ETV Bharat / state

ಫೆಬ್ರವರಿಯಲ್ಲೇ ಲೋಕಸಭೆ ಅಭ್ಯರ್ಥಿಗಳ ಅಂತಿಮಕ್ಕೆ ಹೈಕಮಾಂಡ್ ಜೊತೆ ಚರ್ಚೆ: ವಿಜಯೇಂದ್ರ - Lok Sabha election

ಲೋಕಸಭೆ ಚುನಾವಣೆಗೆ ಮೈತ್ರಿ ಹಿನ್ನೆಲೆಯಲ್ಲಿ ಸ್ಥಾನ ಹಂಚಿಕೆ ಕುರಿತು ವರಿಷ್ಠರು ಚರ್ಚಿಸಲಿದ್ದಾರೆ. ಸದ್ಯ ಜೆಡಿಎಸ್​​ಅನ್ನು ಎನ್​ಡಿಎಗೆ ಸೇರಿಸಿಕೊಳ್ಳಲಾಗಿದೆ. ನಮ್ಮ ಕಾರ್ಯಕರ್ತರಿಗೆ ತೊಂದರೆಯಾಗದಂತೆ ರಾಜ್ಯದಲ್ಲಿ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

discussion-with-high-command-to-finalize-names-of-lok-sabha-candidates-in-february-vijayendra
ಫೆಬ್ರವರಿಯಲ್ಲೇ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವಂತೆ ಹೈಕಮಾಂಡ್ ಜೊತೆ ಚರ್ಚೆ: ವಿಜಯೇಂದ್ರ
author img

By ETV Bharat Karnataka Team

Published : Jan 11, 2024, 9:01 PM IST

ಬೆಂಗಳೂರು: ಫೆಬ್ರವರಿಯಲ್ಲೇ ಅಭ್ಯರ್ಥಿಗಳ ಹೆಸರು ಅಂತಿಮಗೊಂಡರೆ ಕ್ಷೇತ್ರದಲ್ಲಿ ಗೊಂದಲವಾಗುವುದಿಲ್ಲ, ಕೊನೆ ಕ್ಷಣದ ಗೊಂದಲ ತಪ್ಪಿಸಲು ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಬೇಕು ಎನ್ನುವ ಮನವಿಯನ್ನು ಎಲ್ಲಾ ಕ್ಷೇತ್ರಗಳ ಸ್ಥಳೀಯ ನಾಯಕರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅತಿ ಶೀಘ್ರದಲ್ಲೇ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಹೊರವಲಯದ ರಮಾಡ ರೆಸಾರ್ಟ್​​ನಲ್ಲಿ ಲೋಕಸಭಾ ಕ್ಷೇತ್ರವಾರು ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ದಿನಗಳ ಕಾಲ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಸ್ಥಿತಿಗತಿ ಕುರಿತು ಸಂಸದರು, ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರ ಜೊತೆ ಸುದೀರ್ಘವಾದ ಚರ್ಚೆ ಮಾಡಿದ್ದೇವೆ. ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ರಾಜ್ಯದಲ್ಲಿಯೂ ವಿಧಾನಸಬಾ ಚುನಾವಣೆಯಲ್ಲಿ ಹಿನ್ನಡೆ ಆದರೂ ಪ್ರಸ್ತುತ ಸನ್ನಿವೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಹೇಳಿದರು.

ಇಡೀ ದೇಶದಲ್ಲಿ ಮೋದಿ ಪರ ಅಭಿಪ್ರಾಯ ಹಾಗೂ ಅವರ ಜನಪ್ರಿಯತೆಯಿಂದಾಗಿ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾಗಬೇಕು ಎನ್ನುವ ವಾತಾವರಣ ಇದೆ. ರಾಜ್ಯದಲ್ಲಿಯೂ ಅದಕ್ಕೆ ಪೂರಕ ವಾತಾವರಣವಿದ್ದು, ಬಿಜೆಪಿಗೆ ಅಧಿಕಾರ ನೀಡಲು ಮತದಾರರು ಉತ್ಸುಕರಾಗಿದ್ದಾರೆ. ಮೋದಿ ಮತ್ತೊಮ್ಮೆ ಪಿಎಂ ಆಗುವ ಉತ್ಸಾಹದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೂಡ ಸೋಲಿನ ಹತಾಶೆಯಿಂದ ಹೊರಗೆ ಬಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಹಾಗೂ ಎಲ್ಲ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡರು ಎರಡು ದಿನ ಸಾಕಷ್ಟು ಸಲಹೆ ನೀಡಿದ್ದಾರೆ. ಪಕ್ಷದ ಹಿತ ಗಮನದಲ್ಲಿಟ್ಟುಕೊಂಡು ಎಲ್ಲ ಕ್ಷೇತ್ರದಲ್ಲಿ ಕಾರ್ಯಕರ್ತರ ಸಕ್ರೀಯ ಮಾಡುವ ಕೆಲಸ ಮಾಡಲಿದ್ದೇವೆ, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಟ್ಟುಕೊಳ್ಳುವ ಫಲಿತಾಂಶ ಈ ಬಾರಿ ಬರಲಿದೆ ಎನ್ನುವ ವಿಶ್ವಾಸವಿದೆ. ರಾಜ್ಯದ ಮತದಾರರು ಮೋದಿಗೆ ಸಂಪೂರ್ಣ ಬೆಂಬಲ ನೀಡಲಿದ್ದಾರೆ, ಎಲ್ಲರೂ ಒಗ್ಗಟ್ಟಾಗಿ ಒಂದಾಗಿ ಚುನಾವಣೆ ಎದುರಿಸಲಿದ್ದೇವೆ ಎಂದರು.

ರಾಜ್ಯಪಾಲರಿಗೆ ದೂರು: ನಿನ್ನೆ ರಾಜ್ಯ ಸರ್ಕಾರ ಒಂದು ಸರ್ಕಾರಿ ಆದೇಶ ಹೊರಡಿಸಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರ ನೇಮಕ ಮಾಡಿದ್ದು, ಸಂಪುಟ ದರ್ಜೆ ನೀಡಿದೆ. ದಾಖಲೆಯ ಬಜೆಟ್​​ ನೀಡಿರುವ ಸಿದ್ದರಾಮಯ್ಯ ರಾಜ್ಯವನ್ನು ಏನು ಮಾಡಲು ಹೊರಟಿದ್ದಾರೆ? ಸರ್ಕಾರಿ ನೌಕರರಿಗೆ ವೇತನ ಕೊಡಲಾಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲೂ ಸಾಧ್ಯವಾಗುತ್ತಿಲ್ಲ. ಶಾಸಕರಿಗೆ ಅನುದಾನ ಕೊಡಲಾಗುತ್ತಿಲ್ಲ, ಇದರ ನಡುವೆ ಕೋಟ್ಯಂತರ ರೂ. ದುರುಪಯೋಗಪಡಿಸಿಕೊಂಡು ಅವರ ಕಾರ್ಯಕರ್ತರಿಗೆ 20-30 ಸಾವಿರ ರೂ. ಕೊಡಲು ಹೊರಟಿದ್ದಾರೆ. ರಾಜ್ಯದ ತೆರಿಗೆದಾರರ ಹಣ ಪೋಲು ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿ ರಾಜ್ಯಪಾಲರಿಗೆ ದೂರು ಕೊಡಲಿದ್ದೇವೆ. ನ್ಯಾಯಾಲಯದ ಮೊರೆ ಹೋಗಲಿದ್ದೇವೆ ಎಂದು ಎಚ್ಚರಿಸಿದರು.

ನಮ್ಮ ಗುರಿ ಇರುವುದು 28 ಕ್ಷೇತ್ರ ಗೆಲ್ಲಬೇಕು ಎನ್ನುವುದಾಗಿದೆ, ಅದಕ್ಕೆ ವರಿಷ್ಠರ ಭೇಟಿ ಮಾಡಿ ಅಭ್ಯರ್ಥಿಗಳ ವಿಚಾರದಲ್ಲಿ ಮಾತುಕತೆ ನಡೆಸಲಾಗುತ್ತದೆ. ಕಾಂಗ್ರೆಸ್ ನಾಯಕರು 18 - 20 ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದರು, ಸಚಿವರನ್ನು ನಿಲ್ಲಿಸುವ ಮಾತನಾಡಲಾಗುತ್ತಿತ್ತು. ಆದರೆ, ಈಗ ಬಿಜೆಪಿ ಅಲೆ ನೋಡಿ ಸಚಿವರು ಚುನಾವಣೆಗೆ ನಿಲ್ಲಲು ಸಿದ್ಧರಿಲ್ಲದಂತಾಗಿದೆ. ಸೋಲುವ ಭೀತಿಯಿಂದ ಚುನಾವಣೆಗೆ ನಿಲ್ಲಲು ಹಿಂದೇಟು ಹಾಕಿದ್ದಾರೆ. ಮಂತ್ರಿಯಾಗಿ ಸೋತರೆ ಮುಖಭಂಗವಾಗಲಿದೆ ಎಂದು ಯಾರೂ ಚುನಾವಣೆಗೆ ನಿಲ್ಲಲು ಮುಂದೆ ಬರುತ್ತಿಲ್ಲ. ಆದರೆ, ನಮ್ಮ ಸಂಸದರು ಉತ್ಸಾಹದಲ್ಲಿದ್ದಾರೆ. ಚುನಾವಣೆಗೆ ನಿಲ್ಲಲ್ಲ ಎಂದವರೂ ಮತ್ತೊಮ್ಮೆ ನಿಲ್ಲುವ ಅಪೇಕ್ಷೆ ಹೊಂದಿದ್ದಾರೆ. ಆದರೆ, ಎಲ್ಲವನ್ನೂ ವರಿಷ್ಠರು ನಿರ್ಧಾರ ಮಾಡಲಿದ್ದಾರೆ ಎಂದರು.

ಸುಮಲತಾ ಮಂಡ್ಯದಿಂದಲೇ ಸ್ಪರ್ಧೆ ಮಾಡುವ ಹೇಳಿಕೆ ನೀಡಿರುವ ಕರಿತು ಪ್ರತಿಕ್ರಿಯೆ ನೀಡಿದ ವಿಜಯೆಂದ್ರ, ಸುಮಲತಾ ಅವರನ್ನ ಭೇಟಿಯಾಗಿ ಈ ಬಗ್ಗೆ ಚರ್ಚಿಸಲಾಗುತ್ತದೆ. ವರಿಷ್ಠರ ಜೊತೆಯೂ ಚರ್ಚೆ ನಡೆಸಿ ಎಲ್ಲವನ್ನೂ ಸರಿಪಡಿಸಿಕೊಳ್ಳಲಾಗುತ್ತದೆ. ನಮ್ಮ ಟಾರ್ಗೆಟ್ ತಲುಪುವಲ್ಲಿ ನಾವು ಸಫಲರಾಗುತ್ತೇವೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.