ETV Bharat / state

ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟದ ಬದಲಿಗೆ ಆಹಾರ ಧಾನ್ಯ ವಿತರಿಸಿ : ಹೈಕೋರ್ಟ್ ಸೂಚನೆ - groceries instead of mid day meal

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಏಪ್ರಿಲ್ 14, 2021ರಿಂದ ಇಲ್ಲಿಯವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಆದೇಶಿಸಿದೆ.

ಮಧ್ಯಾಹ್ನ ಬಿಸಿಯೂಟದ ಬದಲಿಗೆ ಆಹಾರ ಧಾನ್ಯ
ಮಧ್ಯಾಹ್ನ ಬಿಸಿಯೂಟದ ಬದಲಿಗೆ ಆಹಾರ ಧಾನ್ಯ
author img

By

Published : Jun 4, 2021, 2:46 AM IST

ಬೆಂಗಳೂರು : ಕೋವಿಡ್ ಕಾರಣಕ್ಕಾಗಿ ಕಳೆದ ವರ್ಷ ಶಾಲೆಗಳು ನಡೆಯದಿದ್ದಾಗ ಮಧ್ಯಾಹ್ನದ ಬಿಸಿಯೂಟಕ್ಕೆ ಪರ್ಯಾಯವಾಗಿ ಮಕ್ಕಳಿಗೆ ಆಹಾರ ಧಾನ್ಯ ನೀಡಿದಂತೆ ಈ ಬಾರಿಯೂ ಲಾಕ್ ಡೌನ್ ಸಮಯದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಏಪ್ರಿಲ್ 14, 2021ರಿಂದ ಇಲ್ಲಿಯವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಆದೇಶಿಸಿದೆ.

ಇದೇ ವೇಳೆ, ಸಮಾಜದ ದುರ್ಬಲ ವರ್ಗದವರು ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಅವರಿಗೆ ಆಹಾರ ಕಿಟ್ ನೀಡುವ ಕುರಿತು ಮುಂದಿನ ಸೋಮವಾರದ ಒಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದನ್ನು ಓದಿ:ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.