ETV Bharat / state

ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ - safai karamcharis

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.

distribution of two wheelers to safai karamcharis
ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ
author img

By

Published : Sep 17, 2022, 9:36 AM IST

ಬೆಂಗಳೂರು: ದ್ವಿಚಕ್ರ ವಾಹನಗಳ ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆಯಾಗಿದೆ. ಒಟ್ಟು 600 ಜನರಿಗೆ ವಾಹನ ಒದಗಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 400 ಜನರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.

ಇದನ್ನೂ ಓದಿ: ಪೌರಕಾರ್ಮಿಕರಿಗೆ ಸಿಗದ ಸೌಲಭ್ಯ: ಮಹದೇಶ್ವರ ಬೆಟ್ಟ ಪ್ರಾಧಿಕಾರ, ನಗರಸಭೆ ಅಧಿಕಾರಿಗಳ ವಿರುದ್ಧ ಕೋಟೆ ಶಿವಣ್ಣ ಕಿಡಿ..!

ಸಫಾಯಿ ಕರ್ಮಚಾರಿಗಳಿಗೂ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬುವ, ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬದುಕನ್ನು ನಿರಾಳ ಮಾಡುವ ಅವಶ್ಯಕತೆ ಇದೆ. ಅವರು ಮಾಡುತ್ತಿರುವ ಕೆಲಸ ಅತ್ಯಂತ ಪ್ರಮುಖವಾದದ್ದು. ನಾವು ಸೃಷ್ಟಿ ಮಾಡುವ ಕಸವನ್ನು ಪ್ರತಿನಿತ್ಯ ನಿರಂತರವಾಗಿ ದಣಿವಿಲ್ಲದೆ ಮಾಡುತ್ತಿದ್ದಾರೆ. ಆ ಕಾಯಕವನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮ ಇದಾಗಿದೆ ಎಂದರು.

ವಿದೇಶದಲ್ಲಿ ಕರ್ಮಚಾರಿಗಳು ಕಾರುಗಳಲ್ಲಿ ಓಡಾಡುವುದನ್ನು ಕೇಳಿದ್ದೆವು. ಈಗ ಇದು ನಮ್ಮ ದೇಶದಲ್ಲಿಯೂ ಆಗುತ್ತಿದೆ. ಈಗ ಸ್ಕೂಟರ್​ನಲ್ಲಿ ಓಡಾಡುವಂತಾಗಿದ್ದು, ಬರುವ ದಿನಗಳಲ್ಲಿ ಅವರಿಗೆ ಕಾರುಗಳನ್ನು ಒದಾಗಿಸುವಂತಾಗುವ ವಿಶ್ವಾಸವಿದೆ ಎಂದರು.

ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ

ಇದನ್ನೂ ಓದಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಂತ ಹಂತವಾಗಿ ಸರ್ಕಾರ ಈಡೇರಿಸುತ್ತದೆ: ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ

ಕರ್ಮಚಾರಿಗಳ ಎಲ್ಲಾ ವಿಚಾರಗಳಿಗೆ ಸರ್ಕಾರ ಸ್ಪಂದಿಸುತ್ತಿದೆ. ವಾಹನಗಳಿಗೆ ಬಾಕ್ಸ್ ಜೋಡಿಸಲು ಸೂಚಿಸಿದ್ದು, ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಪ್ರತಿ ಕ್ಷೇತ್ರಕ್ಕೆ ಬಾಕ್ಸ್ ಉಳ್ಳ 100 ಸ್ಕೂಟರ್​ಗಳನ್ನು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಒದಗಿಸಲು ತೀರ್ಮಾನಿಸಿ ಆದೇಶಿಸಲಾಗಿದೆ. ಇದರಿಂದ ಸುಮಾರು 25 ಸಾವಿರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುಕೂಲವಾಗುತ್ತದೆ. ಸರ್ಕಾರ ಹಂತ ಹಂತವಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕಾರ್ಯಕ್ರಮ ರೂಪಿಸುತ್ತಿದೆ ಎಂದರು.

ಇದೊಂದು ಬಡವರ, ದುಡಿಯುವ ವರ್ಗದ ಪರವಾದ ಸರ್ಕಾರ. ಸಾಮಾಜಿಕ ನ್ಯಾಯ ಅನ್ನುವುದು ಕೇವಲ ಮಾತಿನಲ್ಲಿ ಅಲ್ಲದೆ ಕೃತಿಯಲ್ಲಿ ಮಾಡಿ ತೋರಿಸುತ್ತಿರುವ ಸರ್ಕಾರ ಎಂದು ಮುಖ್ಯಮಂತ್ರಿಗಳು ಹೇಳಿದರು.

ಇದನ್ನೂ ಓದಿ: ಡ್ರೀಮ್​-11ನಲ್ಲಿ 1 ಕೋಟಿ ರೂ. ಗೆದ್ದಿದ್ದರೂ ಸಫಾಯಿ ಕರ್ಮಚಾರಿ ಕೆಲಸ ಬಿಡಲೊಪ್ಪದ ಟಿಂಕು!

ಈ ವೇಳೆ ಸಚಿವ ಗೋವಿಂದ ಕಾರಜೋಳ, ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ಸಫಾಯಿ ಕರ್ಮಚಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.