ಬೆಂಗಳೂರು : ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಾರದಲ್ಲಿ ಕನಿಷ್ಠ ಒಂದು ದಿನ ಸಭೆ ನಡೆಸುವಂತೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಆದೇಶಿಸಿದ್ದಾರೆ.
ಕೋವಿಡ್ -19 ರ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನ ಕರ್ಫ್ಯೂ ಹೇರಿದ್ದು, ಈ ಸಂದರ್ಭದಲ್ಲಿ ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅಗ್ರಿವಾರ್ ರೂಮ್ ಅನ್ನು ಸೇತುವೆವಂತೆ ಕಾರ್ಯನಿರ್ವಹಿಸಲು ಆರಂಭಿಸಲಾಗಿದೆ. ಸರ್ಕಾರದ ಕರ್ಫ್ಯೂ ಮಾರ್ಗಸೂಚಿಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ( outside Containment Zone ) ವಿನಾಯಿತಿ ನೀಡಲಾಗಿದೆ .
ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಗಳಲ್ಲಿ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಗೊಂದಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಲಹೆ ಮಾರ್ಗದರ್ಶನ ನೀಡಬೇಕು. ರೈತರು ಕೋವಿಡ್ -19 ನಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕೇಳಬಹುದಾದ ಪ್ರಶ್ನೆಗಳಿಗೆ ಸೂಕ್ತ ಸಲಹೆ ನೀಡಲು ಸೂಚಿಸಿದ್ದಾರೆ.