ETV Bharat / state

ಪಿಪಿಇ ಕಿಟ್ ವಿಲೇವಾರಿ: ಮಾರ್ಗಸೂಚಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - Bangalore High Court notice to Govt News

ರಾಜ್ಯ ಸರ್ಕಾರ ಪಿಪಿಇ ಕಿಟ್​ಗಳನ್ನು ವಿಲೇವಾರಿ ಮಾಡಲು ಹಾಗೂ ನಿರ್ವಹಣೆಗೆ ರೂಪಿಸಿರುವ ಮಾರ್ಗಸೂಚಿಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
author img

By

Published : Aug 19, 2020, 7:23 AM IST

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಬಳಸುವ ಪಿಪಿಇ ಕಿಟ್​​ಗಳ ಸುರಕ್ಷಿತ ವಿಲೇವಾರಿಗೆ ರೂಪಿಸಿರುವ ಮಾರ್ಗಸೂಚಿಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಕುರಿತು ವಕೀಲ ಕೆ.ಬಿ.ವಿಜಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ವಕೀಲ ವಿಜಯಕುಮಾರ್ ವಾದಿಸಿ, ಸರ್ಕಾರ ಪಿಪಿಇ ಕಿಟ್​​ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿಲ್ಲ. ಮಾಸ್ಕ್, ಗ್ಲೌಸ್ ಮತ್ತು ಪಿಪಿಇ ಕಿಟ್​​ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ಅಪಾಯಕಾರಿ. ಹೀಗಾಗಿ ಇವುಗಳ ನಿರ್ವಹಣೆಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಈ ಅರ್ಜಿಯನ್ನು ರಾಜ್ಯದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಕೋರಿ ಸಲ್ಲಿಸಿರುವ ಇತರೆ ಅರ್ಜಿಗಳ ಜೊತೆ ವಿಚಾರಣೆ ನಡೆಸುವುದಾಗಿ ತಿಳಿಸಿತು. ಹಾಗೆಯೇ ರಾಜ್ಯ ಸರ್ಕಾರ ಪಿಪಿಇ ಕಿಟ್​​ಗಳನ್ನು ವಿಲೇವಾರಿ ಮಾಡಲು ಹಾಗೂ ನಿರ್ವಹಣೆಗೆ ರೂಪಿಸಿರುವ ಮಾರ್ಗಸೂಚಿಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.