ETV Bharat / state

Basavaraja Bommai: ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ‌ ಕುರಿತು ಚರ್ಚೆ- ಬಸವರಾಜ ಬೊಮ್ಮಾಯಿ - ಆರ್​​ಎಸ್ಎಸ್ ಸಂಸ್ಥಾಪಕ ಡಾ ಹೆಡ್ಗೆವಾರ್

ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಮುಂದಿನ ದಿನಗಳಲ್ಲಿ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದೆ.

Basavaraja Bommai
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jun 8, 2023, 6:59 PM IST

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ''ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ'' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ''ಹೊಸ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲ ಮಾಡಬಹುದಿತ್ತು ಎನ್ನುವ ಬಗ್ಗೆಯೂ ಚರ್ಚೆ ನಡೆದಿದೆ'' ಎಂದರು.

ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆ ಆಗಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ: ಬಿಜೆಪಿ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲವಿರುವ ವಿಚಾರವಾಗಿ ಬಿಜೆಪಿ ತಮ್ಮ ಶಾಸಕರ ಅಭಿಪ್ರಾಯ ಸಂಗ್ರಹದ ಮೊರೆ ಹೋಗಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ವಿಪಕ್ಷ ನಾಯಕನ ಆಯ್ಕೆಗೆ ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಶಾಸಕರ ಅಭಿಪ್ರಾಯಗಳನ್ನು ಅರುಣ್ ಸಿಂಗ್ ಹೈಕಮಾಂಡ್​ಗೆ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಾಡಿಗೆದಾರರಿಗೂ ಗೃಹಜ್ಯೋತಿ ಉಚಿತ ವಿದ್ಯುತ್.. ತೆರಿಗೆ ಪಾವತಿದಾರರಿಗಿಲ್ಲ ಗೃಹ ಲಕ್ಷ್ಮಿ ಯೋಜನೆ

ಡಾ.ಹೆಡ್ಗೆವಾರ್ ಪಾಠ ಇರಬಾರದು ಎನ್ನುವುದು ಅಸಹಿಷ್ಣುತೆ- ಸಿ.ಟಿ‌. ರವಿ: ಶಾಲಾ ಪಠ್ಯದಲ್ಲಿ ಕಾರ್ಲ್ ಮಾರ್ಕ್ಸ್, ಮಾವೋ ಕುರಿತ ಪಠ್ಯಗಳು ಇರಬಹುದು. ಆದರೆ, ಆರ್​​ಎಸ್ಎಸ್ ಸಂಸ್ಥಾಪಕ ಡಾ.ಹೆಡ್ಗೆವಾರ್ ಅವರ ಪಾಠ ಇರಬಾರದು ಎನ್ನುವುದು ಅಸಹಿಷ್ಣುತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ‌.ರವಿ ತೀವ್ರ ಟೀಕಾಸಮರ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಠ್ಯ ಪರಿಷ್ಕರಣೆ ವಿಚಾರವಾಗಿ ಇಂದು (ಗುರುವಾರ) ಅವರು ಮಾತನಾಡಿದರು. ''ಶಾಲಾ ಪಠ್ಯದಲ್ಲಿ ಪ್ರಜಾಪ್ರಭುತ್ವ ಒಪ್ಪದ ಕಾರ್ಲ್ ಮಾರ್ಕ್ಸ್ ಹಾಗೂ ಮಾವೋ ಪಠ್ಯ ಇರಬಹುದು. ಅವರು ಈ ದೇಶಕ್ಕೆ ಸಂಬಂಧಪಡದವರು. ಕಾರ್ಲ್ ಮಾರ್ಕ್ಸ್ ಮತ್ತು ಮಾವೋ ಇಬ್ಬರೂ ಪ್ರಜಾಪ್ರಭುತ್ವ ವಿರೋಧಿಗಳೇ ಆಗಿದ್ದಾರೆ. ಮಾವೋವಾದಿಗಳ ಹಾಗೂ ಮಾರ್ಕ್ಸ್ ವಾದಿಗಳ ಪಾಠ ಇರಬಹುದು. ಆದರೆ, ದೇಶಭಕ್ತ ಡಾ. ಹೆಡ್ಗೇವಾರ್ ಪಾಠ ಇರಬಾರದು ಎನ್ನುವುದು ಅಸಹಿಷ್ಣುತೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸೈದ್ಧಾಂತಿಕವಾಗಿ ಹೆಡ್ಗೆವಾರ್ ಅವರನ್ನು ವಿರೋಧಿಸಬಹುದು. ಆದರೆ ಅವರ ದೇಶಭಕ್ತಿಯನ್ನು ಪ್ರಶ್ನಿಸುವ ನೈತಿಕತೆ ಯಾರಿಗೂ ಕೂಡ ಇಲ್ಲ. ಕಾಂಗ್ರೆಸ್‌ ಸರ್ಕಾರ ಪಠ್ಯ ಪರಿಷ್ಕರಣೆ ಮಾಡಲಿ. ಜನರು ಅವರಿಗೆ ಅಧಿಕಾರ ಕೊಟ್ಟಿದ್ದಾರೆ. ಹಾಗೆಂದು ಏನಾದರೂ ಮಾಡುತ್ತೇವೆ ಎಂದು ಹೊರಟರೆ ಅದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾವರ್ಕರ್, ಹೆಡ್ಗೆವಾರ್ ಹುಸಿ ದೇಶಭಕ್ತರ ಪಾಠ ತೆಗೆಯಿರಿ: ಸಾಹಿತಿ ಕುಂ ವೀರಭದ್ರಪ್ಪ ಆಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.