ETV Bharat / state

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ : ವಿಧಾನಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಪ್ರಾಣಿಗಳ ಜನನ ನಿಯಂತ್ರಣ ನಿಯಮ 2001ರ ಅನುಸಾರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಕಾನೂನು ಸಚಿವ ಜೆ. ಸಿ ಮಾಧುಸ್ವಾಮಿ ತಿಳಿಸಿದರು.

BJP MLA RaviSubrahmanya
ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ
author img

By

Published : Mar 15, 2022, 3:43 PM IST

ಬೆಂಗಳೂರು : ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಬಗ್ಗೆ ವಿಧಾನಸಭೆಯಲ್ಲಿ ಇಂದು ಆಡಳಿತ ಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ಚರ್ಚೆ ನಡೆದ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಹಾಗೂ ಅವುಗಳ ಬಗ್ಗೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದರು.

ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ಮಾತನಾಡಿದರು

ಮುಖ್ಯಮಂತ್ರಿ ಬೊಮ್ಮಾಯಿ ಪರವಾಗಿ ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ಮಾತನಾಡಿ, ಬೆಂಗಳೂರಿನಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಪ್ರಾಣಿಗಳ ಜನನ ನಿಯಂತ್ರಣ ನಿಯಮ 2001ರ ಅನುಸಾರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಬೇಕು. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸಹಭಾಗಿತ್ವದಲ್ಲಿ ಪಾಲಿಕೆಯ ಎಲ್ಲ ವಲಯಗಳಲ್ಲೂ ಕೆಟಿಟಿಪಿ ಕಾಯ್ದೆ ಅನ್ವಯ ಟೆಂಡರ್ ಕರೆದು ಸೇವಾ ಸಂಸ್ಥೆಯವರ ಮೂಲಕ ಸಂತಾನಹರಣ ಶಸ್ತ್ರ ಚಿಕಿತ್ಸೆ ಕ್ರಮವನ್ನು ವಹಿಸಲಾಗಿದೆ.

ಶಸ್ತ್ರ ಚಿಕಿತ್ಸೆಗೆ ಒಳಪಡುವ ಬೀದಿನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಕಡ್ಡಾಯವಾಗಿ ಹಾಕಲಾಗುತ್ತದೆ. ರೇಬಿಸ್ ರೋಗವನ್ನು ನಿಯಂತ್ರಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿನ ವಾರ್ಡ್‍ಗಳಲ್ಲಿ ಬೀದಿನಾಯಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಪ್ರಗತಿಯಲ್ಲಿದೆ ಎಂದು ಹೇಳಿದರು.

ಸಂತಾನಹರಣ ಶಸ್ತ್ರ ಚಿಕಿತ್ಸೆ ನೀಡಬಹುದು.. ನಾವು ಬೀದಿ ನಾಯಿಗಳನ್ನು ಮನುಷ್ಯರಿಗೆ ಕಚ್ಚದಂತೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನೀಡಬಹುದು. ಆದರೆ, ಅವುಗಳನ್ನು ಕೊಲ್ಲಲು ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ನಾಯಿಗಳನ್ನು ಕೊಲ್ಲಲು ಅವಕಾಶವಿಲ್ಲ. ಹೆಚ್ಚೆಂದರೆ ಅವುಗಳ ಹಾವಳಿಯನ್ನು ತಡೆಯುವ ಪ್ರಯತ್ನ ಮಾಡಬಹುದು. ಹಾಗೊಂದು ವೇಳೆ ನಾವು ಕೊಲ್ಲಲು ಮುಂದಾದರೆ ಪ್ರಾಣಿ ದಯಾಸಂಘದವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗುತ್ತಾರೆ. ಆಗ ನಾವು ಏನು ಮಾಡಬೇಕು ಎಂದು ಸಚಿವ ಮಾಧುಸ್ವಾಮಿ ಪ್ರಶ್ನಿಸಿದರು.

ಈ ಹಂತದಲ್ಲಿ ರವಿಸುಬ್ರಹ್ಮಣ್ಯ ಅವರು ನಾವು ನಾಯಿಗಳನ್ನು ಕೊಲ್ಲಿ ಎಂದು ಹೇಳುವುದಿಲ್ಲ. ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಗೋವುಗಳನ್ನು ರಕ್ಷಿಸಲು ಗೋಶಾಲೆಗಳನ್ನು ಮಾಡಿರುವಂತೆ ನಾಯಿಗಳ ರಕ್ಷಣೆಗಾಗಿ ಬೆಂಗಳೂರಿನ ಹೊರವಲಯದಲ್ಲಿ ತಲಾ ಹತ್ತು ಎಕರೆ ಜಮೀನಿನಲ್ಲಿ ನಾಯಿಗಳನ್ನು ರಕ್ಷಿಸಲು ವ್ಯವಸ್ಥೆ ಮಾಡಿ ಎಂದರು.

ನಗರದಲ್ಲಿ ನಾಯಿಗಳ ಹಾವಳಿ ವಿಪರೀತವಾಗಿದೆ. ಸಾರ್ವಜನಿಕರು ನಿರ್ಭೀತವಾಗಿ ಓಡಾಡಲು ಹೆದರುತ್ತಿದ್ದಾರೆ. ಸರ್ಕಾರ ಏನಾದರೊಂದು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಆಗ ಬಿಜೆಪಿ ಮುಖ್ಯ ಸಚೇತಕ ಸತೀಶ್ ರೆಡ್ಡಿ ಮಾತನಾಡಿ, ನಾಯಿಗಳ ಹಾವಳಿಯನ್ನು ತಪ್ಪಿಸಲು ಏನಾದರೊಂದು ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮನವಿ ಮಾಡಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಮಾಜಿ ಸಚಿವ ಸುರೇಶ್‍ ಕುಮಾರ್ ಅವರು, ನಗರದಲ್ಲಿ ನಮ್ಮ ಪರಿಸ್ಥಿತಿ ಹೇಗಾಗಿದೆ ಎಂದರೆ ನಾಯಿಗಳಿಗಿಂತ ನಾವೇ ನಾಯಿಗಳು ಏಕೆ ಆಗಬಾರದು ಎಂಬಂತಾಗಿದೆ. ನಾಯಿಗಳನ್ನು ಕೊಲ್ಲಬಾರದು ನಿಜ. ನಾಯಿ ಕಚ್ಚಿಸಿಕೊಂಡವನ ಬಳಿ ಹೋಗಿ ನ್ಯಾಯಾಲಯದ ತೀರ್ಪು, ಕಾನೂನು ಕಟ್ಟಳೆ ಹೇಳಿದರೆ ಇದೆಲ್ಲವನ್ನು ಒಪ್ಪುವುದಿಲ್ಲ.

ಸುಪ್ರೀಂಕೋರ್ಟ್ ಪ್ರಕಾರ, ನಾಯಿಗಳನ್ನು ಕೊಲ್ಲಲಾಗದು. ಆದರೆ, ಇದರ ಹಾವಳಿಯನ್ನು ತಪ್ಪಿಸಲು ಸರ್ಕಾರ ಏನಾದರೊಂದು ಕ್ರಮ ತೆಗೆದುಕೊಳ್ಳಬೇಕು. ಸರ್ಕಾರ ಕೋರ್ಟ್‍ಗೆ ಮೇಲ್ಮನವಿ ಅರ್ಜಿಯನ್ನಾದರೂ ಹಾಕಲಿ ಎಂದು ಸಲಹೆ ನೀಡಿದರು.

ಸಾರ್ವಜನಿಕರು ಸುಮ್ಮನಿರುವುದಿಲ್ಲ.. ನಂತರ ಮಾತನಾಡಿದ ಸಚಿವ ಮಾಧುಸ್ವಾಮಿ, ನಾನು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ನಗರದ ಯಾವುದಾದರೂ ಹೊರಭಾಗಗಳಲ್ಲಿ ನಾಯಿ ಶೆಡ್‍ಗಳನ್ನು ತೆರೆದರೆ ಸಾರ್ವಜನಿಕರು ಸುಮ್ಮನಿರುವುದಿಲ್ಲ. ಈಗಾಗಲೇ ಅನೇಕ ಕಡೆ ಕಸ ಹಾಕಲು ವಿರೋಧ ವ್ಯಕ್ತಪಡಿಸುತ್ತಾರೆ. ಅಂಥದರಲ್ಲಿ ನಾವು ನಾಯಿ ಶೆಡ್‍ಗಳನ್ನು ನಿರ್ಮಿಸಿದರೆ ಯಾರು ತಾನೇ ಸುಮ್ಮನಿರುತ್ತಾರೆ. ಕೋರ್ಟ್ ತೀರ್ಪಿನ ಪ್ರಕಾರ, ನಾವು ನಾಯಿಗಳನ್ನು ಕೊಲ್ಲುವಂತಿಲ್ಲ. ಸಾಧ್ಯವಾದರೆ ನಾವು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸುವುದಾಗಿ ಹೇಳಿದರು.

ಓದಿ: ವಿಧಾನ ಪರಿಷತ್ ಸದಸ್ಯರ ಅನುದಾನ ಕಡಿತ: ಸರ್ಕಾರದ ವಿರುದ್ಧ ಶ್ರೀಕಂಠೇಗೌಡ ಆಕ್ರೋಶ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.