ಬೆಂಗಳೂರು : ಏಪ್ರಿಲ್-ಮೇ ತಿಂಗಳಲ್ಲಿ ನೀಡಿದಂತೆ ನವೆಂಬರ್ ವರೆಗೂ ಉಚಿತ ಪಡಿತರ ನೀಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.
ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೂ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ನವೆಂಬರ್ ವರೆಗೂ ಪಡಿತರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ ಎಂದರು.
ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪನವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅಕ್ಕಿ ಮತ್ತಿತರ ಪಡಿತರ ಈಗಾಗಲೇ ದಾಸ್ತಾನು ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದರು.