ETV Bharat / state

ವ್ಯಾಟ್, ಜಿಎಸ್‌ಟಿ ವ್ಯಾಪ್ತಿಯ ಗುತ್ತಿಗೆ ಕಾಮಗಾರಿಗಳ ತೆರಿಗೆ ಪ್ರತ್ಯೇಕಿಸಿ ಪರಿಗಣಿಸಬೇಕು: ಹೈಕೋರ್ಟ್ - ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್

ಜಿಎಸ್‌ಟಿ ಪೂರ್ವ ಮತ್ತು ಜಿಎಸ್‌ಟಿ ನಂತರದ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆ ಕಂಪನಿಗಳ ತೆರಿಗೆ ಪಾವತಿ ವಿಚಾರ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ಕೆಲವು ನಿರ್ದೇಶನ ನೀಡಿದೆ.

High Court
ಹೈಕೋರ್ಟ್
author img

By

Published : Jun 1, 2023, 7:59 AM IST

ಬೆಂಗಳೂರು : ಸರಕು ಮತ್ತು ಸೇವಾ ತೆರಿಗೆ ಕಾಯ್ದೆ (ಜಿಎಸ್‌ಟಿ) ಜಾರಿಯಾಗುವ ಮುನ್ನ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಟೆಂಡರ್ ಪಡೆದು, ಜಿಎಸ್‌ಟಿ ಜಾರಿಯಾದ ನಂತರ ಕಾಮಗಾರಿ ಪೂರ್ಣಗೊಳಿಸಿದ ಪ್ರಕರಣಗಳ ಪ್ರತ್ಯೇಕವಾಗಿ ಲೆಕ್ಕ ಹಾಕಿ ತೆರಿಗೆ ಪಾವತಿಸಿಕೊಳ್ಳುವುದೂ ಸೇರಿದಂತೆ, ತೆರಿಗೆ ಪಾವತಿಸುವ ವಿಚಾರದಲ್ಲಿ ಉದ್ಭವಿಸಿದ್ದ ಗೊಂದಲ ಪರಿಹರಿಸಲು ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶನವನ್ನು ಕೊಟ್ಟಿದೆ.

ಗುತ್ತಿಗೆದಾರ ಸಿ.ಚಂದ್ರಶೇಖರಯ್ಯ ಮತ್ತು ನಂದೀಶ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ಸಲ್ಲಿಸಿದ್ದ 15 ಕ್ಕೂ ಅಧಿಕ ತಕರಾರು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಪೀಠ ಈ ನಿರ್ದೇಶನ ನೀಡಿದೆ. ಅಲ್ಲದೆ, ಜಿಎಸ್‌ಟಿ ಜಾರಿಗೂ ಮುನ್ನ ಕರ್ನಾಟಕ ಮೌಲ್ಯಾಧಾರಿತ ತೆರಿಗೆ (ಕೆವ್ಯಾಟ್) ವ್ಯವಸ್ಥೆ ಇದ್ದಾಗ ನಡೆದಿರುವ ಸರ್ಕಾರಿ ಗುತ್ತಿಗೆ ಕೆಲಸಗಳು ಮತ್ತು ಗುತ್ತಿಗೆದಾರರಿಗೆ ಪಡೆದಿರುವ ಬಿಲ್‌ಗಳನ್ನು ಲೆಕ್ಕ ಹಾಕಬೇಕು. ಜಿಎಸ್‌ಟಿ ಜಾರಿಯಾಗುವ (2017 ರ ಜುಲೈ 1) ಮುನ್ನ ಪಡೆದಿರುವ ಹಣ ಕೆವ್ಯಾಟ್ ವ್ಯವಸ್ಥೆ ಅಡಿ ವಿಶ್ಲೇಷಿಸಬೇಕು ಎಂದು ತಿಳಿಸಿದೆ.

ಜಿಎಸ್‌ಟಿ ಜಾರಿಗೂ ಮುನ್ನ ವ್ಯಾಟ್ ವ್ಯವಸ್ಥೆ ಇದ್ದಾಗ ಸರ್ಕಾರಿ ಗುತ್ತಿಗೆದಾರರು ನಡೆಸಿರುವ ಕೆಲಸಗಳು ಮತ್ತು ಅದಕ್ಕಾಗಿ ಅವರು ಪಡೆದಿರುವ ಹಣವನ್ನು ಲೆಕ್ಕ ಹಾಕಬೇಕು. 2017 ರ ಜು.1 ಕ್ಕೂ ಮುನ್ನ ಪಡೆದಿರುವ ಹಣವನ್ನು ವ್ಯಾಟ್ ವ್ಯವಸ್ಥೆ ಅಡಿ ವಿಶ್ಲೇಷಿಸಬೇಕು. ಮೂಲ ಗುತ್ತಿಗೆಯ ಪ್ರಕಾರ ಬಾಕಿಯಿರುವ ಕೆಲಸವನ್ನು 1017ರ ಜು.1ರ ನಂತರ ನಡೆಸಿದ್ದರೆ, ಆ ಬಗ್ಗೆ ಲೆಕ್ಕ ಹಾಕಬೇಕು. ಕಾಮಗಾರಿಗೆ ಬಳಸಿದ ಸಾಮಾಗ್ರಿಗಳ ದರ ಪ್ರತ್ಯೇಕಿಸಬೇಕು, ತೆರಿಗೆ ಪಡೆದುಕೊಳ್ಳಬೇಕು ಎಂದು ಪೀಠ ಹೇಳಿದೆ.

2017 ರ ಜುಲೈ 1ರ ಬಳಿಕ ಬಾಕಿಯಿರುವ ಕೆಲಸಗಳ ಮೇಲಿನ ತೆರಿಗೆ ವ್ಯತ್ಯಾಸವನ್ನು ಲೆಕ್ಕಹಾಕಬೇಕು. ಗುತ್ತಿಗೆ ಮೌಲ್ಯದ ಮೇಲಿನ ತೆರಿಗೆ ವ್ಯತ್ಯಾಸವನ್ನು ಲೆಕ್ಕದ ಬಳಿಕ ಸಂಬಂಧಿತ ಇಲಾಖೆಯು ಗುತ್ತಿಗೆ ಬದಲಾಯಿಸಬೇಕೇ ಎಂಬುದನ್ನು ತೀರ್ಮಾನಿಸಬೇಕು. ಬಾಕಿ ಕೆಲಸಕ್ಕೆ ಪರಿಷ್ಕೃತ ಜಿಎಸ್‌ಟಿ ಸೇರಿಸಿ ಕೆಲಸದ ಮೌಲ್ಯವನ್ನು ಒಳಗೊಂಡಿರುವುದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ಜೊತೆಗೆ ಪೂರಕ ಕರಾರು ಮಾಡಿಕೊಳ್ಳಬಹುದು. ಒಂದು ವೇಳೆ ಜಿಎಸ್‌ಟಿ ಮುನ್ನ ಪೂರ್ಣಗೊಳಿಸಿರುವ ಅದಕ್ಕೆ ಜೆಎಸ್‌ಟಿ ಜಾರಿ ನಂತರ ಹಣ ಪಾವತಿಸಿದ್ದರೆ, ವ್ಯತ್ಯಾಸವಾದ ತೆರಿಗೆ ಹಣವನ್ನು ಅರ್ಜಿದಾರರಿಗೆ ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಿಗಳು ಹಿಂದಿರುಗಿಸಬೇಕು ಎಂದು ಪೀಠ ನಿರ್ದೇಶಿಸಿದೆ.

ಅಲ್ಲದೆ, ಜಿಎಸ್‌ಟಿ ಪೂರ್ವ ಅಥವಾ ಜಿಎಸ್‌ಟಿ ನಂತರ ಕಾಮಗಾರಿ ಪೂರ್ಣಗೊಳಿಸಲಾಗಿದೆಯೇ? ಜಿಎಸ್‌ಟಿ ನಂತರ ಸ್ವೀಕರಿಸಿದ ಹಣ ಮತ್ತು ಸ್ವೀಕರಿಸಬೇಕಾದ ಹಣವನ್ನು ಲೆಕ್ಕಿಸದೇ ಹೈಕೋರ್ಟ್ ಆದೇಶ ಪ್ರತಿ ದೊರೆತ ನಾಲ್ಕು ವಾರಗಳ ಒಳಗೆ ಅರ್ಜಿದಾರರು ಸಂಬಂಧಪಟ್ಟ ಸರ್ಕಾರದ ಪ್ರಾಧಿಕಾರಕ್ಕೆ ಸಮಗ್ರ ಮನವಿಯನ್ನು ಸಲ್ಲಿಸಬೇಕು. ಆದೇಶದಲ್ಲಿ ನ್ಯಾಯಾಲಯ ಸೂಚಿಸಿರುವ ಮಾರ್ಗಸೂಚಿಗಳ ಅನ್ವಯ ಎರಡು ತಿಂಗಳಲ್ಲಿ ಸರ್ಕಾರಿ ಪ್ರಾಧಿಕಾರಗಳು ಇತ್ಯರ್ಥಪಡಿಸಬೇಕು. ಕಾಮಗಾರಿಗಳಿಗೆ ಜಿಎಸ್‌ಟಿ ನಂತರ ಆರು ತಿಂಗಳವರೆಗೆ ಅರ್ಜಿದಾರರ ವಿರುದ್ಧ ಜಿಎಸ್‌ಟಿ ಪ್ರಾಧಿಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಹಾಗೆಯೇ, ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರ/ಆದೇಶವನ್ನು ಪ್ರಶ್ನಿಸಿ ಪರಿಹಾರ ಪಡೆಯುವ ಸ್ವಾತಂತ್ರ್ಯವನ್ನು ಗುತ್ತಿಗೆದಾರರು ಹೊಂದಿದ್ದಾರೆ ಎಂದು ಆದೇಶಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಹಣ ಎಲ್ಲಿಂದ? ಹಣಕಾಸು ಇಲಾಖೆ ಹೇಳುವುದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.