ಬೆಂಗಳೂರು: ಪ್ರತಿಷ್ಠಿತ ಮಾಲ್ವೊಂದರ ಥಿಯೇಟರ್ನಲ್ಲಿ ಸಿನಿಮಾ ಆರಂಭಕ್ಕೂ ಮುನ್ನ ಪ್ರಸಾರವಾಗುವ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ನಗರ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಅ.26 ರಂದು ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ಚಿತ್ರ ಪ್ರದರ್ಶನದ ವೇಳೆ ಕೆಲವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಅರುಗೌಡ ಹಾಗೂ ಐಶ್ವರ್ಯ ಎಂಬವರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು ಎನ್ನಲಾಗಿದೆ.
ಇದೀಗ ಸುಬ್ರಹ್ಮಣ್ಯ ನಗರ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.