ETV Bharat / state

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ.. ಸ್ಥಳೀಯ ಶಾಸಕರಿಗೆ ಮಾಹಿತಿ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕರ ಆಕ್ಷೇಪ - ಈಟಿವಿ ಭಾರತ್​ ಕನ್ನಡ ನ್ಯೂಸ್

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಅಸಮಾಧಾನ ಹೊರಹಾಕಿದರು.

ವಿಧಾನಸಭೆ
ವಿಧಾನಸಭೆ
author img

By

Published : Jul 10, 2023, 10:53 PM IST

ಬೆಂಗಳೂರು : ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡುತ್ತಿಲ್ಲ ಎಂದು ವಿಧಾನಸಭೆಯಲ್ಲಿ ಇಂದು ಆಕ್ಷೇಪ ವ್ಯಕ್ತ ಪಡಿಸಿದರು. ಪ್ರಶ್ನೋತ್ತರ ವೇಳೆ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಕಡಲ ಕೊರೆತದ ಬಗ್ಗೆ ಪ್ರಶ್ನೆ ಮಾಡಿದರು. ಭಾರಿ ಮಳೆಯಿಂದಾಗಿ ಕಡಲ ಕೊರೆತ ಹೆಚ್ಚಾಗಿದೆ. ಮೀನುಗಾರರು ಮತ್ತು ಸ್ಥಳೀಯ ನಿವಾಸಿಗಳು ಆಂತಕದಲ್ಲಿದ್ದಾರೆಂದು ಹೇಳಿದರು.

ಬಹಳ ದಿನಗಳ ಬಳಿಕ ಮೀನುಗಾರರ ಸಮಸ್ಯೆಯನ್ನು ಅರಿತಿರುವವರು ಇಲಾಖೆಯ ಸಚಿವರಾಗಿದ್ದಾರೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ಸಚಿವರಾಗಿರುವ ಮಂಕಾಳ ವೈದ್ಯ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಕೂಡ ಭೇಟಿ ನೀಡಿದ ವೇಳೆ, ಇಲ್ಲಿಯ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡುವುದಿಲ್ಲ ಎಂದು ಎರಡೂ ಜಿಲ್ಲೆಗಳ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ : ಮೃತ ಮೀನುಗಾರರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ: ಸಚಿವ ಮಂಕಾಳು ವೈದ್ಯ

ಈ ವೇಳೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಎದ್ದು ನಿಂತು ಉಡುಪಿ ಜಿಲ್ಲೆಯಲ್ಲಿ 5ಕ್ಕೆ 5 ಕ್ಷೇತ್ರದಲ್ಲೂ ಬಿಜೆಪಿ ಗೆದ್ದಿದೆ. ಮಂಗಳೂರಿನಲ್ಲೂ ಬಿಜೆಪಿ ಶಾಸಕರು ಗೆದ್ದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಕ್ಷೇತ್ರಕ್ಕೆ ಬಂದಾಗ ಮಾಹಿತಿ ನೀಡದೇ ಇದ್ದರೆ ನಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಅಸಮಾಧಾನ ಹೊರಹಾಕಿದರು. ಈ ವೇಳೆ ಸಭಾಧ್ಯಕ್ಷ ಯು.ಟಿ ಖಾದರ್ ಕಡಲ ಕೊರೆತಕ್ಕೆ ಶಾಶ್ವತ ಮತ್ತು ತುರ್ತು ಪರಿಹಾರವನ್ನು ಕೈಗೊಳ್ಳಲು ಸೂಚನೆ ನೀಡಿದರು.

ಕಳದ ದಿನಗಳಿಂದ ಕರಾವಳಿ ಭಾಗದಲ್ಲಿ ಕಡಲ ಕೊರೆತ ಹೆಚ್ಚಾಗಿದೆ. ಮುಂಗಾರು ವೇಳೆ ಕಡಲ ಕೊರೆತ ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮೀನುಗಾರರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಡಲ ಕೊರೆತ ಆಗದಂತೆ ಕ್ರಮ ವಹಿಸುತ್ತೇವೆ. 300 ಕಿ.ಮೀ ದೂರ ಕಡಲ ವ್ಯಾಪ್ತಿ ಇದ್ದು, ಎಲ್ಲಿ ಹೆಚ್ಚು ಕಡಲ ಕೊರೆತ ಇದೆಯೋ ಅದನ್ನು ಗುರುತಿಸುವ ಕೆಲಸ ಆಗಿದೆ. ಕಾರವಾರ, ಮಲ್ಪೆ, ಬಂದರು ಅಭಿವೃದ್ದಿ ಕಾರ್ಯ ಅರ್ಧಕ್ಕೆ ನಿಂತಿದೆ. ಅರ್ಧ ನಿಂತಿರುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಕೆಲಸವನ್ನು ಮೊದಲು ಮಾಡಲಾಗುವುದು ಎಂದು ಕಳೆದ ತಿಂಗಳು ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ತಿಳಿಸಿದ್ದರು.

ಇದನ್ನೂ ಓದಿ : 'ದೇಶದ ಕಾನೂನೇ ಸರಿಯಿಲ್ಲ, ಸಾಮಾಜಿಕ ಜಾಲತಾಣ ನಿಂದಕರ ವಿರುದ್ಧ ಕೇಸು ಕೊಟ್ಟರೂ ಪ್ರಯೋಜನವಾಗುತ್ತಿಲ್ಲ': ಸಚಿವ ಮಂಕಾಳು ವೈದ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.