ETV Bharat / state

ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದರಿಂದ ರೈತರ ಭೂ ಪರಿಹಾರ ಸರಳ: ಸಚಿವ ನಿರಾಣಿ

ಹೊಸ ಭೂ ಸ್ವಾಧೀನ ಕಾಯ್ದೆ 2013ಕ್ಕೆ ತಿದ್ದುಪಡಿ ತರುವ ಮೂಲಕ ರೈತರಿಗೆ ಪರಿಹಾರ ವಿಳಂಬವಾಗುವುನ್ನು ತಡೆಯಲಾಗಿದೆ. ಭೂಮಿಗೆ ಬೆಲೆ ನಿಗದಿ ಮಾಡುವಾಗ ಭೂ ಮಾಲೀಕನೊಂದಿಗೆ ಸಮಾಲೋಚನೆ ಸಭೆ ನಡೆಸಲಾಗುವುದು ಎಂದು ಸಚಿವ ಮುರುಗೇಶ್ ಆರ್.ನಿರಾಣಿ ವಿಧಾನಸಭೆಗೆ ತಿಳಿಸಿದರು.

Murugesh Nirani
ಸಚಿವ ಮುರುಗೇಶ್ ನಿರಾಣಿ
author img

By

Published : Mar 25, 2022, 3:45 PM IST

ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ನು ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರ ಅವಧಿ ವೇಳೆ ಕಾಂಗ್ರೆಸ್ ಸದಸ್ಯ ಎನ್.ಎ.ಹ್ಯಾರಿಸ್ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕಾಯ್ದೆಗಳು ಪ್ರತ್ಯೇಕವಾಗಿದ್ದವು. ಇತ್ತೀಚೆಗೆ ಹಾಲಿ ಇದ್ದ ಕೆಐಎಡಿಬಿ ಕಾಯ್ದೆಗೆ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಿದ್ದರಿಂದ ರೈತರಿಗೆ ತೊಂದರೆಯಾಗದಂತೆ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.

ಹೊಸ ಭೂ ಸ್ವಾಧೀನ ಕಾಯ್ದೆ 2013ಕ್ಕೆ ತಿದ್ದುಪಡಿ ತರುವ ಮೂಲಕ ಪರಿಹಾರ ವಿಳಂಬವಾಗುವುನ್ನು ತಡೆಯಲಾಗಿದೆ. ಜಮೀನಿಗೆ ದರ ನಿಗದಿಪಡಿಸುವ ಸಲುವಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿ, ಕೆಐಎಡಿಬಿಯ ವಿಶೇಷ ಅಧಿಕಾರಿ, ಭೂ ದರ ನಿರ್ಧರಣಾ ಸಲಹಾ ಸಮಿತಿ ಸಭೆಯಲ್ಲಿ ಭೂ ಮಾಲೀಕರೊಂದಿಗೆ ಸಮಾಲೋಚಿಸಿ ಮಾರ್ಗಸೂಚಿ ದರ ನಿಗದಪಡಿಸುತ್ತಾರೆ. ಕೆಐಎಡಿಬಿ ವತಿಯಿಂದ ಭೂ ಸ್ವಾಧೀನಪಡಿಸಿದ ಜಮೀನಿಗೆ ಪಡೆಯುವ ಪರಿಹಾರ ಮೊತ್ತಕ್ಕೆ ಮೀರದ ಮೊತ್ತದಲ್ಲಿ ರೈತರು ಕೃಷಿ ಜಮೀನನ್ನು ಖರೀದಿಸಿದ ಸಂದರ್ಭದಲ್ಲಿ ಮುದ್ರಾಂಕ ಶುಲ್ಕ ಶೇ. 50ರಷ್ಟು ರಿಯಾಯಿತಿ ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದರು.

3 ವರ್ಷದಲ್ಲಿ 232 ಕೈಗಾರಿಕೆಗಳಿಗೆ ಹಂಚಿಕೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ವತಿಯಿಂದ ಮೈಸೂರು ಜಿಲ್ಲೆ ಅಡಕನಹಳ್ಳಿ ಹಾಗೂ ತಾಂಡ್ಯ 2ನೇ ಹಂತದ ಕೈಗಾರಿಕಾ ಪ್ರದೇಶಕ್ಕಾಗಿ ಭೂ ಸ್ವಾಧೀನ ಮಾಡಿಕೊಂಡ ಜಮೀನುಗಳ ಪೈಕಿ ಮೂರು ವರ್ಷದಲ್ಲಿ 232 ಕೈಗಾರಿಕೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ ಮುರುಗೇಶ್ ನಿರಾಣಿ, ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪರವಾಗಿ ಶಾಸಕ ಶರತ್ ಬಚ್ಚೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಬೃಹತ್ ಕೈಗಾರಿಕೆಗೆ ಗುತ್ತಿಗೆ ಕರಾರು ನೆರವೇರಿಸಲಾದ ದಿನಾಂಕದಿಂದ ಮೂರು ವರ್ಷ ಹಾಗೂ ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಗುತ್ತಿಗೆ ಕರಾರು ನೆರವೇರಿಸಿದ ದಿನಾಂಕದಿಂದ 5 ವರ್ಷದೊಳಗೆ ಯೋಜನೆ ಅನುಷ್ಠಾನಗೊಳಿಸಬೇಕೆಂಬ ಷರತ್ತು ವಿಸಲಾಗಿದೆ ಎಂದರು.

ಇದನ್ನೂ ಓದಿ: ಪಿಪಿಪಿ ಮಾದರಿಯಲ್ಲಿ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ: ಕೋಟ ಶ್ರೀನಿವಾಸ ಪೂಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.