ETV Bharat / state

ಕಳಪೆ ಗುಣಮಟ್ಟದ ಟಾರ್ಪಲಿನ್ ನೀಡುವ ಸಂಸ್ಥೆಗಳು ಕಪ್ಪುಪಟ್ಟಿಗೆ: ಸಚಿವ ಬಿ ಸಿ ಪಾಟೀಲ್​ ಖಡಕ್​ ಎಚ್ಚರಿಕೆ - Agricultural Minister B C Patil

ಭಾರತೀಯ ಮಾಪನ ಸಂಸ್ಥೆಯಿಂದ ಪರವಾನಿಗೆ ಹೊಂದಿರುವ ಸಂಸ್ಥೆಗಳು ಅಥವಾ ಅವರಿಂದ ಒಡಂಬಡಿಕೆ ಪಡೆದ ಸಂಸ್ಥೆಗಳನ್ನು ಆರ್​ಎಫ್​ಪಿ ಮುಖಾಂತರ ಅರ್ಜಿ ಕರೆದು, ಸಂಸ್ಥೆಗಳು ಹೊಂದಿರುವ ಪರವಾನಿಗೆಯನ್ನು ತಾಂತ್ರಿಕವಾಗಿ ಮೌಲ್ಯಮಾಪನಗೊಳಿಸಿ ಅರ್ಹಗೊಂಡ ಸಂಸ್ಥೆಗಳನ್ನು ಎಂಪಾನೆಲ್ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಪರವಾನಿಗೆಯನ್ನು ಹೊಂದಿರುವ 24 ಸಂಸ್ಥೆಗಳನ್ನು ಎಂಪಾನೆಲ್​ಗೊಳಿಸಲಾಗಿರುತ್ತದೆ.

B. C Patil
ಬಿ. ಸಿ ಪಾಟೀಲ್
author img

By

Published : Dec 26, 2021, 10:51 PM IST

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಗುಣಮಟ್ಟದ ಟಾರ್ಪಾಲಿನ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಗುಣಮಟ್ಟಕ್ಕಿಂತ ಕಳಪೆ ಎಂದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳನ್ನು ಮುಂದಿನ ಮೂರು ವರ್ಷಗಳ ಕಾಲ ಇಲಾಖೆಯಲ್ಲಿ ಭಾಗವಹಿಸುವಿಕೆಯಿಂದ ಅನರ್ಹಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಖಡಕ್ಕಾಗಿ ಎಚ್ಚರಿಸಿದ್ದಾರೆ.

ಪರವಾನಿಗೆಯನ್ನು ಹೊಂದಿರುವ ಟಾರ್ಪಲಿನ್‌ಗಳನ್ನೇ ಸ್ವೀಕರಿಸಲು ಹಾಗೂ ವಿತರಿಸಲಾಗುತ್ತದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿರುವ ಬಿ. ಸಿ ಪಾಟೀಲ್, ಕೃಷಿ ಇಲಾಖೆಯಿಂದ ಒದಗಿಸಲಾಗಿದೆ ಎಂಬುದರ ಖಾತ್ರಿಯ ಜೊತೆಗೆ ತಯಾರಿಕ ಸಂಸ್ಥೆಯ ಹೆಸರು, ಬ್ಯಾಚ್ ಸಂಖ್ಯೆ ಮತ್ತು ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಸಿಎಂಎಲ್​ ಸಂಖ್ಯೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಟಾರ್ಪಾಲಿನ್ ಮೇಲೆ ಲೇಜರ್ ಪ್ರಿಂಟ್ ಅಥವಾ ಅಳಿಸಲಾರದ ಷಾಹಿಯಲ್ಲಿ ಮುದ್ರಿಸಿರುವುದನ್ನು ಖಾತರಿ ಪಡಿಸಿಕೊಂಡ ನಂತರವೇ ದಾಸ್ತಾನನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸ್ವೀಕರಿಸಲಾಗುತ್ತಿದೆ.

ಸರಬರಾಜು ಆದೇಶ ಪಡೆದ ಸಂಸ್ಥೆಗಳು, ಸರಬರಾಜು ಮಾಡಿದ ಟಾರ್ಪಾಲಿನ್​ಗಳಲ್ಲಿ ಜಿಲ್ಲೆಗೆ ಒಂದರಂತೆ ಮಾದರಿಯನ್ನು ತೆಗೆದು ಗುಣಮಟ್ಟದ ಪರೀಕ್ಷೆಗಾಗಿ ಸಿಐಪಿಐಟಿ ಸಂಸ್ಥೆಗೆ ಗುಣಮಟ್ಟ ಪರೀಕ್ಷೆಗಾಗಿ ಪರೀಕ್ಷಾ ಶುಲ್ಕವನ್ನು ಸರಬರಾಜುದಾರ ಸಂಸ್ಥೆಯೇ ಪಾವತಿಸುವ ಷರತ್ತಿನೊಂದಿಗೆ ಕಳುಹಿಸಲು ಸೂಚಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ ಹಾಗೂ ಇನ್ನಿತರ ಹವಾಮಾನ ವೈಪರೀತ್ಯಗಳಿಂದ ಸಂರಕ್ಷಿಸಿ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಆ ಮೀ X 6 ಮೀ ಅಳತೆಯ ಟಾರ್ಪಾಲಿನ್​ಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ .50 ಮತ್ತು ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯ ಧನ ಒದಗಿಸಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಿಸಲಾಗುತ್ತಿದೆ.

ಐದು ಪದರುಗಳುಳ್ಳ 250 ಜಿ.ಎಸ್.ಎಂ (ಜಿಎಸ್ಎಂ) ತೂಕದ ಕಪ್ಪು ಬಣ್ಣದ ಮಾನದಂಡಗಳಿಗೆ ಅನುಗುಣವಾಗಿರುವ 8 ಮೀ X 6 ಮೀ ಅಳತೆಯ ಎಚ್​ಡಿಪಿಸಿ ಟಾರ್ಪಾಲಿನ್‌ಗಳನ್ನು ಸಹಾಯಧನದಡಿ ಒದಗಿಸಲಾಗುತ್ತಿದೆ. 2021-22 ನೇ ಸಾಲಿನಲ್ಲಿ 239606 ಟಾರ್ಪಾಲಿನ್​ಗಳನ್ನು ವಿತರಿಸಲು ಜಿಲ್ಲಾವಾರು ಕ್ರಿಯಾ ಯೋಜನೆ ರೂಪಿಸಿ ನೀಡಲಾಗಿರುತ್ತದೆ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ಮಾಪನ ಸಂಸ್ಥೆಯಿಂದ ಪರವಾನಿಗೆ ಹೊಂದಿರುವ ಸಂಸ್ಥೆಗಳು ಅಥವಾ ಅವರಿಂದ ಒಡಂಬಡಿಕೆ ಪಡೆದ ಸಂಸ್ಥೆಗಳನ್ನು ಆರ್​ಎಫ್​ಪಿ ಮುಖಾಂತರ ಅರ್ಜಿ ಕರೆದು, ಸಂಸ್ಥೆಗಳು ಹೊಂದಿರುವ ಪರವಾನಿಗೆಯನ್ನು ತಾಂತ್ರಿಕವಾಗಿ ಮೌಲ್ಯಮಾಪನಗೊಳಿಸಿ ಅರ್ಹಗೊಂಡ ಸಂಸ್ಥೆಗಳನ್ನು ಎಂಪಾನೆಲ್ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಪರವಾನಿಗೆಯನ್ನು ಹೊಂದಿರುವ 24 ಸಂಸ್ಥೆಗಳನ್ನು ಎಂಪಾನೆಲ್​ಗೊಳಿಸಲಾಗಿರುತ್ತದೆ.

ಜಿಲ್ಲೆಗಳಿಗೆ ನೀಡಿದ ಕ್ರಿಯಾ ಯೋಜನೆ ಪ್ರಕಾರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಎಂಪಾನೆಲ್ ಮಾಡಿದ ಯಾವುದಾದರೂ ಸಂಸ್ಥೆಗಳಿಗೆ ಟಾರ್ಪಾಲಿನ್ ಸರಬರಾಜು ಆದೇಶ ನೀಡುವ ಮುನ್ನ ಮತ್ತೊಮ್ಮೆ ಪರವಾನಿಗೆಯನ್ನು ಹೊಂದಿರುವ ಬಗ್ಗೆ ಮತ್ತು ಪರವಾನಿಗೆಯ ಸಿಂದುತ್ವವನ್ನು ಪರಿಶೀಲನೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಓದಿ: ರಿಲ್ಯಾಕ್ಸ್ ಮೂಡಲ್ಲಿ ಸಿಎಂ.. 83 ಸಿನಿಮಾ ವೀಕ್ಷಿಸಿದ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.