ಬೆಂಗಳೂರು: ಯಾವುದೇ ಕಾರಣಕ್ಕೂ ನಾವು 12 ಮಂದಿ ಶಾಸಕರು ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಅತೃಪ್ತ ಶಾಸಕರು ಮುಂಬೈಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಂದು ಮುಂಬೈನ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಾಸಕ ಎಸ್ ಟಿ ಸೋಮಶೇಖರ್, ನಾವು 12 ಜನ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಪಕ್ಷೇತರರು ಅವರ ನಿರ್ಧಾರವನ್ನು ತೆಗೆದುಕೊಳ್ಳಲಿ. ಶಾಸಕ ಸುಧಾಕರ್ ಕೂಡಾ ನಮ್ಮೊಂದಿಗೆ ಸೇರ್ಪಡೆಯಾಗಲಿದ್ದು, ಈಗವರು ದೆಹಲಿಯಲ್ಲಿದ್ದಾರೆ ಎಂದು ಹೇಳಿದ್ರು.
ಇದೇ ವೇಳೆ ಮಾತನಾಡಿದ ಎಂಟಿಬಿ ನಾಗರಾಜ್, ನಾನು ಮತ್ತು ಸುಧಾಕರ್ ಒಂದೆಡೆ ಸೇರಿ ಮಾತುಕತೆ ನಡೆಸಿ ರಾಜೀನಾಮೆ ಹಿಂಪಡೆಯಬೇಕೋ ಬೇಡವೋ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದೆ.ಆದ್ರೆ ನಾನು ರಾಜೀನಾಮೆ ಹಿಂಪಡೆಯುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ರು.