ:ಕರ್ನಾಟಕ ಬಂದ್ ​; ಪೊಲೀಸ್ ಇಲಾಖೆಯಿಂದ ಟಫ್ ರೂಲ್ಸ್! ​

ಎಲ್ಎಂಎಸ್ ವ್ಯವಸ್ಥೆ ಜಾರಿಗೆ : ಈಗಾಗಲೇ ನೂತನ ಕಲಿಕಾ ನಿರ್ವಹಣಾ ಪದ್ಧತಿ ಜಾರಿ ಮಾಡಲಾಗಿದೆ. ತಂತ್ರಜ್ಞಾನದ ಮೂಲಕ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಐದು ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಈಗಾಗಲೇ ರಾಜ್ಯದಲ್ಲಿರುವ ಒಟ್ಟು 8 ಸಾವಿರ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳನ್ನಾಗಿ ಪರಿವರ್ತಿಸಲಾಗುತ್ತಿದೆ.

ಮೊದಲ ಹಂತದಲ್ಲಿ 2,500 ರೂಮುಗನ್ನು ಸ್ಮಾರ್ಟ್‌ಕ್ಲಾಸ್‌ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಹೈಸ್ಪೀಡ್‌ ಇಂಟರ್‌ನೆಟ್, ಪವರ್ ಪಾಯಿಂಟ್ಸ್ ಪ್ರೆಜಂಟೇಶನ್, 2 ಕೆವಿ ಬ್ಯಾಕ್ ಅಪ್ ಬ್ಯಾಟರಿ ಸೌಲಭ್ಯಗಳನ್ನು ತರಗತಿಗಳಿಗೆ ಕಲ್ಪಸಿಲಾಗುವುದು. ಈ ಪರಿಕಲ್ಪನೆ ಬಗ್ಗೆ ಪರಿಷತ್‌ ಅತೀವ ಸಂತಸ ವ್ಯಕ್ತಪಡಿಸಿದರು ಎಂದರು ಉಪ ಮುಖ್ಯಮಂತ್ರಿ.

ಸಭೆಯಲ್ಲಿ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಮರಿತಿಬ್ಬೇಗೌಡ, ವೈ ಎ ನಾರಾಯಣ ಸ್ವಾಮಿ, ಅ.ದೇವೇಗೌಡ, ಬೋಜೇಗೌಡ, ಚಿದಾನಂದ ಗೌಡ, ಅರುಣ್‌ ಶಹಾಪೂರ, ಸುಶೀಲ್‌ ನಮೋಶಿ, ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.