ETV Bharat / state

ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು: ಕೈ​ ಶಾಸಕರಿಗೆ ಸಿಎಂ - ಡಿಸಿಎಂ ಸಂದೇಶ - ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

2024 ರ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್​ ಸಜ್ಜಾಗಲು ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಹಲವು ಸಲಹೆ ಸೂಚನೆಗಳನ್ನು ಸಿಎಂ ಹಾಗೂ ಡಿಸಿಎಂ ನೀಡಿದ್ದಾರೆ.

Discussion about Lok Sabha Elections in Congress Legislature Party meeting in Bengaluru
ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು: ಕಾಂಗ್ರೆಸ್​ ಶಾಸಕರಿಗೆ ಸಿಎಂ - ಡಿಸಿಎಂ ಸಲಹೆ ಸೂಚನೆ
author img

By

Published : May 24, 2023, 12:17 PM IST

Updated : May 24, 2023, 12:26 PM IST

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಶಾಸಕರಿಗೆ ಸ್ಪಷ್ಟವಾಗಿ ಸೂಚಿಸಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಸಂದೇಶ ರವಾನೆ ಮಾಡಿದ್ದಾರೆ.

ಅಧಿಕಾರ ಹಂಚಿಕೆ, ಸಚಿವ ಸ್ಥಾನ ಸೇರಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಇಂತಹ ವಿಷಯಗಳ ಬಗ್ಗೆ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡಬಾರದು. ಇದು ಸರ್ಕಾರ ಹಾಗೂ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಶಾಸಕರಿಗೆ ಮನವರಿಕೆ ಮಾಡಿಕೊಡಲಾಗಿದೆ.

ರಾಜ್ಯದಲ್ಲಿ ಮಳೆಗೆ ಪ್ರಾಣ ಹಾನಿ, ಆಸ್ತಿ ಹಾನಿಯಾಗಿದೆ. ಮುಂದಿನ ದಿನಗಳ ಇನ್ನೂ ಹೆಚ್ಚಿನ ಮಳೆಯಾಗಲಿದೆ. ಶಾಸಕರು ತಮ್ಮ ಕ್ಷೇತ್ರಗಳ ಹೆಚ್ಚಿನ ಸಮಯ ಇದ್ದು, ಜನರ ಸಮಸ್ಯೆಗಳನ್ನು ಆಲಿಸಬೇಕು. ಜನ ಬದಲಾವಣೆ ಬಯಸಿ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನು ನಾವು ಉಳಿಸಿಕೊಳ್ಳಬೇಕು. ಈಗಾಗಲೇ ಈ ಸಂಬಂಧ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಡಿಸಿಗಳ ಬಳಿ ಸಾಕಷ್ಟು ಹಣ ಇದೆ. ಬೇಕಾದರೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುತ್ತದೆ. ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಿ. ರಸಗೊಬ್ಬರ, ಬೀಜ ಎಲ್ಲವೂ ದಾಸ್ತಾನಿದೆ. ಎಲ್ಲವನ್ನು ರೈತರಿಗೆ ತಲುಪುವಂತೆ ನೋಡಿಕೊಳ್ಳಿ ಎಂಬ ಸಲಹೆ-ಸೂಚನೆಗಳನ್ನು ಹೊಸ ಶಾಸಕರಿಗೆ ನೀಡಲಾಗಿದೆ.

ಲೋಕಸಭೆ ಚುನಾವಣೆ ವಿಚಾರ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ, ಚುನಾವಣೆಗೆ ಈಗಿನಿಂದಲೇ ಕೆಲಸ ಪ್ರಾರಂಭಿಸುವಂತೆ ತಿಳಿಸಿದರು. ಕ್ಷೇತ್ರದಲ್ಲಿ ಬೀಡುಬಿಟ್ಟು ಕೆಲಸ ಮಾಡಿ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬೇಡಿ. ಇದು ಹೈಕಮಾಂಡ್​ ನೀಡಿರುವ ಕಟ್ಟುನಿಟ್ಟಿನ ಸೂಚನೆ ಎಂದು ಶಾಸಕರಿಗೆ ವಿವರಿಸಿದರು.

ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲಲೇಬೇಕು. ವಿಧಾನಸಭೆ ಚುನಾವಣೆ ಗೆದ್ದೆವು ಎಂದು ಸುಮ್ಮನೆ ಕೂರುವಂತಿಲ್ಲ. ಲೋಕಸಭೆ ಚುನಾವಣೆಯಲ್ಲೂ ಈ ಗೆಲುವಿನ ಯಾನ ಮುಂದುವರೆಯಬೇಕು. ಬಿಬಿಎಂಪಿ ಚುನಾವಣೆಯಲ್ಲೂ ವಿಜಯ ಸಾಧಿಸಬೇಕಿದೆ ಎಂದು ಹೇಳಿದರು.

ಜಿಲ್ಲಾ ಸಚಿವರ ನೇಮಕದವರೆಗೆ ಪ್ರತಿ ಜಿಲ್ಲೆಯಲ್ಲಿ ಹಾಗೂ ಶಾಸಕರು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷದ ಕಚೇರಿ ಸ್ಥಾಪಿಸಲೇಬೇಕು. ನಮಗೆ ಪಕ್ಷದ ಕಚೇರಿಯೇ ದೇಗುಲ. ಅದಕ್ಕೆ ಮೊದಲ ಆದ್ಯತೆ ನೀಡಬೇಕು. ಎಲ್ಲರಿಗೂ ಅಧಿಕಾರ ಸಿಗದಿರಬಹುದು. ಆದರೆ, ನಿಮ್ಮ ಶ್ರಮಕ್ಕೆ ಗೌರವ ಸಿಗುತ್ತದೆ. ಪಕ್ಷದ ಕೆಲಸವನ್ನು ದೇವರ ಕೆಲಸ ಎಂದು ಮಾಡಬೇಕು. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರನ್ನು ಮರೆಯಬಾರದು. ರಾಜ್ಯದ ಜನರಿಗೆ ಸ್ವಚ್ಛ ಆಡಳಿತ ನೀಡಲು ಸಹಕರಿಸಬೇಕು. ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ಕೊಟ್ಟರು.

ಯು.ಟಿ.ಖಾದರ್ ನೂತನ ಸ್ಪೀಕರ್: ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್​ ಅವರಿಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಖಾದರ್ ಅವರನ್ನು ಹಾಡಿಹೊಗಳಿದ ಸಿಎಂ, ಡಿಸಿಎಂ ಪಕ್ಷಕ್ಕಾಗಿ ಅವರು ಹೊಂದಿರುವ ಬದ್ಧತೆಯನ್ನು ಶ್ಲಾಘಿಸಿದರು. ಹೈಕಮಾಂಡ್ ಸೂಚನೆಗೆ ಖಾದರ್ ತಲೆ ಬಾಗಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ, ಸ್ಪೀಕರ್ ಆಗಲು ಒಪ್ಪದ ಹಿರಿಯ ಶಾಸಕರಿಗೆ ಚಾಟಿ ಬೀಸಿದರು.

ಗುಂಡೂರಾವ್ ಬೇಸರ?: ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರಕ್ಕೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನಗೊಂಡಂತೆ ಇದೆ. ಹಿರಿಯ ಶಾಸಕರಾಗಿದ್ದರೂ ಸಹ ಅತ್ಯಂತ ಹಿಂದಿನ ಸಾಲಿನಲ್ಲಿ ಕುಳಿತು ಶಾಸಕಾಂಗ ಸಭೆಯಲ್ಲಿ ತಮ್ಮ ಬೇಸರವನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ.

ಕಣ್ಣೀರು ಹಾಕಿದ ಶಾಸಕಿ: ಶಾಸಕಾಂಗ ಸಭೆ ಬಳಿಕ ಡಿಕೆ ಶಿವಕುಮಾರ್​ ಮುಂದೆ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಕಣ್ಣೀರು ಹಾಕಿದ್ದಾರೆ. ಚುನಾವಣೆ ಸಮಯದಲ್ಲಿ ಪೊಲೀಸರು ನಮಗೆ ಹಾಗೂ ಕಾರ್ಯಕರ್ತರಿಗೆ ಸಾಕಷ್ಟು ಕಿರುಕುಳ ನೀಡಿದ್ದಾರೆ. ಸುಳ್ಳು ಕೇಸ್ ದಾಖಲು ಮಾಡಿ ಕಿರುಕುಳ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಆಗಬೇಕು. ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇವಲ ಸೂಚನೆ ಕೊಡುವುದಿಲ್ಲ, ಎಚ್ಚರಿಕೆ ಕೊಡ್ತಾ ಇದ್ದೇನೆ: ಡಿಸಿ, ಸಿಇಒಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

Last Updated : May 24, 2023, 12:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.