ETV Bharat / state

ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಟಿಕೆಟ್​ ದರದಲ್ಲಿ ರಿಯಾಯಿತಿ: 500 ಹೆಚ್ಚುವರಿ ಬಸ್ ನಿಯೋಜನೆ - Satellite Bus Stand

5ಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಹೋಗಿ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು.

KSRTC
ಕೆಎಸ್‌ಆರ್‌ಟಿಸಿ
author img

By

Published : Aug 27, 2022, 3:06 PM IST

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಇದೇ ತಿಂಗಳ 29 ಮತ್ತು 30ರಂದು ವಿವಿಧ ಸ್ಥಳಗಳಿಗೆ 500 ವಿಶೇಷ ಬಸ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ ಮತ್ತು ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿ ನೀಡಲಾಗಿದೆ. ಹೆಚ್ಚುವರಿ ಬಸ್​ಗಳು ರಾಜಧಾನಿಯಿಂದ ರಾಜ್ಯದ ವಿವಿಧೆಡೆ ಸಂಚರಿಸಲಿವೆ. ಹೊರ ರಾಜ್ಯಗಳಿಗೆ ನಿಗಮದಿಂದ ಹೆಚ್ಚುವರಿ ಬಸ್ ಬಿಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ಮಂಗಳೂರು, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಚಿತ್ರದುರ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಿಗೆ ಹೊರ ರಾಜ್ಯಗಳಿಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಮಾಹಿತಿ ನೀಡಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಬಿಗ್ ಡಿಸ್ಕೌಂಟ್: ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಇರಲಿದೆ. 5ಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಹೋಗಿ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಇದನ್ನೂ ಓದಿ : ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ 7 ಸಾವಿರಕ್ಕೂ ಹೆಚ್ಚು ಜನ ಟಿಕೆಟ್​ ರಹಿತ ಪ್ರಯಾಣ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.